LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಚುನಾವಣಾ ಆಯೋಗವನ್ನು ಬೆಂಬಲಿಸಿ ನ್ಯಾಯಮೂರ್ತಿಗಳು, ನಿವೃತ್ತ ಅಧಿಕಾರಿಗಳು ಬಹಿರಂಗ ಪತ್ರ

ನವದೆಹಲಿ, ನವೆಂಬರ್ 19: ಕೇಂದ್ರ ಚುನಾವಣಾ ಆಯೋಗವನ್ನು ಬೆಂಬಲಿಸಿ ನ್ಯಾಯಮೂರ್ತಿಗಳು, ನಿವೃತ್ತ ಅಧಿಕಾರಿಗಳು ಬಹಿರಂಗ ಪತ್ರ ಬರೆದಿದ್ದಾರೆ. ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಕಳಂಕ ಹೊರಿಸಲು ಯತ್ನಿಸುತ್ತಿರುವ ಕಾಂಗ್ರೆಸ್​ ಪಕ್ಷದ ವಿರುದ್ಧವಾಗಿ 16 ನ್ಯಾಯಮೂರ್ತಿಗಳು, 123 ನಿವೃತ್ತ ಅಧಿಕಾರಿಗಳು, 133 ಸಶಸ್ತ್ರ ಪಡೆಗಳ ನಿವೃತ್ತ ಅಧಿಕಾರಿಗಳು ಸೇರಿದಂತೆ 272 ಗಣ್ಯ ನಾಗರಿಕರ ಗುಂಪು ಪತ್ರ ಬರೆದಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅನ್ನು ಖಂಡಿಸಿ ಬಹಿರಂಗ ಪತ್ರ ಬರೆಯಲಾಗಿದೆ.

ಪತ್ರದಲ್ಲಿ ಸಹಿ ಮಾಡಿರುವವರಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಡಿಜಿಪಿ ಎಸ್‌ಪಿ ವೈದ್, ಮಾಜಿ ರಾ ಮುಖ್ಯಸ್ಥ ಸಂಜೀವ್ ತ್ರಿಪಾಠಿ, ಮಾಜಿ ಐಎಫ್‌ಎಸ್ ಲಕ್ಷ್ಮಿ ಪುರಿ ಮತ್ತು ಇತರರಿದ್ದಾರೆ. ಎಸ್‌ಐಆರ್ ಪ್ರಕ್ರಿಯೆ ಮತ್ತು ಚುನಾವಣಾ ಆಯೋಗವನ್ನು ರಾಹುಲ್ ಗಾಂಧಿ ನಿರಂತರವಾಗಿ ಟೀಕಿಸುತ್ತಿರುವ ನಡುವೆಯೇ ಈ ಬೆಳವಣಿಗೆ ಸಂಭವಿಸಿದೆ. ರಾಹುಲ್ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ ಮತಗಳ್ಳತನಕ್ಕೆ ಚುನಾವಣಾ ಆಯೋಗ ಅನುಕೂಲ ಮಾಡಿಕೊಡುತ್ತಿದೆ ಎಂದು ದೂರಿದ್ದರು.

ಎಸ್‌ಐಆರ್ ಪ್ರಕ್ರಿಯೆಯ ಸಮಯದಲ್ಲಿ ಚುನಾವಣಾ ಆಯೋಗದ ನಡವಳಿಕೆ ತೀವ್ರ ನಿರಾಶಾದಾಯಕವಾಗಿದೆ ಎಂದು ಕಾಂಗ್ರೆಸ್ ಹೇಳಿತ್ತು. ಚುನಾವಣಾ ಸಂಸ್ಥೆಯು ಬಿಜೆಪಿಯ ಪ್ರಭಾವದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ತಕ್ಷಣವೇ ಪ್ರದರ್ಶಿಸಬೇಕೆಂದು ಒತ್ತಾಯಿಸಿತ್ತು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್