ಕಾಗವಾಡ,ಜೂ,೩೦ : ನಿರ್ಲಕ್ಷ್ಯ ವಹಿಸದೆ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಯುವ ಮುಖಂಡ ಕಾಕಾ ಪಾಟೀಲ ತಿಳಿಸಿದರು.
ಅವರು ಭಾನುವಾರ ಕಾಗವಾಡ ಪಟ್ಟಣದ ಬಸ್ ನಿಲ್ದಾಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಐದುವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಮಕ್ಕಳ ಆರೋಗ್ಯವೇ ದೇಶದ ಅಮೂಲ್ಯ ಸಂಪತ್ತು. ಪೋಲಿಯೋ ಎಂಬ ಮಾರಕ ಕಾಯಿಲೆಯನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಪ್ರತಿಯೊಬ್ಬ ಪೋಷಕರು ಐದು ವರ್ಷದೊಳಗಿನ ತಮ್ಮ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋಲಸಿಕೆ ಹಾಕಿಸಬೇಕು.ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಲ್ಲರೂ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ನಾಥಗೌಡ ಪಾಟೀಲ ಕರೆ ನೀಡಿದರು.
ಈ ವೇಳೆ ತಾಲೂಕಾ ಆರೋಗ್ಯಾಧಿಕಾರಿ ಪುಷ್ಪಲತಾ ಸುಣ್ಣದಕಲ್ಲ ಮಾತನಾಡಿ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ ಸಹ, ಈ ಬಾರಿ ತಪ್ಪದೇ ಮೊದಲ ದಿನದಂದೇ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಜೂ.೨೮ರಂದು ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಬಳಿಕ ಜುಲೈ ೧ರವರೆಗೆ ಮೂರು ದಿನಗಳ ಕಾಲಆರೋಗ್ಯಕಾರ್ಯಕರ್ತರು ಮತ್ತು ಅಂಗನವಾಡಿ ಕಾರ್ಯಕತೆ-?ರಯರು ಪ್ರತಿ ಮನೆಗೆ ಭೇಟಿ ನೀಡಲಿದ್ದಾರೆ.ಬೂತ್‌ಗಳಲ್ಲಿ ಲಸಿಕೆ ಪಡೆಯದ ಮಕ್ಕಳನ್ನು ಪತ್ತೆ ಹಚ್ಚಿ ಲಸಿಕೆ ನೀಡಲಾಗುವುದು. ಈ ಅಭಿಯಾನಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಕಾಕಾ ಪಾಟೀಲ,ನಾಥಗೌಡ ಪಾಟೀಲ, ಸುಜಾತಾ ಪಾಟೀಲ,ಸೌಮ್ಯ ಪಾಟೀಲ, ಜಾವಿದ ಮುಜಾವರ,ರವಿಕುಮಾರ ಸಾಲುಡಗಿ,ಪ್ರತಿಭಾ ನರೋಟೆ, ಸೂರಜ ಹೊನ್ನಕಾಂಬಳೆ, ಗೋವಿಷ ರಾಮದುರ್ಗ, ಸೂರಜ ಕುಂಬಾರ ಸತೀಶ ಪಾಟೀಲ, ಮಲ್ಲಿಕಾರ್ಜುನ ಕಾಂಬಳೆ.ಸೇರಿದಂತೆ ಆಸ್ಪತ್ರೆಯ ವೈದ್ಯರು. ಸಿಬ್ಬಂದಿ ವರ್ಗದವರು. ಗಣ್ಯರು ಹಾಗೂ ಪಾಲಕರು ಉಪಸ್ಥಿತರಿದ್ದರು.
