LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

15 ರಂದು ಜಗದ್ಗುರು ವೀರಭದ್ರೇಶ್ವರ ಜಯಂತ್ಯುತ್ಸವ ಆಚರಣೆ

ಹಸಿರು ಕ್ರಾಂತಿ ವರದಿ ಮುದ್ದೇಬಿಹಾಳ
ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ವೀರಭದ್ರೇಶ್ವರ ಸ್ವಾಮಿಯ ಜಯಂತ್ಯುತ್ಸವ-2026 ರನ್ನು ಸೆ.15 ರಂದು ಭಾದ್ರಪದ ಮಾಸದ ಮೊದಲನೇ ಮಂಗಳವಾರ ಮನೆ, ಮನೆಗಳಲ್ಲಿ ಹಾಗೂ ದೇವಸ್ಥಾನಗಳಲ್ಲಿ ಅತ್ಯಂತ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳು ನಡೆದಿವೆ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಕಿತ್ತೂರು ಕರ್ನಾಟಕ ಮಹಿಳಾ ಘಟಕದ ಅಧ್ಯಕ್ಷೆ ಕಾಶಿಬಾಯಿ ರಾಂಪೂರ ತಿಳಿಸಿದ್ದಾರೆ.

ಪ್ರಕಟಣೆ ವಿಷಯ ತಿಳಿಸಿದ ಅವರು, ಕರ್ನಾಟಕದ ಬಹುಸಂಖ್ಯಾತ ಜನರಿಗೆ ವೀರಭದ್ರೇಶ್ವರ ಸ್ವಾಮಿಯೇ ಕುಲದೇವರಾಗಿದ್ದಾರೆ. ಈ ಆರಾಧನೆಯು ತನ್ನದೇ ಆದ ವಿಶಿಷ್ಟ ಪುರವಂತರು, ವೀರಗಾಸೆ ಕಲಾಪ್ರಕಾರಗಳು ಹಾಗೂ ಶ್ರೀಮಂತ ಒಡಪು ಸಾಹಿತ್ಯ ಸಂಸ್ಕೃತಿಯನ್ನು ಒಳಗೊಂಡಿರುವುದು ವಿಶೇಷತೆಯಾಗಿದೆ. ಈ ವರ್ಷ ಮುದ್ದೇಬಿಹಾಳ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಬಹುತೇಕ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನ ಹಾಗೂ ವಿಶಿಷ್ಟ ಆಚರಣೆಗಳನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳು ತಮ್ಮ ಮನೆ ಮತ್ತು ಹಳ್ಳಿಗಳಲ್ಲಿ ಸಡಗರದಿಂದ ವೀರಭದ್ರೇಶ್ವರ ಜಯಂತಿ ಆಚರಿಸಲು ಕೋರಿದ್ದಾರೆ.

ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯು ಕಳೆದೆಂಟು ವರ್ಷಗಳ ಹಿಂದೆ ಪ್ರಪ್ರಥಮ ಬಾರಿಗೆ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವವನ್ನು ಶ್ರದ್ಧಾ, ಭಕ್ತಿಯಿಂದ ಆಚರಿಸುವ ಪರಂಪರೆ ಆರಂಭಿಸಿತ್ತು. ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ ನೇತೃತ್ವದ ಈ ಸತತ ಪ್ರಯತ್ನದಿಂದಾಗಿ ಇಂದು ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಭಕ್ತರು ಏಕಕಾಲದಲ್ಲಿ ವೀರಭದ್ರೇಶ್ವರ ಜಯಂತಿ ಆಚರಿಸಲಾಗುತ್ತಿದೆ.
-ಕಾಶಿಬಾಯಿ ರಾಂಪೂರ, ಅಧ್ಯಕ್ಷರು, ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಕಿತ್ತೂರು ಕರ್ನಾಟಕ ಮಹಿಳಾ ಘಟಕ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
15 ರಂದು ಜಗದ್ಗುರು ವೀರಭದ್ರೇಶ್ವರ ಜಯಂತ್ಯುತ್ಸವ ಆಚರಣೆಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ**ಶ್ರೀ ವರದ ಶಂಕರ ಪೂಜೆ ಮತ್ತು ಮಹಾಪ್ರಸಾದ**ರೈತರಿಂದ ಮತ್ತು ಬಿಜೆಪಿಯಿಂದ  ಲೋಡ್ ಶೆಡ್ಡಿಂಗ್ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ. ತನವ್ ಮೋಹನ್ ಗೆ ವರ್ಷದ ಕನ್ನಡಿಗ ಪ್ರಶಸ್ತಿರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪಿ.ಟಿ. ಪರಮೇಶ್ವರ ನಾಯ್ಕ ಪ್ರವಾಸಸಮಾಜ ಸಂಘಟನೆಯಲ್ಲಿ ಹಾನಗಲ್ ಕುಮಾರಸ್ವಾಮಿಗಳ ಕೊಡುಗೆ ಅನನ್ಯ-ಪ್ರೊ ಮಿಥುನ ಅಂಕಲಿ ಅಭಿಮತಬಳ್ಳಾರಿ: ಕಂಪ್ಲಿ ಮತ್ತು ಕುಡುತಿನಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ - ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಮಾದಕ ವ್ಯಸನಮುಕ್ತ ಸಮಾಜದಿಂದ ಮಾತ್ರ ಸದೃಢ ದೇಶ ನಿರ್ಮಾಣ ಸಾಧ್ಯ: ಡಾ. ವೀರೇಂದ್ರ ಕುಮಾರ್ ಕರೆಗುಣಾತ್ಮ ಶಿಕ್ಷಣ, ಒಳ್ಳೆಯ ಸಂಸ್ಕಾರ ನೀಡುವುದು ಶಿಕ್ಷಕರ ಆಧ್ಯ ಕರ್ತವ್ಯ: ಶಾಸಕ ಂiಶವಂತರಾಯಗೌಡ ಪಾಟೀಲ