Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಂಗಾವತಿ: ರಂಜಾನ್ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಕಂಗೊಳಿಸಿದ ಜನಾರ್ದನರೆಡ್ಡಿ ಉಪಸ್ಥಿತಿ

ಗಂಗಾವತಿ23.: ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ನಗರದ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನಾ ಕಾರ್ಯಕ್ರಮಕ್ಕೆ ಮಾಜಿ ಸಚಿವರು ಹಾಗೂ ಹಾಲಿ ಶಾಸಕ ಗಾಲಿ ಜನಾರ್ದನರೆಡ್ಡಿ ಅವರ ಆಗಮನ ವಿಶೇಷ ಮೆರುಗು ತಂದಿತು.


ಸರಳತೆ ಮತ್ತು ಭಕ್ತಿಭಾವದಿಂದ ಈದ್ಗಾ ಮೈದಾನಕ್ಕೆ ಆಗಮಿಸಿದ ಜನಾರ್ದನರೆಡ್ಡಿ ಅವರು ಮುಸ್ಲಿಂ ಬಾಂಧವರೊಂದಿಗೆ ಬೆರೆತು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಧರ್ಮ, ಜಾತಿ ಬೇಧವಿಲ್ಲದೆ ಎಲ್ಲರೊಂದಿಗೆ ಸ್ನೇಹಪೂರ್ವಕವಾಗಿ ಮಾತನಾಡಿದ ಅವರು, ಸಮಾಜದಲ್ಲಿ ಸಹೋದರತ್ವ ಮತ್ತು ಐಕ್ಯತೆಯ ಸಂದೇಶವನ್ನು ಸಾರಿದರು.


ರಂಜಾನ್ ಹಬ್ಬದ ಮಹತ್ವವನ್ನು ಉಲ್ಲೇಖಿಸಿದ ಅವರು, ಒಂದು ತಿಂಗಳ ಉಪವಾಸದ ನಂತರ ಆಚರಿಸುವ ಈ ಹಬ್ಬವು ತ್ಯಾಗ, ನಿಯಮ ಮತ್ತು ಮಾನವೀಯ ಮೌಲ್ಯಗಳ ಪ್ರತೀಕವಾಗಿದೆ ಎಂದು ಹೇಳಿದರು. ಇಂತಹ ಹಬ್ಬಗಳು ಸಮಾಜವನ್ನು ಒಗ್ಗೂಡಿಸುವ ಶಕ್ತಿ ಹೊಂದಿದ್ದು, ಶಾಂತಿ ಮತ್ತು ಸೌಹಾರ್ದತೆಯನ್ನು ಬಲಪಡಿಸುತ್ತವೆ ಎಂದು ಅಭಿಪ್ರಾಯಪಟ್ಟರು.


“ಹಿಂದು–ಮುಸ್ಲಿಂ ಬಾಯಿ ಬಾಯಿ, ಭಾರತ ಮಾತೆ ನಮ್ಮೆಲ್ಲರ ತಾಯಿ” ಎಂಬ ಸಂದೇಶವನ್ನು ಪುನರುಚ್ಚರಿಸಿದ ಅವರು, ದೇಶದಾದ್ಯಂತ ಶಾಂತಿ, ಸಮೃದ್ಧಿ ಮತ್ತು ನೆಮ್ಮದಿ ನೆಲೆಸಲಿ ಎಂದು ಹಾರೈಸಿದರು. ಎಲ್ಲರೂ ಪರಸ್ಪರ ಗೌರವದಿಂದ ಬದುಕಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.


ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಧಾರ್ಮಿಕ ಗುರುಗಳು ಹಾಗೂ ಸಾವಿರಾರು ಭಕ್ತರು ಉಪಸ್ಥಿತರಿದ್ದು, ಜನಾರ್ದನರೆಡ್ಡಿ ಅವರ ಸರಳ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅವರ ಉಪಸ್ಥಿತಿ ಕಾರ್ಯಕ್ರಮಕ್ಕೆ ವಿಶೇಷ ಕಂಗೊಳನ್ನು ನೀಡಿದಂತಾಯಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ