Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮದ ಹೆಸರಲ್ಲಿ ಆಂತಕ ಸೃಷ್ಟಿ :ಈಶ್ವರ ಖಂಡ್ರೆ  ವಿಷಾದ






♦ 700 ಕೋಟಿ ರೂ. ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ – ಈಶ್ವರ ಖಂಡ್ರೆ



ಹೊಳೆ ನರಸೀಪುರ: ವಿಶ್ವಗುರು ಬಸವಣ್ಣನವರು ದಯೆಯೇ ಧರ್ಮದ ಮೂಲವಯ್ಯ ಎಂದು ಹೇಳಿದ್ದರು. ಆದರೆ ಇಂದು ಧರ್ಮದ ಹೆಸರಲ್ಲಿ ಆಂತಕ ಸೃಷ್ಟಿಸುವ ಕಾರ್ಯವನ್ನು ಕೆಲವರು ಮಾಡುತ್ತಿದ್ದಾರೆ ಇದು ಆತಂಕದ ವಿಷಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಹಾಸನ ಜಿಲ್ಲೆ ಹೊಳೆ ನರಸೀಪುರದಲ್ಲಿಂದು ವೀರಶೈವ ಲಿಂಗಾಯತ ಸಮಾಜ ಆಯೋಜಿಸಿದ್ದ ಬಸವ ಜಯಂತಿ ಮತ್ತು ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮದ ಹೆಸರಲ್ಲಿ ಆತಂಕ ಸೃಷ್ಟಿಸುವವರ ಬಗ್ಗೆ  ಸಮಾಜ ಎಚ್ಚರದಿಂದ ಇರಬೇಕು ಎಂದರು.

ಜಗಜ್ಯೋತಿ ಬಸವೇಶ್ವರರು, ಶ್ರೀ ಶಿವಕುಮಾರ ಸ್ವಾಮೀಜಿಯವರಂತಹ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದ ಮಹಾ ಮಹಿಮರ ಜಯಂತಿ ಆಚರಣೆಯಿಂದ ಇಂದಿನ ಪೀಳಿಗೆಗೆ ಸ್ಫೂರ್ತಿ, ಚೈತನ್ಯ ಮೂಡುತ್ತದೆ ಎಂದರು. ಸಾಮಾಜಿಕ ಸಾಮರಸ್ಯ ಇಂದಿನ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.

 12ನೇ ಶತಮಾನದಲ್ಲಿ ಬಸವಣ್ಣನವರು ಸಾಮಾಜಿಕ ಕ್ರಾಂತಿಯನ್ನೇ ಮಾಡಿದರೆ, 20ನೇ ಶತಮಾನದಲ್ಲಿ ಸಮಾನತೆಯ ಸಂದೇಶ ಸಾರಿ ತ್ರಿವಿಧ ದಾಸೋಹದಿಂದ ಎಲ್ಲ ಸಮುದಾಯದವರಿಗೆ ಅನ್ನ, ಆಶ್ರಯ ಮತ್ತು ಅಕ್ಷರ ಕೊಟ್ಟವರು ಡಾ.ಶ್ರೀ.ಶ್ರೀ. ಶಿವಕುಮಾರ ಸ್ವಾಮೀಜಿ ಎಂದರು.

ವಿಶ್ವಗುರು ಬಸವಣ್ಣನವರು, ಕಾಯಕ, ಸಹಯೋಗ, ಸೋದರತ್ವದ ಬುನಾದಿಯ ಮೇಲೆ ಸುಂದರ ಸಮಾಜದ ನಿರ್ಮಾಣದ ಕನಸು ಕಂಡಿದ್ದರು. ಸರ್ವರಿಗೂ ಸಮಾನ ಅವಕಾಶ ಸಿಗಬೇಕು ಎಂಬ ಕನಸು ಕಂಡಿದ್ದರು ಎಂದರು.

ಸಕಲ ಜೀವಾತ್ಮರಿಗೂ ಲೇಸನ್ನೇ ಬಯಸುವುದು ಲಿಂಗಾಯತ ಸಮಾಜ. ಈ ಜಗತ್ತಿನಲ್ಲಿ ಹುಟ್ಟಿದ ಪ್ರತಿಯೊಂದು ಸಸ್ಯ, ಕೀಟ, ಪ್ರಾಣಿ, ಪಕ್ಷಿ ಎಲ್ಲರಿಗೂ ಬದುಕುವ ಹಕ್ಕಿದೆ. ನಾವು ಸಹಬಾಳ್ವೆಯಿಂದ ಜೀವನ ನಡೆಸುವುದನ್ನು ಕಲಿಯಬೇಕು ಎಂದರು.

ನಮ್ಮ ವಚನದಲ್ಲಿ ಅನುಭಾವ  ಇದೆ. ಇಂದಿನ ಮಕ್ಕಳಿಗೆ ನಮ್ಮ ತಾಯಂದಿರು ವಚನಗಳನ್ನು ಕಲಿಸಬೇಕು. ಇದು ಅವರಲ್ಲಿ ನೈತಿಕತೆ ಹೆಚ್ಚಿಸುತ್ತದೆ. ಭಾಷೆಯ ಪ್ರೌಢಿಮೆ ಬೆಳೆಸುತ್ತದೆ ಎಂದರು.

700 ಕೋಟಿ ರೂ. ವೆಚ್ಚದಲ್ಲಿ ಅನುಭವ ಮಂಟಪ:

ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಕಟ್ಟಿಕೊಟ್ಟಿದ್ದೇ ಬಸವಾದಿ ಶರಣರ 770 ಅಮರಗಣಂಗಳ ಅನುಭವ ಮಂಟಪ. ಇಲ್ಲಿ ಮಹಿಳೆಯರಿಗೂ ಸ್ಥಾನ ಮಾನ ಕಲ್ಪಿಸಲಾಗಿತ್ತು. 12ನೇ ಶತಮಾನದಲ್ಲೇ ನಮ್ಮ ಶರಣರು ಸಮಾನತೆಯನ್ನು ಕಾರ್ಯಗತ ಮಾಡಿದ್ದರು. ಈಗ ಬಸವ ಕಲ್ಯಾಣದಲ್ಲಿ 700 ಕೋಟಿ ರೂ. ವೆಚ್ಚದಲ್ಲಿ ಭವ್ಯ, ದಿವ್ಯ ಅನುಭವ ಮಂಟಪ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದೆ ಎಂಕಾದರು.

ಭಾಲ್ಕಿ ಹಿರೇಮಠದ ಪರಮಪೂಜ್ಯ ಚನ್ನಬಸವ ಪಟ್ಟದ್ದೇವರು ಆಧುನಿಕ ಅನುಭವ ಮಂಟಪದ ನಿರ್ಮಾಣಕ್ಕೆ ನಾಂದಿ ಹಾಡಿದ್ದರು. ಈ ಹಿಂದೆ 2013ರಿಂದ 2018ರ ಅವಧಿಯಲ್ಲಿ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರು ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ಸಮ್ಮತಿಸಿ ಹಣ ಬಿಡುಗಡೆ ಮಾಡಿದ್ದರು. ಇತ್ತೀಚೆಗೆ ಬೀದರ್ ಗೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇನ್ನೂ 400 ಕೋಟಿ ರೂ. ಅನುದಾನ ನೀಡಿ ಮುಂದಿನ ವರ್ಷದೊಳಗೆ ಈ ಅನುಭವ ಮಂಟಪ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ತೇಜೂರು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಮಠದ ಶ್ರೀ ಕಲ್ಯಾಣ ಸ್ವಾಮೀಜಿ, ಶ್ರೀ ರಾಜಾಪುರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ಮಲ್ಲದೇವರಪುರ ವಿರಕ್ತ ಮಠದ ಶ್ರೀ ಮಹಾಂತ ಬಸವಲಿಂಗ ಸ್ವಾಮೀಜಿ ಮತ್ತಿತರರು ಪಾಲ್ಗೊಂಡಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ