Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

“ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ” – ಎಸ್‌ಪಿ ಡಾ. ಸುಮನ್ ಡಿ. ಪೆನ್ನೆಕರ್

ಮುಸ್ಲಿಂ ಮುಖಂಡರೊಂದಿಗೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಹತ್ವದ ಶಾಂತಿ ಸಭೆ

ಬಳ್ಳಾರಿ, ಮೇ 27: ಮುಂಬರುವ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಶಾಂತಿಯುತ, ಸೌಹಾರ್ದಯುತ ಹಾಗೂ ಕಾನೂನುಬದ್ಧವಾಗಿ ಆಚರಿಸುವ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಹತ್ವದ ಶಾಂತಿ ಸಭೆಯನ್ನು ಆಯೋಜಿಸಲಾಯಿತು. ಸಭೆಯಲ್ಲಿ ಬಳ್ಳಾರಿ ವಲಯದ ಮಾನ್ಯ ಪೊಲೀಸ್ ಮಹಾನಿರೀಕ್ಷಕರು ಉಪಸ್ಥಿತರಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಮುಸ್ಲಿಂ ಮುಖಂಡರು, ಧಾರ್ಮಿಕ ನಾಯಕರು ಹಾಗೂ ಸಮಾಜದ ಗಣ್ಯರೊಂದಿಗೆ ಸಮಗ್ರ ಚರ್ಚೆ ನಡೆಸಲಾಯಿತು.
ಸಭೆಯ ನೇತೃತ್ವ ವಹಿಸಿದ್ದ ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಸುಮನ್ ಡಿ. ಪೆನ್ನೆಕರ್ ಅವರು ಮಾತನಾಡಿ, ಬಕ್ರೀದ್ ಹಬ್ಬವು ತ್ಯಾಗ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳ ಸಂಕೇತವಾಗಿದ್ದು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸುವ ರೀತಿಯಲ್ಲಿ ಆಚರಣೆ ನಡೆಯಬೇಕು ಎಂದು ಹೇಳಿದರು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳು, ಪ್ರಚೋದನಕಾರಿ ಸಂದೇಶಗಳು ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಈಗಾಗಲೇ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಎಸ್‌ಪಿ ತಿಳಿಸಿದರು. ಹಬ್ಬದ ಸಂದರ್ಭದಲ್ಲಿ ಮೆರವಣಿಗೆ, ಸಾರ್ವಜನಿಕ ಪ್ರಾರ್ಥನೆ ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನಡೆಯಬೇಕೆಂದು ಸೂಚನೆ ನೀಡಿದರು. ಯಾವುದೇ ಸಮಸ್ಯೆ ಅಥವಾ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ಮುಖಂಡರು ಕೂಡ ಪೊಲೀಸ್ ಇಲಾಖೆಯೊಂದಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ಸಮುದಾಯದ ಎಲ್ಲರೂ ಕೈಜೋಡಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ