Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೃದಯಾಘಾತದಿಂದ ಐಟಿಐ ತರಬೇತಿ ಅಧಿಕಾರಿ ಎಸ್.ಎ. ಬಿರಾದರ್ ನಿಧನ

ಬಳ್ಳಾರಿ, ಜೂ. 11: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಬಳ್ಳಾರಿಯ ಹಿರಿಯ ತರಬೇತಿ ಅಧಿಕಾರಿಯಾಗಿದ್ದ ಶ್ರೀ ಎಸ್.ಎ. ಬಿರಾದರ್ (53) ಅವರು ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.
ಮಂಗಳವಾರ ರಾತ್ರಿ ಅವರಿಗೆ ಏಕಾಏಕಿ ಎದೆನೋವು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಹಿರಸಂಗ ಗ್ರಾಮದ ಮೂಲ ನಿವಾಸಿಯಾಗಿದ್ದ ಅವರು ಕಳೆದ 28 ವರ್ಷಗಳಿಂದ ಬಳ್ಳಾರಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತರಬೇತಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಕರ್ತವ್ಯನಿಷ್ಠೆ, ಶಿಸ್ತು, ವಿದ್ಯಾರ್ಥಿಗಳ ಮೇಲಿನ ಕಾಳಜಿ ಹಾಗೂ ಸಹೋದ್ಯೋಗಿಗಳೊಂದಿಗೆ ಹೊಂದಿದ್ದ ಆತ್ಮೀಯ ಸಂಬಂಧಗಳಿಂದ ಸಂಸ್ಥೆಯಲ್ಲಿ ಅಪಾರ ಗೌರವ ಗಳಿಸಿದ್ದರು.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಬಿರಾದರ್ ಅವರು ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಉತ್ತಮ ತಾಂತ್ರಿಕ ಪರಿಣತರನ್ನಾಗಿ ರೂಪಿಸಿದ್ದರು. ಅವರ ಸರಳ ವ್ಯಕ್ತಿತ್ವ, ಸೇವಾಭಾವ ಹಾಗೂ ಶಿಕ್ಷಣ ಕ್ಷೇತ್ರದ ಮೇಲಿನ ಬದ್ಧತೆ ಸಹೋದ್ಯೋಗಿಗಳು ಮತ್ತು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಅಚ್ಚಳಿಯದ ನೆನಪಾಗಿ ಉಳಿದಿದೆ.
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಯಿತು. ಪ್ರಾಚಾರ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕರಾದ ಗೋವಿಂದಪ್ಪ ಅವರು ಕಂಬನಿ ಮಿಡಿದು, “ಬಿರಾದರ್ ಸರ್‌ ಅವರಂತಹ ಕರ್ತವ್ಯನಿಷ್ಠ, ವಿದ್ಯಾರ್ಥಿ ಪರ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡ ಶಿಕ್ಷಕರು ಅಪರೂಪ. ಅವರ ಅಗಲಿಕೆ ಸಂಸ್ಥೆಗೆ ತುಂಬಲಾರದ ನಷ್ಟವಾಗಿದೆ. ಇಂತಹ ಶಿಕ್ಷಕರು ಮತ್ತೆ ಸಿಗುವುದು ಕಷ್ಟ” ಎಂದು ದುಃಖ ವ್ಯಕ್ತಪಡಿಸಿದರು.
ಮೃತರ ಅಂತ್ಯಕ್ರಿಯೆ ನಾಳೆ ಗುರುವಾರ ಅವರ ಸ್ವಗ್ರಾಮ ಅಹಿರಸಂಗದಲ್ಲಿ ವೀರಶೈವ ಸಂಪ್ರದಾಯದ ವಿಧಿವಿಧಾನಗಳೊಂದಿಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಶ್ರದ್ಧಾಂಜಲಿ
ಶ್ರೀ ಎಸ್.ಎ. ಬಿರಾದರ್ ಅವರ ಅಕಾಲಿಕ ನಿಧನವು ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಅಪಾರ ನಷ್ಟವನ್ನುಂಟು ಮಾಡಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ದುಃಖತಪ್ತ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗ ಸಂತಾಪ ಸೂಚಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ