LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಜೈ ಹಿಂದ್ ಜೈ ಸಿಂಧ್  ಇಂದ್ರಜಿತ್ ಲಂಕೇಶ್ ಸಿನಿಮಾ







     ಕನ್ನಡದ ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮತ್ತೊಮ್ಮೆ ಹಿಂದಿ ಚಿತ್ರರಂಗಕ್ಕೆ ದೊಡ್ಡ ಮಟ್ಟದಲ್ಲಿ

ಕಾಲಿಟ್ಟಿದ್ದಾರೆ. ಅವರು ಇದೀಗ 'ಜೈ ಹಿಂದ್ ಜೈ ಸಿಂಧ್' ಎಂಬ ಹಿಂದಿ ಚಿತ್ರವನ್ನು ಸದ್ದಿಲ್ಲದೆ ನಿರ್ದೇಶಿಸುತ್ತಿದ್ದು, ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿದಿದೆ.

     ಚಿತ್ರದ ಕೊನೆಯ ಹಂತದ ಚಿತ್ರೀಕರಣ  ಉತ್ತರಾಖಂಡದಲ್ಲಿ ಭರದಿಂದ ಸಾಗಿದೆ.

ಡೆಹ್ರಾಡೂನ್ ನಲ್ಲಿ 'ಜೈ ಹಿಂದ್ ಜೈ ಸಿಂಧ್' ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭದ ಜೊತೆಗೆ ನಡೆದ ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಇಂದ್ರಜಿತ್ ಜೊತೆಗೆ ನಿರ್ಮಾಪಕ ಸ್ಯಾಮಿ ನನ್ವಾನಿ, ಆಕಾಶಾ ವತ್ಸ್, ವಿಕ್ರಂ ಕೊಚ್ಚರ್ ಮುಂತಾದವರು ಹಾಜರಿದ್ದರು.

      'ಜೈ ಹಿಂದ್ ಜೈ ಸಿಂಧ್'' ಚಿತ್ರವನ್ನು ಸ್ಯಾಮೀಸ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಸ್ಯಾಮಿ ನನ್ವಾನಿ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮಹೇಶ್ ಮಂಜ್ರೇಕರ್, ವಿಕ್ರಂ ಕೋಚಾರ್, ಜರೀನಾ ವಹಾಬ್, ಜಯಪ್ರದ, ಉಪಾಸನಾ ಸಿಂಗ್, ಅಮಿತ್ ಬಹಲ್ ಮುಂತಾದ ಪ್ರತಿಭಾವಂತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

     ಚಿತ್ರದ ಕುರಿತು ಮಾತನಾಡಿದ ಇಂದ್ರಜಿತ್ ಲಂಕೇಶ್, "ಇದೊಂದು ಪ್ರೇಮಕಥೆಯಾಗಿದ್ದು, ದೇಶ ವಿಭಜನೆ ಪ್ರಮುಖ ಪಾತ್ರ ವಹಿಸುತ್ತದೆ. ಅನೇಕತೆಯಲ್ಲಿ ಏಕತೆ ಎಂಬ ವಿಷಯವನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇನೆ. ದೇಶ ವಿಭಜನೆಯಾದಾಗ ಸಿಂಧ್ ಪ್ರಾಂತ್ಯದ ಜನ ಹೇಗೆ ನರಳಿದರು, ಅದರಿಂದ ಹೊರಬಂದು, ಈಗ ತಮ್ಮ ಬದುಕನ್ನು ಹೇಗೆ ಕಟ್ಟಿಕೊಂಡಿದ್ದಾರೆ ಎಂಬುದನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇನೆ".

     "ನನ್ನ ಮೊದಲ ಚಿತ್ರದಿಂದ ಹಲವು ನಟ-ನಟಿಯರನ್ನು ಪರಿಚಯಿಸುವ ಪ್ರಯತ್ನ ಮಾಡುತ್ತಲೇ ಬಂದಿದ್ದೇನೆ" ಎಂದ ಇಂದ್ರಜಿತ್ "ಗಾಯಕಿ ವಸುಂದರಾ ದಾಸ್ ಅವರನ್ನು 'ಲಂಕೇಶ್ ಪತ್ರಿಕೆ' ಚಿತ್ರದ ಮೂಲಕ ಮತ್ತು ದೀಪಿಕಾ ಪಡುಕೋಣೆ ಅವರನ್ನು 'ಐಶ್ವರ್ಯ' ಚಿತ್ರದ ಮೂಲಕ ಪರಿಚಯಿಸಿದ್ದೆ. ಈಗ ಈ ಚಿತ್ರದ ಮೂಲಕ ನಾಲ್ವರು ಹೊಸ ಪ್ರತಿಭೆಗಳನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದೇನೆ' ಎಂದರು.

    'ಜೈ ಹಿಂದ್ ಜೈ ಸಿಂಧ್' ಸದ್ಯದಲ್ಲೇ ಚಿತ್ತೀಕರಣ ಮುಗಿಯಲಿದ್ದು, ಈ ವರ್ಷದ ಮಧ್ಯಭಾಗದ ಹೊತ್ತಿಗೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್