ರಾಯಬಾಗ: ತಾಲೂಕಿನ ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಆ.15 ರಿಂದ ಸೆ.15 ರವರೆಗೆ ಜಾಬ್ ಕಾರ್ಡ್ ಮೇಳ ಹಮ್ಮಿಕೊಳ್ಳಲಾಗಿದ್ದು, ಅರ್ಹ ಕೂಲಿಕಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾ.ಪಂ.ಇಒ ಅರುಣ ಮಾಚಕನ್ನವರ ತಿಳಿಸಿದ್ದಾರೆ.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಾಬ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಜಾಬ್ ಕಾರ್ಡ್ ಮೇಳ ಆಯೋಜಿಸಲಾಗಿದ್ದು, ಈ ಮೇಳದ ಮೂಲಕ ಗ್ರಾಮೀಣ ಭಾಗದ ಅರ್ಹ ಕೂಲಿಕಾರರಿಗೆ ಜಾಬ್ ಕಾರ್ಡ್ ಒದಗಿಸಲಾಗುತ್ತಿದೆ. ಸಕ್ರಿಯವಲ್ಲದ ಕೂಲಿಕಾರನ್ನು ಸಕ್ರಿಯಗೊಳಿಸಲಾಗುತ್ತಿದೆ. ಅರ್ಹ ಕೂಲಿಕಾರರಿಗೆ ಹೊಸ ಜಾಬ್ ಕಾರ್ಡ್ ಸಹಿತ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈ ಮೇಳದಲ್ಲಿ ಅರ್ಹ ಕೂಲಿಕಾರರು ಭಾಗವಹಿಸಬೇಕು. ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ಕೆಲಸ ನೀಡಲಾಗುತ್ತಿದೆ. 382 ರೂ. ಕೂಲಿ ನೀಡಲಾಗುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಾಗುತ್ತಿದ್ದು, 125 ದಿನವರೆಗೆ ಕೆಲಸ ನೀಡಲಾಗುತ್ತಿದೆ. ಹಾಗಾಗಿ ಎಲ್ಲ ಕೂಲಿಕಾರರು ಉದ್ಯೋಗ ಪಡೆದುಕೊಳ್ಳಬೇಕು. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಗ್ರಾಮ ಪಂಚಾಯತ್ ಸಂಪರ್ಕಿಸುವಂತೆ ತಿಳಿಸಿದರು.
ಐ ಇ ಸಿ ಸಂಯೋಕ ಮುತ್ತುರಾಜ ಗದಾಡಿ ಹಾಗೂ ಅಶೋಕ ಯಳಗುಡೆ ಹಾಗೂ ಇತರರು ಇದ್ದರು.