Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ವಿವಿಧ ಪ್ರಕಣಗಳ ಸಂಧಾನ : ನ್ಯಾಯಾಧೀಶೆ ಕೆ.ಜಿ ಶಾಂತಿ

 

ಬಳ್ಳಾರಿ,ಜು.14: ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡು ಒಟ್ಟು 31 ನ್ಯಾಯಾಲಯಗಳಲ್ಲಿ ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ನಡೆದು ಸಾರ್ವಜನಿಕರು, ಪಕ್ಷಕಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಜಿ.ಶಾಂತಿ ಅವರು ಹೇಳಿದರು.

ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಶನಿವಾರ ಏರ್ಪಡಿಸಿದ್ಧ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು ಈ ಲೋಕ್ ಅದಾಲತ್ ಸಹಾಯವಾಗಲಿದೆ. ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಎಂದು ತಿಳಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 69,354 ವಿವಿಧ ಚಾಲ್ತಿ ಪ್ರಕರಣಗಳಿದ್ದು, ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 19784 ಪ್ರಕರಣಗಳನ್ನು ಗುರುತಿಸಿದ್ದು, ಈಗಾಗಲೇ 11931 ಪ್ರಕರಣಗಳು ರಾಜೀಯಾಗಿವೆ ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ ಎಂದರು.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದಾಗುವ ಪ್ರಯೋಜನಗಳ ಬಗ್ಗೆ ತಿಳಿಸಲಾಗುತ್ತದೆ. ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು 67 ಜನ ಮಧ್ಯಸ್ಥಿಕೆದಾರರು ಇದ್ದಾರೆ ಎಂದು ತಿಳಿಸಿದರು.

ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ಜುಲೈ 13 ರಿಂದ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಅಭಿಯಾನ ಜರುಗುವ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಬೇಕು. ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಗೆ ಭೇಟಿ ನೀಡಬಹುದು ಎಂದು ಅವರು ತಿಳಿಸಿದರು.

ಸರ್ವೋಚ್ಚ ನ್ಯಾಯಾಲಯವು ವಿಶೇಷ ಲೋಕ್ ಅದಾಲತ್ ಅನ್ನು ಜುಲೈ 11 ರಿಂದ ಅಕ್ಟೋಬರ್ 07 ರ ವರೆಗೆ ನಡೆಸಲು ಉದ್ದೇಶಿಸಲಾಗಿದ್ದು, ಪಕ್ಷಕಾರರು ಮಧ್ಯಸ್ಥಿಕೆ ಮೂಲಕ ಎದುರುದಾರರ ಲೋಕ್ ಅದಾಲತ್ ಅನ್ನು ನಡೆಸಲು ವಿಡಿಯೋ ಕಾನ್ಸರೆನ್ಸ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಗೆ ಸಂಬಂಧಿಸಿದ ವಿವಿಧ ಪ್ರಕರಣಗಳು ಸರ್ವೋಚ್ಛ ನ್ಯಾಯಾಲಯದಲ್ಲಿಯೂ ಇವೆ. ಇವುಗಳನ್ನು ಸಹ ಲೋಕ್ ಅದಾಲತ್‌ನಲ್ಲಿ ರಾಜಿಗೆ ಪರಿಗಣಿಸಲಾಗಿದೆ ಎಂದರು.

ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ