Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಹಾರದಲ್ಲಿ ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಹತ್ಯೆ

ಬಿಹಾರ,25: 2024ರ ಲೋಕಸಭೆ ಚುನಾವಣೆ ಯ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಬಿಹಾರದಲ್ಲಿ ಜೆಡಿಯು ಯುವ ಮುಖಂಡನ ಬರ್ಬರ ಹತ್ಯೆ ನಡೆದಿದೆ. ಜನತಾ ದಳ ಯುನೈಟೆಡ್ (ಜೆಡಿಯು) ನಾಯಕ ಸೌರಭ್ ಕುಮಾರ್ (33) ಅವರನ್ನು ಬಿಹಾರದ ರಾಜಧಾನಿ ಪಾಟ್ನಾದ ಪನ್‌ಪುನ್‌ನಲ್ಲಿ ನಿನ್ನೆ ರಾತ್ರಿ ಹತ್ಯೆ ಮಾಡಲಾಗಿದೆ. ಜೆಡಿಯು ಮುಖ್ಯಮಂತ್ರಿ ನಿತೀಶ್ ಕುಮಾರ್ಅವರ ಪಕ್ಷವಾಗಿದ್ದು, ಸೌರಭ್ ಪಕ್ಷದ ಸರ್ವಾಂಗೀಣ ನಾಯಕರಾಗಿದ್ದರು.

ಅವರ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ತನ ಸ್ನೇಹಿತ ಮುನ್ಮುನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಪರ್ಸಾ ಬಜಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಮೃತದೇಹವನ್ನು ತಮ್ಮ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತನ ಸ್ನೇಹಿತ ಮುನ್ಮುನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಗುಂಡು ತಗುಲಿದ ಪರಿಣಾಮ ಕುಮಾರ್ ಮೃತಪಟ್ಟಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೌರಭ್ ಕುಮಾರ್ ತನ್ನ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ನೀತಿ ಸಂಹಿತೆಯ ನಡುವೆಯೇ ನಡೆದಿರುವ ಘಟನೆಯಿಂದ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಘಟನೆಯಿಂದ ಆಕ್ರೋಶಗೊಂಡ ಜನರು ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿ ಪಾಟ್ನಾ-ಗಯಾ ಹೆದ್ದಾರಿ ತಡೆ ನಡೆಸಿದರು. ಸೌರಭ್ ಕುಮಾರ್ ಹತ್ಯೆಯ ಮಾಹಿತಿ ತಿಳಿದ ತಕ್ಷಣ ಪಟ್ಲಿಪುತ್ರ ಕ್ಷೇತ್ರದ ಪಕ್ಷದ ಅಭ್ಯರ್ಥಿ ಹಾಗೂ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರಿ ಮಿಸಾ ಭಾರತಿ ಅವರು ಸೌರಭ್ ಕುಮಾರ್ ಅವರ ಮನೆಗೆ ಮುಂಜಾನೆಯೇ ಆಗಮಿಸಿದ್ದರು.

ಸೌರಭ್ ಹತ್ಯೆಯ ನಂತರ ದುಃಖದಲ್ಲಿರುವ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ನಾಳೆ ಅಂದರೆ ಏಪ್ರಿಲ್ 26ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್​ 4ಕ್ಕೆ ಫಲಿತಾಂಶ ಹೊರಬರಲಿದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ