Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿಕಾರಿ ಜಂಟಿ ಭೇಟಿ

ವೈದ್ಯಕೀಯ ಕಾಲೇಜ ನಿರ್ಮಾಣ ಕಾಮಗಾರಿ ಪರಿಶೀಲನೆ

ಬಾಗಲಕೋಟೆ, ಜುಲೈ ೨೩: ಜಿಲ್ಲೆಯಲ್ಲಿ ನಡೆಯುತ್ತಿರುವ ವೈದ್ಯಕೀಯ ಕಾಲೇಜಿನ ಹಾಗೂ ಸಂಶೋಧನಾ ಕೇಂದ್ರ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ ಮೊಹಸೀನ್ ಅವರು ಜಿಲ್ಲಾಧಿಕಾರಿ ಸಂಗಪ್ಪ ಅವರೊಂದಿಗೆ ಬುಧವಾರ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈಗಾಗಲೇ ರೂಪಿಸಲಾದ ಯೋಜನೆಯ ಮೂಲಕ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿದ ಅವರು ಕಾಮಗಾರಿ ನಿಗದಿತ ಅವಧಿಯಲ್ಲಿ ಹಾಗೂ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಕ್ರಮವಹಿಸಲು ತಿಳಿಸಿದರು. ವೈದ್ಯಕೀಯ ಶಿಕ್ಷಣದ ಜೊತೆಗೆ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ನಿರ್ಮಿಸುವುದು ಅತ್ಯಂತ ಮಹತ್ವಾಗಿದೆ. ಕಾಮಗಾರಿಯಲ್ಲಿ ಯಾವುದೇ ವಿಳಂಬವಾಗದಂತೆ ನಿರಂತರ ಮೇಲ್ವಿಚಾರಣೆ ನಡೆಸಬೇಕು ಎಂದರು.
ಜಿಲ್ಲಾಧಿಕಾರಿ ಸಂಗಪ್ಪ ಅವರು ಕಾಮಗಾರಿಯ ಪ್ರಸ್ತುತ ಹಂತ, ಇದುವರೆಗೆ ಸಾಧಿಸಿರುವ ಪ್ರಗತಿ ಹಾಗೂ ಬಾಕಿ ಇರುವ ಕೆಲಸಗಳ ಕುರಿತು ಯೋಜನೆಯ ನಕ್ಷೆಯ ಮೂಲಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದರು. ನಿರ್ಮಾಣ ಕಾರ್ಯವನ್ನು ವೇಗಗೊಳಿಸಿ ಸರ್ಕಾರದ ಗಡುವಿನೊಳಗೆ ಪೂರ್ಣಗೊಳಿಸಲು ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಂಡಿದೆ ಎಂದು ತಿಳಿಸಿದರು. ಪರಿಶೀಲನೆ ವೇಳೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಸೇರಿದಂತೆ ಇಗತರೆ ಅಧಿಕಾರಿಗಳು ಇದ್ದರು.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಖಾಸ್ಗತನ ಮಿರ್ಚಿಬಜಿ-ಪಲಾವ್ ಪ್ರಸಾದ ಸವಿದ ಸದ್ಭಕ್ತರು"ರಾಷ್ಟ್ರಧ್ವಜವು ನಾಗರಿಕರ ದೇಶಭಕ್ತಿಯನ್ನು ಬಲಪಡಿಸುತ್ತದೆ"ಮಂದಿರ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ವೇಗ: ಗ್ರಾಮಸ್ಥರೊಂದಿಗೆ ಚರ್ಚಿಸಿದ ಚನ್ನರಾಜ ಹಟ್ಟಿಹೊಳಿ ದಕ ಮಾದರಿಯಲ್ಲಿ ಉಕ ದೇವಾಲಯಗಳ ಅಭಿವೃದ್ಧಿಪಡಿಸಿಶ್ರೀ ಸತ್ಯ ಸಾಯಿ ಬಾಲ ವಿಕಾಸ ತರಗತಿಗಳನ್ನು ಬೋಧಿಸಲು ಮನವಿಮಲೇರಿಯಾ, ಡೆಂಘೀ ಪ್ರಕರಣಗಳಿಗೆ ಅಗತ್ಯ ಕ್ರಮಕೈಗೊಳ್ಳಿವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ : ಆಕಾಶ ನಂದಗಾಂವನಾಳೆ ಸುರೇಬಾನ-ಮನಿಹಾಳ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಸಾಂಸ್ಕೃತಿಕ ಕ್ರೀಡೆ, ಇ ಎಲ್ ಸಿ. ರೇಂಜರ್ ಮತ್ತು ರೋವರ್ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭರೈತರಲ್ಲಿ ಪರ್ಯಾಯ ಬೆಳೆ ಬೆಳೆಯಲು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳದೆಹಲಿ ಪೊಲೀಸರು ಪ್ರತಿಭಟನೆ ನಿರತ ವಿದ್ಯಾರ್ಥಿ ಗಳ ಮೇಲೆ   ಶಾಕ್ ಬಟನ್, ಪೆಲ್ಲೆಟ್ ಗನ್ ಬಳಸಿ ದೌರ್ಜನ್ಯ:   ಕ್ರಮ ವಿರುದ್ಧ ಹೊಸಪೇಟೆಯಲ್ಲಿ ಎಐಡಿಎಸ್‌ಒ ಆಕ್ರೋಶ*