ಮತ್ತೊಂದೆಡೆ, ಪ್ಯಾಕೆಟ್ಗಳಲ್ಲಿ, ಬಾಟಲ್ಗಗಳಲ್ಲಿ ಶರಬತ್ತು ಮಾರಾಟವೂ ಜೋರಾಗಿದೆ. ಆದರೆ, ಈ ಶರಬತ್ತು ತಯಾರಿಸಲು ಕಲುಷಿತ ನೀರಿನ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಸಕ್ಕರೆ ಮಿಶ್ರಿತ ನೀರನ್ನು ಮುಚ್ಚಿದ ಡಬ್ಬಿಯಲ್ಲಿ ಇಡುವುದರಿಂದ ನೀರು ಕಲುಷಿತವಾಗುತ್ತದೆ. ಹೀಗಾಗಿ ಜಿಲೇಬಿ ಮತ್ತು ಶರಬತ್ ಗುಣಮಟ್ಟ ತಪಾಸಣೆಗೆ ವಿಶೇಷ ಕಾರ್ಯಾಚರಣೆ ನಡೆಸಲು ಆಹಾರ ಇಲಾಖೆ ಮುಂದಾಗಿದೆ. ಮುಂದಿನ 3 ದಿನಗಳಲ್ಲಿ ಪ್ರತಿ ಜಿಲ್ಲೆಗಳಲ್ಲಿ ತಲಾ 5 ಮಾದರಿ ಸಂಗ್ರಹ ಮಾಡಲಾಗುತ್ತದೆ. ಇಂಥಾ ತಿನಿಸುಗಳನ್ನು ಸೇವಿಸುವ ಮುನ್ನ ಎಚ್ಚರ ಅಗತ್ಯ ಎಂದು ಕೆಸಿ ಜನರಲ್ ಆಸ್ಪತ್ರೆ ಆಹಾರ ತಜ್ಞ ಕೀರ್ತಿ ಹಿರಿಸಾವೆ ಕೂಡ ಎಚ್ಚರಿಕೆ ನೀಡಿದ್ದಾರೆ.