2024 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ
ಬಳ್ಳಾರಿ,ಜೂ.11: ಕರ್ನಾಟಕ ಜಾನಪದ ಅಕಾಡೆಮಿಯು 2024 ನೇ ಸಾಲಿನಲ್ಲಿ 01-01-2024 ರಿಂದ 31-12-2024 ರ ವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ವಿವಿಧ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.
ಲೇಖಕರು, ಪ್ರಕಾಶಕರು, ಸಂಪಾದಕರು ತಮ್ಮ 1 ಕೃತಿಯನ್ನು ರಿಜಿಸ್ಟಾçರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಜೂನ್ 30 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಬಹುದು.
ಈ ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 03 ಪ್ರತಿಗಳನ್ನು ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು.
*ವಿವಿಧ ಪ್ರಕಾರಗಳ ವಿವರ:*
ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ ಮತ್ತು ಜನಪದ ಸಂಕೀರ್ಣ.ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು, ಲೇಖಕರು ಪುನಃ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಕಳುಹಿಸಬಾರದಾಗಿ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಜೆ.ಸಿ ರಸ್ತೆಯ ಕನ್ನಡ ಭವನದ 2 ನೇ ಮಹಡಿಯ ಕರ್ನಾಟಕ ಜಾನಪದ ಅಕಾಡೆಮಿ ಕಚೇರಿ ಅಥವಾ ದೂ.080- 22215509 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.