Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಿವುಡ್ ನಲ್ಲಿ ಇತಿ ಆಚಾರ್ಯ

     ಇತಿ ಆಚಾರ್ಯ ನಟನೆ ಜೊತೆಗೆ ಮಾಡೆಲಿಂಗ್ನಲ್ಲಿ ಮಿಂಚುತ್ತಿದ್ದಾರೆ. 2016ರ ಮಿಸ್ ಸೌತ್ ಇಂಡಿಯಾ ವಿನ್ನರ್ ಕಿರೀಟ ಮುಡಿಗೇರಿಸಿಕೊಂಡಿರುವ ಈ ಕನ್ನಡತಿ ಆರ್.ವಿ.ಎಸ್.ಪಿ. ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿ ಆಗಿಯೂ ಗುರುತಿಸಿಕೊಂಡಿದ್ದಾರೆ.


      ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ. ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋರ್ಡಿಂಗ್ಸ್ನಲ್ಲಿ ಕಾಣಿಸಿಕೊಂಡ ಹಿರಿಮೆ ಅವರದ್ದು. ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಮೆರ್ಲಿನ್ ಬಾಬಾಜಿ ಸಾಂಗ್ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಇತಿ ಆಚಾರ್ಯ ಅವರು ಜನಪ್ರಿಯತೆ ಪಡೆದಿದ್ದಾರೆ.


     ಇತಿ ಆಚಾರ್ಯ ತಮ್ಮ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾದ ಅಪ್ ಡೇಟ್ ಹಂಚಿಕೊಂಡಿದ್ದಾರೆ. 'ದಿ ಶೂಸ್ ಐ ವೋರ್' ಎಂಬ ಹೊಸ ಹಿಂದಿ ಚಿತ್ರದಲ್ಲಿ ಇತಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಯುವ ಪ್ರತಿಭೆ ಸಂಜಯ್ ಚರಣ್ ನಿರ್ದೇಶನದ ಈ ಸಿನಿಮಾದಲ್ಲಿ ಇನ್ನಮುಲ್ಕ್ ಮತ್ತು ಸ್ಕ್ಯಾಮ್ ಖ್ಯಾತಿಯ ಫೈಸಲ್ ರಶೀದ್ ಗೆ ಜೋಡಿಯಾಗಿ ಕನ್ನಡತಿ ಅಭಿನಯಿಸಲಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇತಿ ಆಚಾರ್ಯ ''ನಾನು ಈ ಸಿನಿಮಾದ ಭಾಗವಾಗಿರುವುದಕ್ಕೆ ಖುಷಿ ಇದೆ. ತುಂಬಾ ಉತ್ಸುಕಳಾಗಿದ್ದೇನೆ. ಈ ಪಯಣದಲ್ಲಿ ಸಾಕಷ್ಟು ಕಲಿಯುವುದು ಇದೆ. ವಿಭಿನ್ನ ಕಥೆಯಾಗಿದ್ದು, ಇದೊಂದು ಟೆಕ್ನಿಕಲ್ ಸಿನಿಮಾ" ಎಂದಿದ್ದಾರೆ.


      ಇತಿ ಆಚಾರ್ಯ, ಕನ್ನಡದಲ್ಲಿ ಕವಚ, ಧ್ವನಿ, ಡೀಲ್‌ ರಾಜಾ, ಪಂಗನಾಮ ಸಿನಿಮಾಗಳಲ್ಲಿ ಜೊತೆಗೆ ತೆಲುಗು ಮತ್ತು ತಮಿಳಿನ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ