LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅನುಕರಣೆ ಸಲ್ಲ, ನಮ್ಮ ಪರಂಪರೆಯೇ ಎಲ್ಲ: ಈಶ್ವರ ಖಂಡ್ರೆ

ಬೇಲೂರು, ಮೇ 13: ಪಾಶ್ಚತ್ಯರ ಅನುಕರಣೆಯನ್ನು ಬಿಟ್ಟು, ನಮ್ಮ ಪ್ರಾಚೀನ ಶ್ರೀಮಂತ ಪರಂಪರೆಯನ್ನು ಇಂದಿನ ಯುವಜನರು ಎತ್ತಿ ಹಿಡಿಯಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದ್ದಾರೆ.

ಹಳೆಬೀಡು ಹೋಬಳಿ, ಗೋಣಿಸೋಮನಹಳ್ಳಿಯ ಶ್ರೀ ಹುಲಿಕಲ್ಲು ವೀರಭದ್ರೇಶ್ವರಸ್ವಾಮಿ ದೇವಸ್ಥಾನದ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರುನಾಡನ್ನಾಳಿದ ಹೊಯ್ಸಳರು ಶಿಲೆಯಲ್ಲಿ ಕಲೆಯನ್ನು ಅರಳಿಸಿದ್ದಾರೆ. ಕಲಾಪರಂಪರೆಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಕರ್ನಾಟಕದ ಪರಂಪರೆ ಶ್ರೀಮಂತವಾಗಿದ್ದು, ಇದನ್ನು ಇಂದಿನ ಯುವಜನರಿಗೆ ತಿಳಿಹೇಳುವ ಅಗತ್ಯವಿದೆ ಎಂದರು.
ಸರ್ವರಿಗೂ ಸಮಪಾಲು, ಸಮಸಮಾಜದ ಕಲ್ಪನೆಯನ್ನು ಬಸವಾದಿ ಶರಣರು 12ನೇ ಶತಮಾನದಲ್ಲೇ ಪ್ರತಿಪಾದಿಸಿದರು, ಸಾಮಾಜಿಕ ಬದಲಾವಣೆಗೆ ಅವರು ನೀಡಿದ ಕೊಡುಗೆ ಅನುಪಮವಾದ್ದು ಎಂದ ಅವರು ಆಧುನಿಕ ಕರ್ನಾಟಕದ ಪ್ರಗತಿಗೆ ವೀರಶೈವ ಲಿಂಗಾಯತ ಮಠ ಮಾನ್ಯಗಳು ನೀಡಿರುವ ಕೊಡುಗೆಯೂ ಅನುಪಮವಾದ್ದು ಎಂದರು.

ಯಾವುದೇ ಜಾತಿ, ಧರ್ಮ, ಜನಾಂಗದ ಭೇದವಿಲ್ಲದೆ ಸರ್ವರಿಗೂ ಆಶ್ರಯ, ಅನ್ನ, ಅಕ್ಷರವೆಂಬ ತ್ರಿವಿಧ ದಾಸೋಹ ಮಾಡುತ್ತಿರುವ ನಮ್ಮ ಮಠ ಮಾನ್ಯಗಳು ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿವೆ ಎಂದರು.

ಸಂಸ್ಕೃತಿ ಬೆಳೆಸಲು ಕರೆ:ಮಕ್ಕಳಿಗೆ ಸಂಸ್ಕೃತಿಯ ಪರಿಚಯ ಮಾಡಿಸಬೇಕು. ಇಂದು ಯುವಜನರು ಮದ್ಯ, ಮಾದಕ ದ್ರವ್ಯ ವ್ಯಸನಿಗಳಾಗುತ್ತಿದ್ದಾರೆ. ತಾಯಂದಿರು ಮಕ್ಕಳಿಗೆ ಬಾಲ್ಯದಿಂದಲೇ  ವಚನಗಳನ್ನು ಕಲಿಸಿದರೆ ಜೀವನದರ್ಶನ ಆಗುತ್ತದೆ. ಮಕ್ಕಳ ಬದುಕು ಹಸನಾಗುತ್ತದೆ ಎಂದರು.

ಸುಂದರ ಬದುಕಿಗೆ ಸೋಪಾನ ಅರಣ್ಯ: ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಪ್ರತಿಪಾದಿಸಿದ ಈಶ್ವರ ಖಂಡ್ರೆ, ಕಾಡಿದ್ದರೆ ಮಳೆ ಆಗುತ್ತದೆ, ಕಾಡಿದ್ದರೆ ಹಸಿರು ಹೊದಿಕೆ ಹೆಚ್ಚುತ್ತದೆ, ಈ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಕಾಲಘಟ್ಟದಲ್ಲಿ ಸುಂದರ ಬದುಕಿಗೆ ಸೋಪಾನವಾಗುತ್ತದೆ ಎಂದರು.

ನಮ್ಮ ಪೂರ್ವಿಕರು ಬೆಟ್ಟ, ಗುಡ್ಡಗಳ ಮೇಲೆ ದೇವಾಲಯ ನಿರ್ಮಿಸುವ ಮೂಲಕ ಪ್ರಕೃತಿ ಪರಿಸರ ಉಳಿಸಿದ್ದಾರೆ. ಬೆಟ್ಟದ ಮೇಲೆ ದೇವಾಲಯ ಇರುವ ಕಾರಣ ಆ ಗುಡ್ಡಗಳನ್ನು, ಬೆಟ್ಟಗಳನ್ನು ಯಾರೂ ನಾಶ ಮಾಡಿಲ್ಲ. ನಮ್ಮ ಪೂರ್ವಿಕರ ದೂರದರ್ಶಿತ್ವ ಅಮೂಲ್ಯವಾದ್ದು ಎಂದರು.

ತಾವು ಅರಣ್ಯ ಸಚಿವರಾದ ತರುವಾಯ 7ನೇ ಬಾರಿಗೆ ಹಾಸನ ಜಿಲ್ಲೆಗೆ ಬಂದಿದ್ದು, ಇಲ್ಲಿನ ಮಾನವ- ವನ್ಯಜೀವಿ ಸಂಘರ್ಷವನ್ನು ನಿಯಂತ್ರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸತ್ ಸದಸ್ಯ ಶ್ರೇಯಸ್ ಪಟೇಲ್, ಶಾಸಕ ಎಚ್.ಕೆ. ಸುರೇಶ್, ಮಾಜಿ ಶಾಸಕ ಲಿಂಗೇಶ್ ಮತ್ತಿತರರು ಪಾಲ್ಗೊಂಡಿದ್ದರು. ತಿಪಟೂರು ತಾಲೂಕು ಕೆರಗೋಡಿ ರಂಗಾಪುರದ ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮೀಜಿ, ಪುಷ್ಪಗಿರಿ ಮಹಾ ಸಂಸ್ಥಾನ, ಹಳೇಬೀಡಿನ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಮೊದಲಾದವರು ಸಾನ್ನಿಧ್ಯ ವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್