Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಪ್ರೇಮಿಗಳ ದಿನಕ್ಕೆ ಜಸ್ಟ್ ಮ್ಯಾರೀಡ್  ಪ್ರೇಮಗೀತೆ           


     ಅಬ್ಸ್ ಸ್ಟುಡಿಯೋಸ್  ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್. ಬಾಬಿ ಅವರು ನಿರ್ಮಿಸುತ್ತಿರುವ, ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ  'ಜಸ್ಟ್ ಮ್ಯಾರೀಡ್' ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಎರಡು ಹಾಡುಗಳ ಮೂಲಕ 'ಜಸ್ಟ್ ಮ್ಯಾರೀಡ್' ಜನರ ಮನಸ್ಸಿಗೆ ಹತ್ತಿರವಾಗಿದೆ. ಪ್ರೇಮಿಗಳ ದಿನವಾದ ಇಂದು ಈ ಚಿತ್ರದ ಮೂರನೇ ಹಾಡು ಬಿಡುಗಡೆಯಾಗಲಿದೆ.

    ಪ್ರೇಮಕವಿ ಕೆ.ಕಲ್ಯಾಣ್ ಬರೆದು ಸರಿಗಮಪ ಖ್ಯಾತಿಯ ಜಸ್ಕರಣ್ ಸಿಂಗ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ 'ಇದು ಮೊದಲ ಸ್ವಾಗತಾನಾ' ಎಂಬ ಸುಮಧುರ ಪ್ರೇಮಗೀತೆಯನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರು ಅನಾವರಣ ಮಾಡಲಿದ್ದಾರೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಈ ಚಿತ್ರದ ಎಲ್ಲಾ ಹಾಡುಗಳು ಬಿಡುಗಡೆಯಾಗಲಿದೆ.

     'ಜಸ್ಟ್ ಮ್ಯಾರೀಡ್' ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಕೆ.ಆರ್.ಜಿ ಸ್ಟುಡಿಯೋಸ್ ಈ ಚಿತ್ರದ ವಿತರಣೆ ಹಕ್ಕನ್ನು ಪಡೆದುಕೊಂಡಿದ್ದಾರೆ.

     ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಈ ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಇಷ್ಟು ದಿವಸ ಸಂಗೀತ ಕ್ಷೇತ್ರದಲ್ಲಿ ಹೆಸರು‌ ಮಾಡಿದ್ದ ಸಿ.ಆರ್. ಬಾಬಿ ಅವರು ಈ ಚಿತ್ರದ ಮೂಲಕ ನಿರ್ದೇಶಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ಬಾಬಿ ಅವರೆ ಕಥೆ ಬರೆದಿದ್ದಾರೆ. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.

      ಪಿ ಜಿ  ಛಾಯಾಗ್ರಹಣ, ಶ್ರೀಕಾಂತ್ ಮತ್ತು ಅಶಿಕ್ ಕುಸುಗೊಳ್ಳಿ ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಮೋರ್, ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ನೃತ್ಯ ನಿರ್ದೇಶನವಿರುವ 'ಜಸ್ಟ್ ಮ್ಯಾರೀಡ್' ಚಿತ್ರದ ಹಾಡುಗಳನ್ನು ಪ್ರಮೋದ್ ಮರವಂತೆ ಮತ್ತು ಧನಂಜಯ್ ಬರೆದಿದ್ದಾರೆ.

     ದೇವರಾಜ್,  ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ,  ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ ಅನಿಲ್, ಕುಮುದಾ, ಜಯರಾಮ್, ವೇದಿಕಾ ಕಾರ್ಕಳ್ ಮುಂತಾದವರ ತಾರಾಬಳಗವಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿಶ್ರೀ ಸಾಯಿ ಕಾಲೇಜಿನ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ವಿಧಾನ ಪರಿಷತ್ ಸದಸ್ಯ  ಸ್ಥಾನಕ್ಕೆ ಐದನೇ ಬಾರಿ ಆಯ್ಕೆಯಾದ ಶಶೀಲ್. ಜಿ. ನಮೋಶಿ ಅವರಿಗೆ ಹೊಸಪೇಟೆ ಯಲ್ಲಿ ಅದ್ಧೂರಿ ಸ್ವಾಗತ*ಬಿಜೆಪಿ ಮೋರ್ಚಾ ಪದಾಧಿಕಾರಿಗಳ ಮಹತ್ವದ ಸಭೆ*ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವಿಶ್ವವಿದ್ಯಾಲಯ ಬಾಸ್ಕೆಟ್‌ಬಾಲ್ ತಂಡಕ್ಕೆ ತನ್ವೀರ್ ಆಯ್ಕೆಶ್ರೀ ವಿಶ್ವಗುರು ಸೌಹಾರ್ದ ಸೊಸೈಟಿ  ಅಧ್ಯಕ್ಷರಾಗಿ ಅರವಿಂದ ಬಡಕುಂದ್ರಿ, ಉಪಾಧ್ಯಕ್ಷರಾಗಿ ಬರಮಪ್ಪ ನಾಗನೂರ ಆಯ್ಕೆ.ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ