LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಅಂಜಲಿ ಅಂಬಿಗೇರಹತ್ಯೆ ಪ್ರಕರಣ: ಸಚಿವ ಸಂತೋಷ ಲಾಡ್  ಬೇಜವಾಬ್ದಾರಿ ಹೇಳಿಕೆ

ಹುಬ್ಬಳ್ಳಿ, ಮೇ 18: ಅಂಜಲಿ ಅಂಬಿಗೇರಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, “ನಿತ್ಯ ನಡೆಯುವ ಕೆಲಸಗಳು ನಮಗೆ ಗೊತ್ತಾಗುವುದಿಲ್ಲ” ಎಂದು ಹೇಳುವ ಮೂಲಕ ಕಾರ್ಮಿಕ ಸಚಿವ ಸಂತೋಷ ಲಾಡ್  ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯ  ವಿರಾಪುರ ಓಣಿಯಲ್ಲಿರುವ ಕೊಲೆಯಾದ ಅಂಜಲಿ ಅಂಬಿಗೇರ (21) ಮನೆಗೆ ಸಚಿವ ಸಂತೋಷ ಲಾಡ್​ ಮತ್ತು ಶಾಸಕ ಪ್ರಸಾದ್​ ಅಬ್ಬಯ್ಯ ಇಂದು (ಮೇ 18) ನೀಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ, ಸಚಿವ ಸಂತೋಷ್​ ಲಾಡ್​, ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಬೇಕು ಅಂತ ಮನವಿ ಮಾಡುತ್ತೇನೆ ಎಂದರು.

ನೇಹಾ ಹತ್ಯೆ ನಡೆದ ನಂತರ ಇನ್ನೊಂದು ಘಟನೆ ನಡೆದಿದೆ. ಸಮಾಜದಲ್ಲಿ ಇದು ಒಳ್ಳೆಯದಲ್ಲ. ಅದರಲ್ಲೂ ಹುಬ್ಬಳ್ಳಿ-ಧಾರವಾಡದಲ್ಲಂತೂ ಒಳ್ಳೆಯದಲ್ಲ. ಅಹಿತಕರ ಘಟನೆಗಳು ನಡೆದಾಗ ತಕ್ಷಣಕ್ಕೆ ಕಡಿವಾಣ ಹಾಕುವುದು ಪೋಲಿಸರ ಕರ್ತವ್ಯ. ಅಹಿತಕರ ಚಟುವಟಿಕೆಗಳಲ್ಲಿ ಯುವಕರು ಬಲಿಯಾಗ್ತಿದ್ದಾರೆ. ಇಂಥ ಯುವಕರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಪ್ರಕರಣವನ್ನು ಸಿಐಡಿಗೆ ನೀಡಬೇಕು ಅಂತ ಸರ್ಕಾರಕ್ಕೆ ನಾನು ಮನವಿ ಮಾಡುತ್ತೇನೆ ಎಂದು ಹೇಳಿದರು.

ಆರೋಪಿ ವಿಶ್ವನ ವಿರುದ್ಧ ಅಂಜಲಿ ಪೋಷಕರು ಮೊದಲೆ ದೂರು ಕೊಟ್ಟಿದ್ದಾಗಿ ಕುಟುಂಬಸ್ಥರು ಹೇಳಿದ್ದಾರೆ. ಹೀಗಾಗಿ ಈಗಾಗಲೆ ಕ್ರಮ ಆಗಿದೆ. ಈಗಾಗಲೆ ಅಂಜಲಿ ಹತ್ಯೆ ತನಿಖೆ ನಡೆಯುತ್ತದೆ. ಗೃಹ ಸಚಿವರು ಬಂದು ಈ ಕುರಿತು ಮಾತಾನಾಡುತ್ತಾರೆ. ಇನ್ಮುಂದೆ ಇಂತಹ ಅಹಿತಕರ ಘಟನೆ ನಡೆದರೆ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಮಾತನಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್