Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗ ಸೃಷ್ಟಿ ನಮ್ಮ ಗುರಿ

ಬಳ್ಳಾರಿ, ಮೇ.28: ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿ, ಸಮಾಜಮುಖಿ ಘನತೆವೆತ್ತ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ ನೇತೃತ್ವದಲ್ಲಿ ಜನಸೇನಾ ಪಕ್ಷ ಕಾರ್ಯನಿರ್ವಹಿಸುತ್ತಿದೆ ಎಂದು ಜನಸೇನಾ ಪಕ್ಷದ ಸಂಸ್ಥಾಪಕ ಅಧ್ಯಕ್ಷ ರವಿ ಭಾರತೀಯ ಹೇಳಿದರು.
ನಗರದ ಎಸ್ಎಲ್ವಿ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಕ್ಷದ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಯುವಕರು ನಿರುದ್ಯೋಗ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವಜನತೆಗೆ ಉದ್ಯೋಗ, ಶಿಕ್ಷಣ ಹಾಗೂ ಸ್ವಾವಲಂಬನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಜನಸೇನಾ ಪಕ್ಷ ಜನಸೇವೆ ಮಾಡುತ್ತಿದೆ ಎಂದು ತಿಳಿಸಿದರು.
“ಜನರಿಗಾಗಿ, ಜನರಿಗೋಸ್ಕರ ನಿರ್ಮಾಣವಾದ ಪಕ್ಷವೇ ಜನಸೇನಾ ಪಕ್ಷ. ಬಳ್ಳಾರಿ ಜಿಲ್ಲೆಯ ಯುವಕರು ಹಾಗೂ ಯುವತಿಯರಿಗೆ ಶಕ್ತಿ ತುಂಬುವ ಕೆಲಸವನ್ನು ಪಕ್ಷ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಪಕ್ಷದ ತತ್ವ ಹಾಗೂ ಕಾರ್ಯಕ್ರಮಗಳನ್ನು ಹೆಚ್ಚು ಜನರಿಗೆ ತಲುಪಿಸಿ, ಜಿಲ್ಲೆಯಲ್ಲಿ ಪಕ್ಷವನ್ನು ಬಲಪಡಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು” ಎಂದು ಕರೆ ನೀಡಿದರು.
ಸಭೆಯಲ್ಲಿ ಮಾತನಾಡಿದ ಪಕ್ಷದ ಮುಖಂಡರು, ರಾಜ್ಯದಲ್ಲಿ ಉತ್ತಮ ಆಡಳಿತ, ಯುವಕರಿಗೆ ಉದ್ಯೋಗ ಸೃಷ್ಟಿ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುವ ರಾಜಕೀಯ ಪರ್ಯಾಯದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಕರ್ನಾಟಕದಲ್ಲಿಯೂ ಜನಸೇನಾ ಪಕ್ಷ ಬಲವಾಗಿ ಬೆಳೆಯಬೇಕು ಎಂಬ ಆಶಾಭಾವನೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಕ್ಷ ಸಂಘಟನೆಯ ಉಸ್ತುವಾರಿ ಮುರಳಿ ಗೌಡ, ಮುರಳಿ ಕೃಷ್ಣ, ರೂಪಾ ರೆಡ್ಡಿ, ವೆಂಕಟೇಶ, ಪದ್ಮಾವತಿ, ಸುಭಾಷ್ ಆಚಾರ್ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಎ ಬಿ, ಶ್ರೀ ಸತ್ಯಂ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಧ್ಯಾಪಕರು ನಿರೂಪಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ