Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎರಡು ವಿಭಿನ್ನ ಪ್ರೇಮ ಕಥೆಯ ಮತ್ತೆ ಮಳೆ ಹೊಯ್ಯುತ್ತಿದೆ ಇದು ಕೆ ಸದಾಶಿವ ಬರೆದ ಕಥೆ









      ತಂತ್ರಜ್ಞರನ್ನು ಹೊರತುಪಡಿಸಿ, ಕಲಾವಿದರೆಲ್ಲರೂ ಹೊಸಬರಾಗಿರುವ 'ಮತ್ತೆ ಮಳೆ ಹೊಯ್ಯುತ್ತಿದೆ' ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದೆ.

ಮೂರು ದಶಕಗಳಿಂದ ಸಹಾಯಕ ಕಲಾ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ತೊಡಗಿಸಿಕೊಂಡಿರುವ  ಗಂಗಾಧರ್ ಅವರ ನಿರ್ಮಾಣದ ಚಿತ್ರ ಇದಾಗಿದೆ.

     ಗಂಗಾಧರ್ ಅವರು

ಶ್ರೀ ಗವಿರಂಗನಾಥ ಸ್ವಾಮಿ ಪಿಕ್ಚರ‍್ಸ್ ಬ್ಯಾನರ್ ಅಡಿಯಲ್ಲಿ ಪತ್ನಿ ಸುಮ ಹೆಸರಿನಲ್ಲಿ ಬಂಡವಾಳ ಹೂಡಿದ್ದಾರೆ. ಶೃತಿ ಅನಿಲ್‌ಕುಮಾರ್ ಸಹ ನಿರ್ಮಾಪಕರು ಹಾಗೂ ಪ್ರಾಧ್ಯಾಪಕರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪರಮ್‌ಗುಬ್ಬಿ ನಿರ್ದೇಶನ ಮಾಡಿದ್ದಾರೆ. ಚಿತ್ರಕಥೆ-ಸಂಭಾಷಣೆ-ಸಾಹಿತ್ಯ ಕಬ್ಬಡಿ ನರೇಂದ್ರಬಾಬು, ಸಂಗೀತ ಅತಿಶಯಜೈನ್ ಅವರದಾಗಿದೆ.

     'ಮತ್ತೆ ಮಳೆ ಹುಯ್ಯುತ್ತಿದೆ'  ಹೆಸರಿಗೆ

'ಎಲ್ಲ ನೆನಪಾಗುತಿದೆ’ ಎಂಬ ಅಡಿಬರಹವಿದೆ. ಅನುಭವಗಳನ್ನು ಹಂಚಿಕೊಳ್ಳೋಣ ಚಿತ್ರತಂಡ  ತಂಡವು ಮಾಧ್ಯಮದ ಮುಂದೆ ಹಾಜರಾಗಿತ್ತು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮತ್ತು ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್ ಕೆ ವಿಶ್ವನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನರಸಿಂಹಲು ತಂಡಕ್ಕೆ ಶುಭ ಹಾರೈಸಿ "ಬರಡಾದ ಕನ್ನಡ ಚಿತ್ರರಂಗಕ್ಕೆ ’ಸು ಫ್ರಮ್ ಸೋ’ ದಿಂದ ಮತ್ತೆ ಮಳೆ ಬರುತ್ತಿದೆ. ಇದು ಸಂತಸದ ವಿಷಯ" ಎಂದರು. "ಅತಿಯಾಗಿ ಮಳೆಯನ್ನು ತೋರಿಸಿದ ಚಿತ್ರಗಳು ಯಶಸ್ವಿಯಾಗಿರುವ ಬಗ್ಗೆ ದಾಖಲೆಗಳು ಇದೆ. ಮೂಲತ: ಬರಹಗಾರರಾಗಿರುವ ನಿರ್ದೇಶಕರ ಬಳಿ ಚಿತ್ರರಂಗದ ಬಂಡಾರವಿದೆ. ಆದರಬ ಇನ್ನೊಬ್ಬರ ಕಥೆಯನ್ನು ತೆಗೆದುಕೊಂಡು ಚಿತ್ರ ಮಾಡಿದ್ದಾರೆ. ಅವರು ಲೇಖಕರಿಗೆ ಏನು ಗೌರವ ಕೊಡಬೇಕೋ ಅದನ್ನು ಸಲ್ಲಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆ" ಎಂಬುದು  ಎನ್ನಾರ್ ಕೆ ವಿಶ್ವನಾಥ್ ಅವರ  ನುಡಿಯಾಗಿತ್ತು.  ಉಮೇಶ್  ಬಣಕಾರ್ ತಂಡದವರನ್ನು ಶ್ಲಾಘಿಸಿದರು.

     ನಿರ್ದೇಶಕ ಪರಮ್ ಗುಬ್ಬಿ  ಮಾತನಾಡಿ "ಸಾಹಿತಿ ಕೆ.ಸದಾಶಿವ ವಿರಚಿತ ಸಣ್ಣಕತೆಗಳಲ್ಲಿ ಒಂದಾದ ’ಮತ್ತೆ ಮಳೆ ಹೂಯ್ಯುತಿದೆ’ ಕೃತಿಯನ್ನು ಬಳಸಲಾಗಿದೆ.ಕಥೆಯ ಅನುಮತಿ ಪಡೆಯಲು ಹೋದಾಗ ಎಲ್ಲರೂ ಕಾಲವಾಗಿದ್ದರೆಂದು ತಿಳಿಯಿತು. ಉದ್ಯಮಕ್ಕೆ ಕೊಂಡಿ ಆಗಿರುವ ಕನ್ನಡ ಸಾಹಿತ್ಯ ಪರಿಷತ್‌ನ್ನು ಸಂಪರ್ಕಿಸಿದಾಗ ಮಗಳು ಮಾತ್ರ ಅಮೇರಿಕಾದಲ್ಲಿ ನೆಲೆಸಿದ್ದಾರೆಂದು ತಿಳಿದು ಅವರಿಂದ ಅನುಮತಿ ಪಡೆದುಕೊಳ್ಳಲಾಯಿತು. ಅಲ್ಲದೆ ಅವರಿಗೆ ನೀಡ ಬಹುದಾದ ಸಂಭಾವನೆ ಮೊತ್ತವನ್ನು ಸಾಹಿತ್ಯ ಪರಿಷತ್‌ನಲ್ಲಿ ದತ್ತಿಯಾಗಿ ನೀಡಿ, ಪ್ರತಿ ವರ್ಷ ಸದಾಶಿವ ಹೆಸರಿನಲ್ಲಿ ಯುವ ಬರಹಗಾರರಿಗೆ ಪ್ರಶಸ್ತಿ ನೀಡುವ ಯೋಜನೆ ಬಗ್ಗೆ ನಿರ್ಮಾಪಕರಿಗೆ ತಿಳಿಸಿದಾಗ ಖುಷಿಯಿಂದ ಒಪ್ಪಿಕೊಂಡರು. ಕಬಡ್ಡಿ ನರೇಂದ್ರಬಾಬು ಸಿನಿಮಾ ಆಗಲು ಮುಖ್ಯ ಕಾರಣರಾಗಿರುತ್ತಾರೆ".

         "ಚಿತ್ರವು 80ರ  ದಶಕ ಹಾಗೂ 2000ದಲ್ಲಿ ನಡೆಯುವ ಎರಡು ಕಾಲಘಟ್ಟದ ಅಂಶಗಳನ್ನು ಹೊಂದಿದೆ. ಮೊದಲನೇ ಜೋಡಿಯ ಪ್ರೇಮ ಕತೆ ವಿಪಲವಾಗುತ್ತದೆ. ಎರಡನೇ ಜೋಡಿಯ ಲವ್ ಸ್ಟೋರಿ ಯಶಸ್ಸು ಕಾಣುತ್ತದೆ. ಇವೆರೆಡರ ನಡುವೆ ಸನ್ನಿವೇಶಗಳು ಮನಸ್ಸನ್ನು ಕದಡುತ್ತದೆ. ಸಿನಿಮಾದಲ್ಲಿ ಮಳೆಯು ಮಹತ್ವ ಪಾತ್ರವನ್ನು ವಹಿಸಿದೆ. ಜತೆಗೆ ಅರ್ಥಪೂರ್ಣ ಸಂದೇಶಗಳು ಅಲ್ಲಲ್ಲಿ ಬರುತ್ತದೆ. ಶೃಂಗೇರಿ, ಹೊರನಾಡು, ಕೊಪ್ಪ, ಹರಿಹರಪುರ, ಆಗುಂಬೆ ಸುಂದರ ತಾಣಗಳಲ್ಲಿ ಎಲ್ಲರ ಸಹಕಾರದಿಂದ ಇಪ್ಪತ್ತನಾಲ್ಕು ದಿನಗಳಲ್ಲಿ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿದ್ದೇವೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದ್ದು, ಅಕ್ಟೋಬರ್‌ದಲ್ಲಿ ತೆರೆಗೆ ತರಲು ಚಿಂತನೆ ನಡೆಸಲಾಗಿದೆ" ಎಂಬುದಾಗಿ ಪರಮ್‌ಗುಬ್ಬಿ ಮಾಹಿತಿ ನೀಡಿದರು.

     ನಿರ್ಮಾಪಕರ ಮಗ ಜಿ ಲಿಖಿತ್ ಮತ್ತು ಎರಡು ಶೇಡ್‌ಗಳಲ್ಲಿ ಕಾಣಿಸಿಕೊಂಡಿರುವ ರಂಗಭೂಮಿಯ ಜಯವರ್ಧನ್ ನಾಯಕರುಗಳು. ನಾಯಕಿಯರಾಗಿ ಸುಲಕ್ಷಖೈರ, ಭೂಮಿಕಗೌಡ. ಇವರೊಂದಿಗೆ ಚಂದ್ರಶೇಖರ ರೆಡ್ಡಿ.ಎ.ಎಂ, ಪ್ರಕಾಶ್‌ಮೂರ್ತಿ, ಕುಮಾರಿ ಸ್ವರ್ಣ, ಶೃತಿ, ದಿನಮಣಿ, ಕಾವ್ಯ ಕುಮಾರಿ ಮುಂತಾದವರು ನಟಿಸಿದ್ದಾರೆ.

ಛಾಯಾಗ್ರಹಣ ಶಾಂತಾರಾವ್ ಇಪಿಲಿ, ಸಂಕಲನ, ಧನುಷ್ ವೀರ್, ಕಲೆ ಬಾಬು ಖಾನ್, ನೃತ್ಯ ನಂದ.










Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ