Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏ.19 ರಿಂದ ಶ್ರೀ ಶಂಕರಾಚಾರ್ಯರ ಜಾತ್ರಾ ಮಹೋತ್ಸವ





ಕೊಪ್ಪಳ,: ತಾಲೂಕಿನ ಭಾಗ್ಯನಗರ ಪಟ್ಟಣದ ಶ್ರೀ ಶಾರದಾ ಪೀಠ ಜಗದ್ಗುರು ಶ್ರೀ ಶಂಕರಾಚಾರ್ಯರ ಮಠದಲ್ಲಿ ಶ್ರೀ ಶಾರದಾ ಮಾತೆಯ ನೂತನ ಮಂದಿರ ಉದ್ಘಾಟನೆ, ಶಿಲಾ‌ ಮೂರ್ತಿ ಪ್ರಾಣ‌‌ ಪ್ರತಿಷ್ಠಾನ, ಕಳಸಾರೋಹಣ, ಶ್ರೀ ಶಾರದಾಂಬಾ ಶಾಲಾ ಹಾಗೂ ವಿದ್ಯಾರ್ಥಿ ಮಂದಿರದ ನೂತನ ಕೊಠಡಿಗಳು ಅನಾವರಣ ಮತ್ತು ಶ್ರೀ ಶಂಕರಾಚಾರ್ಯರ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳು ಏಪ್ರಿಲ್ 19 ರಿಂದ 21ರವರೆಗೆ ವಿಜೃಂಭಣೆಯಿಂದ ನಡೆಯಲಿವೆ ಎಂದು ಶ್ರೀ ಶಾರದಾಂಬಾ ಟ್ರಸ್ಟ್ ಕಾರ್ಯದರ್ಶಿ ಹಾಗೂ ಭಾಗ್ಯನಗರ ಪಟ್ಟಣ ಪಂಚಾಯತಿ ರಮೇಶ ಹ್ಯಾಟಿ ಹೇಳಿದರು. ಶುಕ್ರವಾರ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ  ಸುದ್ದಿಗೋಷ್ಠಿದ್ದೇಶಿಸಿ ಅವರು ಮಾತನಾಡಿದರು. ಏ.19 ರವಿವಾರ ಬ್ರಾಹ್ಮೀ ಮುಹೂರ್ತದಲ್ಲಿ ಗುರುದೇವತಾ ಮೂರ್ತಿಗಳಿಗೆ ವಿಶೇಷ ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ ನಂತರ ಧ್ವಜಾರೋಹಣ, ಶ್ರೀ ಅಮ್ಮನವರಿಗೆ ಮತ್ತು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಏ.20 ಸೋಮವಾರ ಬೆಳಗ್ಗೆ 7 ಗಂಟೆಗೆ ನೂತನ ಶಿಲಾಮೂರ್ತಿಯನ್ನು ಶ್ರೀ ತಾಯಮ್ಮದೇವಿ ದೇವಸ್ಥಾನದಿಂದ ಶ್ರೀಮಠದವರೆಗೆ ಪೂರ್ಣಕುಂಭ, ಕಳಸಗಳ ಸಮೇತ ಭಾಗ್ಯನಗರ ಪಟ್ಟಣದಲ್ಲಿ ಸಕಲಮಂಗಲವಾಧ್ಯಗಳೊಂದಿಗೆ ಮೆರವಣಿಗೆ ನಡೆಯಲಿದೆ ಎಂದರು.

ಏ.21 ಮಂಗಳವಾರ ಬೆಳಗ್ಗೆ 10 ಗಂಟೆಗೆ ಶ್ರೀ ಶಾರದಾಂಬಾ ಶಾಲಾ ಹಾಗೂ ವಿದ್ಯಾರ್ಥಿ ಮಂದಿರ ನೂತನ ಕೊಠಡಿ ಸಚಿವ ಶಿವರಾಜ್ ತಂಗಡಗಿ ಅವರು ಉದ್ಟಾಟಿಸಲಿದ್ದಾರೆ. ಕಾರ್ಯಕ್ರಮದ ಘನ ಉಪಸ್ಥಿತಿ ಶಾಸಕ‌ ಕೆ.ರಾಘವೇಂದ್ರ ಹಿಟ್ನಾಳ,

ಅಧ್ಯಕ್ಷತೆ ಸಂಸದ ಕೆ.ರಾಜಶೇಖರ ಹಿಟ್ನಾಳ  ವಹಿಸುವರು, ಗೌರವಾನ್ವಿತ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರಸನ್ನ ಗಡಾದ, ಮಾಜಿಸಂಸದ ಸಂಗಣ್ಣ ಕರಡಿ, ಮಾಜಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶ್ರೀನಿವಾಸ್ ಗುಪ್ತಾ, ಜಿಡಿಎಸ್ ಮುಖಂಡ‌ ಸಿವಿ ಚಂದ್ರಶೇಖರ, ಬಿಜೆಪಿ ಮುಖಂಡ ಡಾ.ಬಸವರಾಜ ಕ್ಯಾವಟರ್, ಹಿರಿಯ ವಕೀಲರಾದ ರಾಘವೇಂದ್ರ ಪಾನಘಂಟಿ, ಪಪಂ‌ ಮುಖ್ಯಾಧಿಕಾರಿ ಸುರೇಶ ಬಬಲಾದಿ, ಹೊಸಪೇಟಿ ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಜಿ.ಎಂ.ವೃಷಭೇಂದ್ರಯ್ಯನವರು, ಹೊಸಪೇಟೆ ಸಮಾಜ ಸೇವಕರಾದ ವೆಂಕಪ್ಪ ಹೆಚ್.ಎಸ್. ಅವರು ಭಾಗವಹಿಸಲಿದ್ದಾರೆ, ಅತಿಥಿಗಳಾಗಿ ಭಾಗ್ಯನಗರ ಪಟ್ಟಣ ಪಂಚಾಯತಿ ಸರ್ವ ಸದಸ್ಯರು ಉಪ್ಪಸ್ಥಿರಿವರು ಎಂದರು.

ಏ.21 ರಂದು ಸಂಜೆ 6 ಗಂಟೆಗೆ‌ ನಾಡಿನ‌

ಶ್ರೀಗಳವರ ದಿವ್ಯ ಸಾನಿಧ್ಯದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯರ ಮಹಾರಥೋತ್ಸವ ಜರುಗಲಿದೆ. ಈ ಮೂರು ದಿನಗಳ ಜಾತ್ರಾ ‌ಕಾರ್ಯಕ್ರಮಗಳಿಗೆ ಸದ್ಬಕ್ತರು ಆಗಮಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಶ್ರೀ ಶಾರದಾಂಬಾ ಮಹಿಳಾ ಅಭಿವೃದ್ಧಿ ಸಂಘದ ಅಧ್ಯಕ್ಷರಾದ‌‌ ವನಿತಾ ಕೋರಿ, ಖಜಾಂಚಿ ಸರೋಜಾ ಬಾಕಳೆ, ಶ್ರೀ ಶಂಕರ ಯುವಕ ಸಂಘದ ಅಧ್ಯಕ್ಷ ಗಂಗಾಧರ ನೇವಾರ, ಸಹ ಕಾರ್ಯದರ್ಶಿ ಈರಣ್ಣ ಪಗಡಾಲ ಇದ್ದರು.







Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*