Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಂಗೋ ಸೆಕೆಂಡ್ ಪೋಸ್ಟರ್ ಬಿಡುಗಡೆ



     ಡಾಲಿ ಪಿಚ್ಚರ್ಸ್ ಮತ್ತು ತ್ರಿಶೂಲ್ ವಿಜನರಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ಅಭಿನಯದ 'ಜಿಂಗೋ' ಚಿತ್ರದ ಸೆಕೆಂಡ್ ಲುಕ್ ಪೋಸ್ಟರ್ ನ  ಧನಂಜಯ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ.

     "ಈ ಪೋಸ್ಟರ್ ನಲ್ಲಿ ತುಂಬಾ ವಿವರಗಳಿವೆ. ಮೇಲ್ನೋಟಕ್ಕೆ ಒಂದು ಫನ್ ಪೋಸ್ಟರ್ ಥರ ಕಾಣುತ್ತೆ, ಸೂಕ್ಷ್ಮವಾಗಿ ನೋಡುತ್ತಾ ಹೋದಂತೆ ತೆರೆದುಕೊಳ್ಳುತ್ತೆ. ಸಿನಿಮಾ ಕೂಡ ಇದೇ ಇರುತ್ತದೆ. ಎಲ್ಲಾ ವರ್ಗಗಳ ಪ್ರೇಕ್ಷಕರಿಗೂ ಇದರಲ್ಲಿ ತೆಗೆದುಕೊಳ್ಳುವಂಥ

ಅಂಶಗಳಿರುತ್ತದೆ, ಒಟ್ಟಿನಲ್ಲಿ ೨೦೨೬ ಕ್ಕೆ ಒಂದು ಮಜಾ ಚಿತ್ರಕ್ಕೆ ಪ್ರೇಕ್ಷಕರು ಸಜ್ಜಾಗಲಿ” ಎನ್ನುತ್ತಾರೆ ನಿರ್ದೇಶಕ ಶಶಾಂಕ್ ಸೋಗಾಲ್

    ಕಳೆದ ವರ್ಷ ಬಿಡುಗಡೆಯಾದ ಚಿತ್ರದ ಅನೌನ್ಸ್ಮೆಂಟ್ ವಿಡಿಯೋಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಚರ್ಚೆಯನ್ನು ಸೃಷ್ಟಿಸಿತು, ಡಾಲಿ ಧನಂಜಯ ಅವರ 'ಜಿಂಗೋ' ಮೋನೋಲಾಗ್ ಮತ್ತು ಅದರ ಜೊತೆಗಿನ ಸಂಗೀತ 'ನರ ನರ ಜಿಂಗೋ' ಜನರ ಮೆಚ್ಚುಗೆ ಪಡೆಯಿತು.

      ವಿಸ್ತೃತ ದೃಷ್ಟಿಕೋನ

ಪ್ರೇಕ್ಷಕರ ಅಗಾಧ ಪ್ರತಿಕ್ರಿಯೆಯಿಂದ ಉತ್ಸಾಹಗೊಂಡ ಚಿತ್ರ ನಿರ್ಮಾಪಕರು ಕಥೆಯ ವ್ಯಾಪ್ತಿ ಮತ್ತು ಚಿತ್ರದ ಕ್ಯಾನ್ವಾಸ್ ಅನ್ನು ಗಣನೀಯವಾಗಿ ವಿಸ್ತರಿಸಿದ್ದಾರೆ.

"ನಮಗೆ ಸಿಕ್ಕ ಪ್ರತಿಕ್ರಿಯೆ ನಮ್ಮನ್ನು ದೊಡ್ಡದಾಗಿ ಯೋಚಿಸಲು ಪ್ರೇರೇಪಿಸಿದೆ. 2026ರಲ್ಲಿ ವೀಕ್ಷಕರಿಗೆ ವಿಶಿಷ್ಟ ಚಿತ್ರರಂಗದ ಅನುಭವವನ್ನು ನೀಡುತ್ತದೆ. ಪೊಲಿಟಿಕಲ್ ಸಟೈರ್, ಕಾಮಿಡಿ, ಆಕ್ಷನ್, ಥ್ರಿಲ್ಲರ್ ಎಲ್ಲಾ ಅಂಶಗಳನ್ನು ಹದವಾಗಿ ಬೆರೆಸಿ ಪ್ರೇಕ್ಷಕರಿಗೆ ಅತ್ಯುತ್ತಮ ಮನರಂಜನೆ ಕೊಡಬೇಕು ಎಂಬುದೇ ನಮ್ಮ ಗುರಿ. ಸದ್ಯ ಕನ್ನಡ, ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದ್ದು, ಅತ್ಯುತ್ತಮ ನಟರ  ತಾರಾ ಬಳಗವಿರುತ್ತದೆ" ಎಂದು ನಿರ್ಮಾಣ ತಂಡ ತಿಳಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ