ಇಂಡಿ : ಲಾಳಸಂಗಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವನ್ನು ಹಂಚಿನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಯಶಸ್ವಿಯಾಗಿ ಆಯೋಜಿಸಲಾಯಿತು. ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ CRP ಪರ್ವೀಜ್ ಅಹಮದ್ ಪಟೇಲ್ ಅವರು, ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆಗೆ ಕ್ರೀಡಾ ಮನೋಭಾವ ಬೆಳೆಸುವುದು ಅತ್ಯಂತ ಅಗತ್ಯವಾಗಿದೆ. ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ, ತಂಡದ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುತ್ತವೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಅಡಗಿದ್ದು, ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಪೋಷಕರ ಮೇಲಿದೆ ಎಂದು ಹೇಳಿದರು. ಕ್ರೀಡಾಕೂಟಗಳಲ್ಲಿ ಗೆಲುವಿಗಿಂತ ಭಾಗವಹಿಸುವಿಕೆ ಮತ್ತು ಕ್ರೀಡಾಸ್ಫೂರ್ತಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್. ಜಮಖಂಡಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಸ್. ಹಚಡದ್, ಎಸ್ಡಿಎಂಸಿ ಅಧ್ಯಕ್ಷ ಅರ್ಜುನ ಅಲಮೇಲ, ನಾಗಣ್ಣ ಸಂಗೋಗಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಕೊಬಣ್ಣ ಪೂಜಾರಿ, ಎಚ್.ಸಿ. ಇಂಗಳಗಿ, ಶ್ರೀಮತಿ ಪಿ.ಜಿ. ತಳವಾರ, ರೇಷ್ಮಾ ಪವಾರ್, ಸನಾ ಅರಳಿಮಟ್ಟಿ, ಮಹೇಶ್ ಜಾಧವ್, ರಾವಜಿ ಪವಾರ್, ಪಿ.ಎಂ. ನಾಡ್, ಎ.ಪಿ. ಪಾಟೀಲ, ಎಸ್.ಎಂ. ಮಾಂಗೊಂಡ್, ಯುವರಾಜ ಪದಗನ್ನವರ, ಗ್ರಾಮ ಪಂಚಾಯಿತಿ ಸದಸ್ಯರಾದ ವಿದ್ಯಾಧರ ವಾಲೀಕರ ಹಾಗೂ ಹೋವಣ್ಣ ಚವಡಿಹಾಳ, ಎಸ್ಡಿಎಂಸಿ ಸದಸ್ಯರಾದ ಬೀರಪ್ಪ ಪೂಜಾರಿ, ಬೀರಪ್ಪ ಶಂಕರ ಪೂಜಾರಿ, ಚಂದು ಸಂಗೋಗಿ, ಸದ್ದಾಂ ರೇವೂರ, ಶಿವಾನಂದ ಬಂಡೋಡೆ ಸೇರಿದಂತೆ ಹಲವು ಗಣ್ಯರು, ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಸುನಿಲ್ ಅಲಮೇಲ ಅವರು ನಡೆಸಿಕೊಟ್ಟರು. ಶ್ರೀಶೈಲ ತೆಲಿ ಅವರು ವಂದನಾರ್ಪಣೆ ಸಲ್ಲಿಸಿದರು.