Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

16 ರಂದು ಅಡುಗೆ ಸ್ಪರ್ಧೆ; ನೋಂದಾಯಿಸಿಕೊಳ್ಳಲು ಆಹ್ವಾನ


ಬಳ್ಳಾರಿ,ಅ.06: ಬಳ್ಳಾರಿ ತಾಲ್ಲೂಕಿನ ಹಗರಿಯ ಐಸಿಏಆರ್ – ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ವಿಶ್ವ ಆಹಾರ ದಿನ ಅಂಗವಾಗಿ “ಪರಂಪರೆಯ ತಿನಿಸುಗಳಲ್ಲಿ ಪೌಷ್ಟಿಕ ನವೀನತೆ” ಎಂಬ ವಿಷಯದಡಿ ಅಕ್ಟೋಬರ್ 16 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಕೇಂದ್ರದ ಆವರಣದಲ್ಲಿ ಅಡುಗೆ ಸ್ಪರ್ಧೆ ಆಯೋಜಿಸಲಾಗಿದ್ದು, ಅರ್ಹರು ಭಾಗವಹಿಸಲು ನೋಂದಾಯಿಸಿಕೊಳ್ಳಬಹುದು.

ಜಿಲ್ಲೆಯ ಪರಂಪರೆಯ ತಿನಿಸುಗಳ ಮೂಲಕ ಪೋಷಕಾಂಶಯುತ ಮತ್ತು ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸುವುದು ಮುಖ್ಯ ಉದ್ದೇಶವಾಗಿದೆ. ಭಾಗವಹಿಸುವವರು ತಮ್ಮ ಮನೆಯಲ್ಲೇ ಆಹಾರ ತಿನಿಸು ತಯಾರಿಸಿ, ಸಿದ್ಧವಾದ ತಿನಿಸನ್ನು ನಿಗದಿತ ದಿನದಂದು ಇದೇ ಕಚೇರಿಗೆ ತರಬೇಕು.

30 ಮಂದಿ ಮಾತ್ರ ಪಾಲ್ಗೊಳ್ಳಲು ಅವಕಾಶವಿದ್ದು, ಮೊದಲು ನೋಂದಾಯಿಸುವವರಿಗೆ ಆದ್ಯತೆ ನೀಡಲಾಗುತ್ತದೆ. ರೈತ ಮಹಿಳೆಯರು, ಸ್ವಯಂಸಹಾಯ ಗುಂಪು ಸದಸ್ಯರು, ವಿದ್ಯಾರ್ಥಿಗಳು ಮತ್ತು ಗ್ರಾಮೀಣ ಯುವಕರು ಭಾಗವಹಿಸಬಹುದಾಗಿದೆ.

ಒಂದು ತಿನಿಸು ಮಾತ್ರ ತಯಾರಿಸಬೇಕು, ಸ್ಥಳೀಯ ಪದಾರ್ಥಗಳನ್ನು ಬಳಸಬೇಕು. ಆಹಾರವು ಪೋಷಕಾಂಶಯುತವಾಗಿರಬೇಕು; ಹೆಚ್ಚು ಎಣ್ಣೆ, ಮೈದ ಪದಾರ್ಥಗಳ ಬಳಕೆ ತಪ್ಪಿಸಬೇಕು.

ಪ್ರದರ್ಶಿಸಲು ಸಿದ್ಧವಾದ ತಿನಿಸು ಸ್ವಚ್ಛವಾದ ಪಾತ್ರೆಯಲ್ಲಿ ತರಬೇಕು. ಪ್ರದರ್ಶನ ವೇಳೆಯಲ್ಲಿ ತಿನಿಸಿನ ಹೆಸರು, ಬಳಸಿದ ಪದಾರ್ಥಗಳು, ಪೋಷಕಾಂಶದ ಮಹತ್ವ ಮಾಹಿತಿ ನೀಡಬೇಕು. ಪೋಷಕ ಮೌಲ್ಯ, ರುಚಿ, ಪ್ರದರ್ಶನ ಮತ್ತು ಸ್ಥಳೀಯ ಪದಾರ್ಥಗಳ ಬಳಕೆ ಪ್ರಮಾಣಿಸಿ ವಿಜೇತರಿಗೆ ಬಹುಮಾನ ಮತ್ತು ಪ್ರಮಾಣಪತ್ರ ನೀಡಲಾಗುತ್ತದೆ.
ಆಸಕ್ತರು ತಮ್ಮ ಹೆಸರು, ಗ್ರಾಮದ ಹೆಸರು ಮತ್ತು ತಿನಿಸಿನ ಶೀರ್ಷಿಕೆಯನ್ನು ಕೆಳಗಿನ ವಿಳಾಸಕ್ಕೆ ಅಥವಾ ದೂರವಾಣಿಯಲ್ಲಿ ನೋಂದಾಯಿಸಬಹುದು. ನೋಂದಾಯಿಸಿಕೊಳ್ಳಲು ಅಕ್ಟೋಬರ್ 13 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ತಾಲ್ಲೂಕಿನ ಹಗರಿಯ ಐಸಿಏಆರ್ – ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ (ಗೃಹ ವಿಜ್ಞಾನಿ) ಅವರ ಮೊ.9535556509 ಗೆ ಸಂಪರ್ಕಿಸಬಹುದು ಎಂದು ಕೇಂದ್ರದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ