Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೆ ಮಳೆ ಹೊಯ್ಯುತ್ತಿದೆ -ಎಲ್ಲ ನೆನಪಾಗುತಿದೆ

’ಮತ್ತೆ ಮಳೆ ಹೊಯ್ಯುತ್ತಿದೆ’ ಸಿನಿಮಾದ ಎರಡು ಹಾಡುಗಳ ಬಿಡುಗಡೆ ಸಮಾರಂಭವು ಉತ್ಸವ್ ಲೆಗಸಿದಲ್ಲಿ ಅದ್ದೂರಿಯಾಗಿ ನಡೆಯಿತು. ಚಿತ್ರದ  ಹೆಸರಿಗೆ  ’ಎಲ್ಲ ನೆನಪಾಗುತಿದೆ’ ಎಂಬ ಅಡಿಬರಹವಿದೆ.

    ಮೂರು ದಶಕಗಳಿಂದ ಸಹಾಯಕ ಕಲಾ ನಿರ್ದೇಶಕರಾಗಿರುವ ಗಂಗಾಧರ್

ಶ್ರೀಗವಿರಂಗನಾಥ ಸ್ವಾಮಿ ಪಿಕ್ಚರ‍್ಸ್ ಬ್ಯಾನರ್ ಅಡಿಯಲ್ಲಿ ಪತ್ನಿ ಸುಮ ಹೆಸರಿನಲ್ಲಿ ಬಂಡವಾಳ ಹೂಡುತ್ತಿದ್ದಾರೆ. ಶೃತಿ ಅನಿಲ್‌ಕುಮಾರ್ ಸಹ ನಿರ್ಮಾಪಕರು ಹಾಗೂ ಪ್ರಾಧ್ಯಾಪಕರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪರಮ್‌ಗುಬ್ಬಿ ನಿರ್ದೇಶನ ಮಾಡಿದ್ದಾರೆ. ಚಿತ್ರಕಥೆ-ಸಂಭಾಷಣೆ-ಸಾಹಿತ್ಯ ಕಬ್ಬಡಿ ನರೇಂದ್ರಬಾಬು, ಸಂಗೀತ ಅತಿಶಯಜೈನ್ ಅವರದಾಗಿದೆ.

       ಶ್ರವಣಬೆಳಗೊಳ ಶಾಸಕ ಸಿ.ಎನ್.ಬಾಲಕೃಷ್ಣ ಮತ್ತು ಹಿರಿಯ ನಿರ್ದೇಶಕ ನಾಗಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಾಗಣ್ಣ ಪ್ರಸ್ತುತ ಚಿತ್ರರಂಗವು ಎದುರಿಸುತ್ತಿರುವ ಸಮಸ್ಯೆಗಳು, ಅದಕ್ಕೆ ಪರಿಹಾರದ ಬಗ್ಗೆ ಬೆಳಕು ಚೆಲ್ಲಿದರು. ನಂತರ ಇದೇ ಬ್ಯಾನರ್‌ನಿಂದ ನಿರ್ಮಾಣವಾಗುತ್ತಿರುವ, ಕಬ್ಬಡ್ಡಿ ನರೇಂದ್ರಬಾಬು ನಿರ್ದೇಶನದ ’ಭೀಮ ತೀರದ ಹಂತಕರು’ ಸಿನಿಮಾದ ಪೋಸ್ಟರ್‌ನ ಶಾಸಕರು ಬಿಡುಗಡೆ ಮಾಡಿದರು.

       ನಿರ್ಮಾಪಕರ ಮಗ ಜಿ.ಲಿಖಿತ್ ಮತ್ತು ಎರಡು ಶೇಡ್‌ಗಳಲ್ಲಿ ಕಾಣಿಸಿಕೊಂಡಿರುವ ರಂಗಭೂಮಿಯ ಜಯವರ್ಧನ್ ನಾಯಕರುಗಳು. ನಾಯಕಿಯರಾಗಿ ಸುಲಕ್ಷಖೈರ, ಭೂಮಿಕಗೌಡ. ಇವರೊಂದಿಗೆ ಚಂದ್ರಶೇಖರ ರೆಡ್ಡಿ.ಎ.ಎಂ, ಪ್ರಕಾಶ್‌ಮೂರ್ತಿ, ಕುಮಾರಿ ಸ್ವರ್ಣ, ಶೃತಿ, ದಿನಮಣಿ, ಕಾವ್ಯ ಕುಮಾರಿ ಮುಂತಾದವರು ನಟಿಸಿದ್ದಾರೆ.

     ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಸಾಹಿತಿ ಕೆ.ಸದಾಶಿವ ವಿರಚಿತ ಸಣ್ಣಕತೆಗಳಲ್ಲಿ ಒಂದಾದ ’ಮತ್ತೆ ಮಳೆ ಹೂಯ್ಯುತಿದೆ’ ಕೃತಿಯನ್ನು ಬಳಸಲಾಗಿದೆ. ಅವರಿಗೆ ನೀಡ ಬಹುದಾದ ಸಂಭಾವನೆ ಮೊತ್ತವನ್ನು ಸಾಹಿತ್ಯ ಪರಿಷತ್‌ನಲ್ಲಿ ದತ್ತಿಯಾಗಿ ನೀಡಿ, ಪ್ರತಿ ವರ್ಷ ಸದಾಶಿವ ಹೆಸರಿನಲ್ಲಿ ಯುವ ಬರಹಗಾರರಿಗೆ ಪ್ರಶಸ್ತಿ ನೀಡುವ ಯೋಜನೆ ಬಗ್ಗೆ ನಿರ್ಮಾಪಕರಿಗೆ ತಿಳಿಸಿದಾಗ ಖುಷಿಯಿಂದ ಒಪ್ಪಿಕೊಂಡರು. ಕಬಡ್ಡಿ ನರೇಂದ್ರಬಾಬು ಸಿನಿಮಾ ಆಗಲು ಮುಖ್ಯ ಕಾರಣರಾಗಿರುತ್ತಾರೆ.

     "ಚಿತ್ರವು 80ರ  ದಶಕ ಹಾಗೂ 2000ನೇ ಇಸವಿಯಲ್ಲಿ ನಡೆಯುವ ಎರಡು ಕಾಲಘಟ್ಟದ ಅಂಶಗಳನ್ನು ಹೊಂದಿದೆ. ಮೊದಲನೇ ಜೋಡಿಯ ಪ್ರೇಮ ಕತೆ ವಿಪಲವಾಗುತ್ತದೆ. ಎರಡನೇ ಜೋಡಿಯ ಲವ್ ಸ್ಟೋರಿ ಯಶಸ್ಸು ಕಾಣುತ್ತದೆ. ಇವೆರೆಡರ ನಡುವೆ ಸನ್ನಿವೇಶಗಳು ಮನಸ್ಸನ್ನು ಕದಡುತ್ತದೆ. ಸಿನಿಮಾದಲ್ಲಿ ಮಳೆಯು ಮಹತ್ವದ ಪಾತ್ರವನ್ನು ವಹಿಸಿದೆ. ಜತೆಗೆ ಅರ್ಥಪೂರ್ಣ ಸಂದೇಶಗಳು ಅಲ್ಲಲ್ಲಿ ಬರುತ್ತದೆ. ಶೃಂಗೇರಿ, ಹೊರನಾಡು, ಕೊಪ್ಪ, ಹರಿಹರಪುರ, ಆಗುಂಬೆ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ" ಎಂಬುದಾಗಿ ಪರಮ್‌ಗುಬ್ಬಿ ಮಾಹಿತಿ ನೀಡಿದರು.

    ಛಾಯಾಗ್ರಹಣ ಶಾಂತಾರಾವ್ ಇಪಿಲಿ, ಸಂಕಲನ ಧನುಷ್ ವೀರ್, ಕಲೆ ಬಾಬು ಖಾನ್, ನೃತ್ಯ ನಂದ ಅವರದಾಗಿದೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ