LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ; 78 ಜನರು ಮೃತ 329 ಮಂದಿ ಗಾಯ

ಜೆರುಸಲೇಂ, ಜೂನ್ 13: ಇರಾನ್ ಮೇಲೆ ಇಸ್ರೇಲ್ ಇಂದು ನಡೆಸಿದ ವೈಮಾನಿಕ ದಾಳಿಯಲ್ಲಿ 78 ಜನರು ಮೃತಪಟ್ಟಿದ್ದು, 329 ಮಂದಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರಲ್ಲಿ ಇರಾನ್‌ನ ಪರಮಾಣು ಇಂಧನ ಸಂಸ್ಥೆಯ ಮಾಜಿ ಮುಖ್ಯಸ್ಥ ಫೆರೆಡೌನ್ ಅಬ್ಬಾಸಿ ಸೇರಿದಂತೆ 6 ಪರಮಾಣು ವಿಜ್ಞಾನಿಗಳು ಸಹ ಸೇರಿದ್ದಾರೆ. ಟೆಹರಾನ್​ ಸೇರಿ ಹಲವೆಡೆ ಕ್ಷಿಪಣಿ​ ದಾಳಿ ನಡೆಸಿದ್ದ ಇಸ್ರೇಲ್ ‘ಸ್ಟ್ರೆಂತ್ ಆಫ್​ ಎ ಲಯನ್’ ಕಾರ್ಯಾಚರಣೆಯಡಿ ಕ್ಷಿಪಣಿ​ ದಾಳಿ ನಡೆಸಿತ್ತು. ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಜನರಲ್ ಅಮೀರ್ ಅಲಿ ಹಾಜಿಜಾದೆ ಹತ್ಯೆಯಾಗಿರುವುದನ್ನು ಇರಾನ್ ದೃಢಪಡಿಸಿದೆ.

ಇಸ್ರೇಲ್ ಇಂದು ಇರಾನ್‌ನಾದ್ಯಂತ ಸರಣಿ ವೈಮಾನಿಕ ದಾಳಿಗಳನ್ನು ನಡೆಸಿದ್ದು, ಪರಮಾಣು ಸೌಲಭ್ಯಗಳು ಮತ್ತು ಮಿಲಿಟರಿ ನಾಯಕತ್ವವನ್ನು ಕೇಂದ್ರೀಕರಿಸಿತ್ತು. ತನ್ನ ದಾಳಿಯ ಸಮಯದಲ್ಲಿ ಇಸ್ರೇಲ್ ಕೆಲವು ಪರಮಾಣು ವಿಜ್ಞಾನಿಗಳು ಮತ್ತು ಮಿಲಿಟರಿ ನಾಯಕರನ್ನು ಕೊಂದಿದೆ. ಇರಾನ್ ರಾತ್ರಿಯಿಡೀ ಇಸ್ರೇಲ್ ನಡೆಸಿದ ದಾಳಿಯಲ್ಲಿ ಜನರಲ್ ಅಮೀರ್ ಅಲಿ ಹಾಜಿಜಾದೆ ಸಾವನ್ನಪ್ಪಿದ್ದಾರೆ ಎಂದು ಇರಾನ್ ದೃಢಪಡಿಸಿದೆ ಎಂದು ಎಪಿ ವರದಿ ಮಾಡಿದೆ. ಇಂದು ಇಸ್ರೇಲ್ ಪ್ರಮುಖ ಇರಾನಿನ ಪರಮಾಣು ಮತ್ತು ಮಿಲಿಟರಿ ತಾಣಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿತ್ತು.

ಇಸ್ರೇಲ್ ದಾಳಿ ನಡೆದ ಕೆಲವು ಗಂಟೆಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್​ಗೆ ಇಸ್ರೇಲ್ ಜೊತೆ ಪರಮಾಣು ಒಪ್ಪಂದ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದಾರೆ ಮತ್ತು ಮಿಲಿಟರಿ ಕ್ರಮದ ಸಾಧ್ಯತೆಯ ಬಗ್ಗೆ ಎಚ್ಚರಿಸಿದ್ದಾರೆ. “ನಾನು ಇರಾನ್‌ಗೆ ಒಪ್ಪಂದ ಮಾಡಿಕೊಳ್ಳಲು ಇರುವ ಅವಕಾಶದ ಬಗ್ಗೆ ಹೇಳಿದ್ದೇನೆ. ಈ ಮೂಲಕ ಇನ್ನಷ್ಟು ಹತ್ಯಾಕಾಂಡವನ್ನು ನಿಲ್ಲಿಸಬಹುದು ಎಂದು ಸೂಚಿಸಿದ್ದೇನೆ” ಎಂದು ಟ್ರಂಪ್ ಟ್ರೂತ್ ಸೋಷಿಯಲ್‌ನಲ್ಲಿ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್