Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಟಿಟಿಸಿ: ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜೂ.18 ಜಿಲ್ಲೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯ ಬಹುಕೌಶಾಲ್ಯಾಭಿವೃದ್ದಿ ಕೇಂದ್ರವು ನೂತನವಾಗಿ ಪ್ರಾರಂಭವಾಗಿದ್ದು, ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹತ್ತನೇ ತರಗತಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಯುವಕರಿಗೆ ‘ಟೂಲರೂಮ್ ಮಶಿನಿಸ್ಟ್’ ತಾಂತ್ರಿಕ ವೃತ್ತಿ ತರಬೇತಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ  ಉಚಿತ ತರಬೇತಿ ನೀಡಲಾಗುತ್ತದೆ.

ತರಬೇತಿ ಹೊಂದಿದ ಅಭ್ಯರ್ಥಿಗಳಿಗೆ ಕೈಗಾರಿಕೆಗಳಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಒಂದೇ ಕೋರ್ಸಿನಲ್ಲಿ ಟರ್ನರ್, ಮಿಲ್ಲರ್, ಗ್ರೆöÊಂಡರ್, ಸಿಎನ್‌ಸಿ, ಕ್ಯಾಡ್-ಕ್ಯಾಮ್ ಮತ್ತು ಟೂಲ್ ಆಂಡ್ ಡೈ ಮೇಕಿಂಗ್ ಟ್ರೇಡ್‌ಗಳಲ್ಲಿ ಆನ್ ದಿ ಜಾಬ್ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶಗಳು ದೊರಕುತ್ತವೆ. ಜೊತೆಗೆ ಅಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯ ಹಾಗೂ ಉದ್ಯೋಗ ಕೌಶಲ್ಯಗಳನ್ನು ಕಲಿಸಲಾಗುತ್ತದೆ.

ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ತರಬೇತಿ ಸೌಲಭ್ಯಗಳನ್ನು ಅಳವಡಿಸಿಕೊಂಡಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ಶಿಕ್ಷಕರನ್ನು ಹೊಂದಿದೆ. ತರಬೇತಿಯ ನಂತರ ವಿದ್ಯಾರ್ಥಿಗಳಿಗೆ ಟೂಲಿಂಗ್, ವಿಮಾನ ತಯಾರಿಕೆ, ಮತ್ತು ಅಟೊಮೊಬೈಲ್ ವಲಯಗಳ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಿ  ಕೊಡಲಾಗುವುದು.

ಸರ್ಕಾರದ ವಿವಿಧ ಯೋಜನೆಯಡಿ “ಮೆಕ್ಯಾನಿಕಲ್–ಕ್ಯಾಡ್/ಕಾಮ್”, “ಎಲೆಕ್ಟಾçನಿಕ್ಸ್- ಅಟೋಮೇಶನ್ ಮನೆ/ಕೈಗಾರಿಕೆ, ಪಿ.ಎಲ್.ಸಿ ಪ್ರೋಗ್ರಾಮಿಂಗ್,  ಅಡ್ವಾನ್ಸ್ ಹೈಡ್ರಾಲಿಕ್ಸ್ ಮತ್ತು ನ್ಯೂಮ್ಯಾಟಿಕ್ಸ್”, “ಎಲೆಕ್ಟಿçಕಲ್- ಮನೆ/ಕೈಗಾರಿಕೆ ಇನ್ಸಾ÷್ಟಲೇಷನ್,  ಸಿಕ್ಯಾಡ್  ಮತ್ತು ಕಂಪ್ಯೂಟರ್ ಸೈನ್ಸ್ - ಕಂಪ್ಯೂಟರ್  ಅಪ್ಲಿಕೇಷನ್ ವಿಭಾಗದ ಉಚಿತ ಮತ್ತು ಪಾವತಿ ತಾಂತ್ರಿಕ ಕೌಶಲ್ಯ ಅಲ್ಪಾವಧಿ ತರಬೇತಿಗಳನ್ನು ಪ್ರಾರಂಭಿಸಲಾಗುತ್ತಿದೆ.

ಕನಿಷ್ಠ 8ನೇ ತರಗತಿ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೋಮಾ, ಬಿ.ಇ ಉತ್ತೀರ್ಣರಾದ 16 ರಿಂದ 35 ವಯೋಮಿತಿಯೊಳಗಿನ ಅಭ್ಯರ್ಥಿಗಳು ತರಬೇತಿ ಪಡೆಯಲು ಅರ್ಹರು. ತರಬೇತಿ ಪಡೆಯಲು ಆದಾಯದ ಮಿತಿ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್ ನ ಐಶ್ವರ್ಯ ಕಾಲೋನಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಐ.ಟಿ.ಐ. ಕ್ಯಾಂಪಸ್) ಅಥವಾ ಮೊ.9972320076, 9620057086 ಗೆ ಸಂಪರ್ಕಿಸಬಹುದು ಎಂದು ಜಿಟಿಟಿಸಿಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ