LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜೂನ್ ತಿಂಗಳ ಗೃಹಲಕ್ಷ್ಮಿ ಹಣ ವರ್ಗಾವಣೆ, ಜುಲೈ, ಆಗಸ್ಟ್ ತಿಂಗಳ ಹಣ ಬಾಕಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳುವುದೇನು?

ಬೆಂಗಳೂರು, ಸೆಪ್ಟೆಂಬರ್ 10: ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗದ ವಿಚಾರ ಕಳೆದ ಕೆಲವು ತಿಂಗಳುಗಳಿಂದ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷವು ಜನರನ್ನು ವಂಚಿಸುತ್ತಿದೆ ಎಂದು ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಟೀಕಿಸಿದ್ದವು. ಆದರೆ, ತಾಂತ್ರಿಕ ಕಾರಣಗಳಿಂದ ಗೃಹಲಕ್ಷ್ಮಿ ಹಣ ವರ್ಗಾವಣೆಯಾಗುತ್ತಿದೆ. ಖಂಡಿತವಾಗಿಯೂ ಸರ್ಕಾರವು 2000 ರೂ. ವರ್ಗಾವಣೆ ಮಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದರು. ಇದೀಗ ಕೊನೆಗೂ ಜೂನ್ ತಿಂಗಳ ಹಣ ಮಹಿಳೆಯರ ಖಾತೆಗಳಿಗೆ ವರ್ಗಾವಣೆಯಾಗಿದೆ.





ಜುಲೈ ಹಾಗೂ ಆಗಸ್ಟ್​ ತಿಂಗಳ ಗೃಹಲಕ್ಷ್ಮಿ ಹಣವನ್ನು ಖಾತೆಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭವಾಗಿಲ್ಲ. ಹೀಗಾಗಿ ಜುಲೈ ತಿಂಗಳ‌ ಬರುವುದು ವಿಳಂಬವಾಗುವ ಸಾಧ್ಯತೆ ಇದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸದ್ಯ ಮಹಿಳಾ ಮತ್ತು ಮಕ್ಕಳ ಇಲಾಖೆಯಯಿಂದ ಈಗಾಗಲೇ ಜುಲೈ ತಿಂಗಳ ಹಣಕ್ಕೆ ಪತ್ರ ಬರೆಯಲಾಗಿದೆ. ಇನ್ನೂ ಹಣ ಬಿಡುಗಡೆ ಮಾಡಿಲ್ಲ.‌ ಹೀಗಾಗಿ ಜುಲೈ ತಿಂಗಳ ಹಣ ಬರುವುದು ತಡವಾಗಲಿದೆ. ಸರ್ಕಾರ ನಮಗೆ ಬೇಗ ಕೊಟ್ಟರೆ ನಾವು ಖಾತೆಗಳಿಗೆ ವರ್ಗಾವಣೆ ಮಾಡುತ್ತೇವೆ. ಆದರೆ, ಸರ್ಕಾರದಿಂದ ಹಣ ಬಿಡುಗಡೆ ಮಾಡುವುದು ತಡವಾಗುತ್ತಿದೆ ಎಂದಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆ