ಹಸಿರು ಕ್ರಾಂತಿ ವರದಿ ಬೆಳಗಾವಿ
ಜಗನ್ನಾಥರಾವ್‌ರವರು ಜಾತಿ, ಮತ, ಧರ್ಮಗಳನ್ನು ಮೀರಿದವರಾಗಿದ್ದರು. ದೇಶಸೇವೆಯೇ ಅವರ ಪರಮೋಚ್ಚ ಗುರಿಯಾಗಿತ್ತು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಹೇಳಿದರು.
ಬೆಳಗಾವಿಯ ಸಂಘ ಸದನದಲ್ಲಿ ಭಾನುವಾರ ಜಗನ್ನಾಥ ರಾವ್ ಜೋಶಿ ಸ್ಮಾರಕ ಭವನ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಜನರಿಗಾಗಿಯೇ ಜೀವನ ಮುಡಿಪಾಗಿಟ್ಟಿದ್ದ ಅವರು ಅತ್ಯಂತ ಸರಳ ಜೀವನ ನಡೆಸಿದ್ದರು. ಅವರಿಗೆ ಗೌರವ ಸಲ್ಲಿಸಲು ಈ ಭವನ ನಿರ್ಮಾಣ ಮಾಡಲಾಗಿದೆ. ಅವರ ಸಾರ್ಥಕ ಜೀವನದ ಧ್ಯೋತಕವಾಗಿ ಈ ಭವನವನ್ನು ಸಮಾಜಕ್ಕೆ ಅರ್ಪಣೆ ಮಾಡಲಾಗಿದೆ. ಸಮಾಜದ ಔನ್ನತ್ಯಕ್ಕಾಗಿ ಈ ಭವನ ಬಳಕೆಯಾಗಲಿ. ಪೂರ್ಣ ರೂಪದಲ್ಲಿ ಸಾರ್ಥಕವಾಗಲಿ. ಜನವಿಕಾಸಕ್ಕಾಗಿ, ಜನಕಲ್ಯಾಣಕ್ಕಾಗಿ ಈ ಭವನ ನಿರ್ಮಾಣ ಮಾಡಲಾಗಿದೆ. ಇಲ್ಲಿ ಬಳಸಿರುವ ಒಂದೊಂದು ಪೈಸೆಯೂ ಸದುಪಯೋಗವಾಗಬೇಕು. ಒಂದೊಂದು ಇಂಚು ಜಾಗವೂ ಸದ್ಬಳಕೆಯಾಗಬೇಕು ಎಂಬ ಆಶಯ ವ್ಯಕ್ತಪಡಿಸಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ಉತ್ತರ ಪ್ರಾಂತ ಸಂಘಚಾಲಕ ಬಸವರಾಜ ಡಂಬಳ ಮಾತನಾಡಿ, ಬೆಳಗಾವಿಯಲ್ಲಿ ನೂತನವಾಗಿ ನಿರ್ಮಿಸಿರುವ ಜನಕಲ್ಯಾಣ ಭವನವು ಸಮಾಜಕ್ಕೆ ಸದಾ ಪ್ರೇರಣೆ ನೀಡುವ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಈ ಭವನವು ನಮ್ಮೆಲ್ಲರಿಗೂ ಮೌನವಾಗಿ ಆತ್ಮಾವಲೋಕನ ಮಾಡಿಕೊಳ್ಳಲು ಒಂದು ಉತ್ತಮ ಸಂದರ್ಭವನ್ನು ಒದಗಿಸಿದೆ ಎಂದರು.
ಕಾರಂಜಿಮಠದ ಶ್ರೀ ಗುರುಸಿದ್ಧ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ ಸ್ವಾಗತಿಸಿದರು. ಜನಕಲ್ಯಾಣ ಟ್ರಸ್ಟ್‌ನ ನಿರ್ವಾಹಕ ವಿಶ್ವಸ್ಥ ಅರವಿಂದ ರಾವ್ ದೇಶಪಾಂಡೆ ಪ್ರಾಸ್ತಾವಿಕ ಮಾತನಾಡಿದರು.
ಆರ್‌ಎಸ್ಎಸ್ ಪ್ರಾಂತ ಕಾರ್ಯದರ್ಶಿ ರಾಘವೇಂದ್ರ ಕಾಗವಾಡ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿದ್ಯಾಭಾರತಿ ಪ್ರಾಂತ ಅಧ್ಯಕ್ಷ ಪರಮೇಶ್ವರ ಹೆಗಡೆ, ಅಯೋಧ್ಯಾ ರಾಮಮಂದಿರ ನಿರ್ಮಾಣ ಟ್ರಸ್ಟ್ ಉಸ್ತುವಾರಿ ಗೋಪಾಲಜಿ, ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಸಚಿವರಾದ ಸಿ.ಟಿ.ರವಿ, ಮುರುಗೇಶ ನಿರಾಣಿ, ಕೆ.ಎಸ್.ಈಶ್ವರಪ್ಪ, ಸಿ.ಸಿ.ಪಾಟೀಲ, ಶಶಿಕಲಾ ಜೊಲ್ಲೆ, ಕೋಟ ಶ್ರೀನಿವಾಸ ಪೂಜಾರಿ, ರಮೇಶ ಜಿಗಜಿಣಗಿ, ಗೋವಿಂದ ಕಾರಜೋಳ, ರಮೇಶ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ, ಶಾಸಕರಾದ ಅಭಯ ಪಾಟೀಲ, ವಿಠ್ಠಲ ಹಲಗೇಕರ್, ನಿಖಿಲ್ ಕತ್ತಿ, ಮಾಜಿ ಶಾಸಕರಾದ ಅನಿಲ ಬೆನಕೆ, ಜಗದೀಶ್ ಮೆಟಗುಡ್ಡ, ಮಹಾಂತೇಶ ಕವಟಗಿಮಠ, ಸಂಜಯ ಪಾಟೀಲ, ಮಾಜಿ ಸಂಸದರಾದ ಮಂಗಲಾ ಅಂಗಡಿ, ಅಣ್ಣಾಸಾಹೇಬ ಜೊಲ್ಲೆ, ರಮೇಶ ಕತ್ತಿ, ಕಟ್ಟಡ ನಿರ್ಮಾಣ ಮಾಡಿದ ಚೈತನ್ಯ ಕುಲಕರ್ಣಿ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಸೋನಾಲಿ ಸರ್ನೋಬತ್, ಮೇಯರ್ ಪ್ರೀತಿ ಕಾಮಕರ, ಪ್ರಮೋದ ಮುತಾಲಿಕ, ಕೃಷ್ಣ ಭಟ್, ಎಂ.ಬಿ.ಜಿರಲಿ, ಶಂಕರಗೌಡ ಪಾಟೀಲ, ಕಿರಣ ಜಾಧವ ಸೇರಿದಂತೆ ನೂರಾರು ಸಂಘದ ಪ್ರಮುಖರು ಉಪಸ್ಥಿತರಿದ್ದರು.
ತಮ್ಮ ಜೀವನವನ್ನೇ ಸಮಾಜಕ್ಕಾಗಿ ಅರ್ಪಿಸಿದ ಜಗನ್ನಾಥರಾವ್ ಜೋಶಿರವರ ಸ್ಮರಣಾರ್ಥ ನಿರ್ಮಿಸಿರುವ ಜಗನ್ನಾಥ ರಾವ್ ಜೋಶಿ ಸ್ಮಾರಕ ಭವನ ಇಡೀ ಸಮಾಜಕ್ಕೆ ಅರ್ಪಣೆಯಾಗಲಿದೆ. ಜನವಿಕಾಸಕ್ಕಾಗಿ, ಜನಕಲ್ಯಾಣಕ್ಕಾಗಿ ಈ ಭವನ ನಿರ್ಮಾಣ ಮಾಡಲಾಗಿದೆ. ಇಲ್ಲಿ ಬಳಸಿರುವ ಒಂದೊಂದು ಪೈಸೆಯೂ ಸದುಪಯೋಗವಾಗಬೇಕು. ಒಂದೊಂದು ಇಂಚು ಜಾಗವೂ ಸದ್ಬಳಕೆಯಾಗಬೇಕು.
-ದತ್ತಾತ್ರೇಯ ಹೊಸಬಾಳೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ
ಬೆಳಗಾವಿಯಲ್ಲಿ ಈಗಾಗಲೇ ಶಾಲಾ ಶಿಕ್ಷಣ ಹಾಗೂ ಸಮಾಜ ಸೇವೆಯಂತಹ ಜನಪರ ಕಾರ್ಯಗಳನ್ನು ನಡೆಸುತ್ತಿರುವ ಜನಕಲ್ಯಾಣ ಟ್ರಸ್ಟ್, ಈ ಭವನವನ್ನು ನಿರ್ಮಿಸುವ ಮೂಲಕ ತನ್ನ ಮುಡಿಗೆ ಮತ್ತೊಂದು ಗರಿಯನ್ನು ಏರಿಸಿಕೊಂಡಿದೆ. ಮುಂದಿನ ದಿನಗಳಲ್ಲೂ ಈ ಟ್ರಸ್ಟ್ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸಮಾಜದ ವಿವಿಧ ಜನಕಲ್ಯಾಣ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಳ್ಳಲಿದೆ.
-ಬಸವರಾಜ ಡಂಬಳ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ಉತ್ತರ ಪ್ರಾಂತ ಸಂಘಚಾಲಕರು.
