LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸರ್ಕಾರ ಬೀಳಿಸುವುದು ಅಸಾಧ್ಯ: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು,11: ಸರ್ಕಾರ ಬೀಳಿಸುವುದು ಅಸಾಧ್ಯವಾದ ಮಾತು. ಬಿಜೆಪಿಯ ಶಾಸಕರೇ ನಮ್ಮ‌ ಜೊತೆ ಇದ್ದಾರೆ. ಜೆಡಿಎಸ್​​ನಲ್ಲಿರುವವರು ಅತಂತ್ರರಾಗಿದ್ದಾರೆ. ಲೀಡರ್ಸ್​ಗಳು ನಮ್ಮನ್ನು ಸೇರಿಸಿಕೊಳ್ಳಿ ಅಂತ ಕೇಳುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದರು.


ಸದಾಶಿವ ನಗರದ ನಿವಾಸದಲ್ಲಿ ಮಾತನಾಡಿದ ಅವರು, ಕೆಲವೇ ತಿಂಗಳುಗಳಲ್ಲಿ ಸರ್ಕಾರ ಬೀಳುತ್ತೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ರಾಜಕೀಯ ಹೇಳಿಕೆ ಅಷ್ಟೇ. ಈ ಸರ್ಕಾರ ಬೀಳಿಸಬೇಕಾದ್ರೆ 60 ಶಾಸಕರು ಬೇಕು. ಇಬ್ಬರಿಂದ ನಾಲ್ಕು ಶಾಸಕರನ್ನ ಕರೆದುಕೊಂಡು ಬರಲಿ. ಬಿಜೆಪಿಯ ಶಾಸಕರೇ ನಮ್ಮೊಂದಿಗಿದ್ದಾರೆ. ಜೆಡಿಎಸ್​ನವರು ಅತಂತ್ರರಾಗಿದ್ದಾರೆ ಎಂದು ತಿಳಿಸಿದರು.


ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೊಡ್ಡವರೇ ನಮ್ಮ ಹಿಂದೆ ಇದ್ದಾರೆ ಎಂಬ ದೇವರಾಜೇಗೌಡ ಹೇಳಿಕೆ‌ ವಿಚಾರವಾಗಿ ಪ್ರತಿಕ್ರಿಯಿಸಿ, ಈಗ ಎಸ್​​ಐಟಿ‌ ರಚನೆ ಆಗಿದೆ. ಸಚಿವನಾಗಿ ನಾನು ಏನನ್ನೂ ಮಾತನಾಡಲು ಬಯಸಲು ಒಪ್ಪಲ್ಲ. ಎಸ್​​ಐಟಿ ತನ್ನ ಕೆಲಸ ಮಾಡುತ್ತೆ ಎಂದರು.


ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಅಂತ ಹೆಚ್​ಡಿಕೆ ರಾಜ್ಯಪಾಲರ ಭೇಟಿ ವಿಚಾರವಾಗಿ ಮಾತನಾಡಿ, ಕ್ಲೀನ್ ಚೀಟ್ ಕೊಡೋಕಾ?. ವಾಷಿಂಗ್ ಮಷನ್​​ಗೆ ಹಾಕೋಕಾ? ಎಂದು ಲೇವಡಿ ಮಾಡಿದರು. ರಾಜ್ಯದಲ್ಲಿ ನಾವು ಕನಿಷ್ಠ 20 ಸ್ಥಾನ ಗೆಲ್ಲಲಿದ್ದೇವೆ. ಊಹೆ ಮಾಡಲಾರದಷ್ಟು ಅಂಡರ್ ಕರೆಂಟ್ ಆಗಿದೆ. ಮಹಿಳೆಯರು, ಬಡ ಕುಟುಂಬದವರು ಕಾಂಗ್ರೆಸ್​ಗೆ ಒಲವು ತೋರಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ನಾವು ಗೆಲ್ಲುತ್ತೇವೆ. ಒಂದು ಲಕ್ಷ ಲೀಡ್​​ನಲ್ಲಿ ನಾವು ಜಯ ಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್