Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 10ರಂದು ಬಿ.ವಿ.ಬೆಲ್ಲದ ಲಾ ಕಾಲೇಜಿನಿಂದ ರಾಷ್ಟಿçÃಯ ಸಮ್ಮೇಳನ:ಡಾ.ಜ್ಯೋತಿ ಹಿರೇಮಠ

ಕೆ.ಎಲ್.ಇ. ಸೊಸೈಟಿಯ ಬಿ.ವಿ. ಬೆಲ್ಲದ ಕಾನೂನು ಕಾಲೇಜು, ಬೆಳಗಾವಿ, ಉತ್ತಮ ಕಾನೂನು ಶಿಕ್ಷಣವನ್ನು ನೀಡುತ್ತಿರುವ 50 ವರ್ಷಗಳ ಗಣನೀಯ ಸೇವೆಯನ್ನು ಪೂರೈಸಿದ  ಅಂಗವಾಗಿ, ಮೇ 10, 2025 ರಂದು "ಭಾರತದ ಸಂವಿಧಾನ @75: ಸಂವಿಧಾನಾತ್ಮಕತೆಯನ್ನು ಪುನರ್ ಆವಿಷ್ಕರಿಸುವುದು" ಎಂಬ ವಿಷಯದ ಮೇಲೆ ರಾಷ್ಟ್ರೀಯ ಮಟ್ಟದ ಸಮ್ಮೇಳನವನ್ನು ಬೆಳಗಾವಿಯ ಜೆ.ಎನ್.ಎಂ.ಸಿ.ಯ ಡಾ.ಕೊಡ್ಕಣಿ ಸಭಾಂಗಣದಲ್ಲಿ ಮೇ 10 ರಂದು ಬೆಳಿಗ್ಗೆ 10.00 ಗಂಟೆಗೆ ಆಯೋಜಿಸಲಾಗಿದ್ದು, ದೇಶದಾದ್ಯಾಂತ 20 ಕ್ಕೂ ಹೆಚ್ಚು ಕಾಲೇಜುಗಳು ಹಾಗೂ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

75 ವರ್ಷಗಳ ಸಂವಿಧಾನಾತ್ಮಕ ಆಡಳಿತದ ನಂತರ ಭಾರತೀಯ ಪ್ರಜಾಪ್ರಭುತ್ವವು ತಿರುವುಮೋಡಿನಲ್ಲಿ ನಿಂತಿದೆ. ಸಂವಿಧಾನಾತ್ಮಕ ಪ್ರಜಾಪ್ರಭುತ್ವದ ಯಶಸ್ಸು ಅದರ ಮೂಲ ತತ್ವಗಳಾದ ಸಂವಿಧಾನಾತ್ಮಕತೆ, ನ್ಯಾಯ, ಕಾನೂನು ಆಧಿಪತ್ಯದ ಅನುಷ್ಠಾನದಲ್ಲಿ ನಿಂತಿದೆ. ಈ ಸಮ್ಮೇಳನದ ಮುಖಾಂತರ ಸಂವಿಧಾನಾತ್ಮಕತೆಯ ಸವಾಲುಗಳು, ಸಂವಿಧಾನಗಳ ನೈತಿಕತೆಯು, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ಪ್ರಜಾಪ್ರಭುತ್ವ ಇತರೆ ವಿಷಯಗಳ ಕುರಿತು ಸೂಕ್ಷ್ಮ ಚರ್ಚೆಗಳಿಗೆ ವೇದಿಕೆ ಮಾಡಿಕೊಡಲಾಗಿದೆ.

ಸಮ್ಮೇಳನವನ್ನು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಮಾನ್ಯ ಶ್ರೀ ಪ್ರಸನ್ನ ಬಿ. ವರಾಳೆ ಅವರು ಉದ್ಘಾಟಿಸಲಿದ್ದಾರೆ.ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಬಿ. ಕೋರೆ ಅವರು ಅಧ್ಯಕ್ಷೀಯ ನುಡಿಯನ್ನು ಹೇಳಲಿದ್ದಾರೆ.ಈ ಸಮ್ಮೇಳನದ ಸಂವಾದಗಳಲ್ಲಿ ಪ್ರೊ. (ಡಾ.) ಕೆ. ವಿಕ್ರಮನ್ ನಾಯರ್, ಅಧ್ಯಕ್ಷರು, ಡಾ. ಅಂಬೇಡ್ಕರ್ ಚೇರ್, ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯ, ಕೊಟ್ಟಾಯಂ, ಕೇರಳ, ಪ್ರೊ. (ಡಾ.) ಸಂದೀಪ್ ಶಾಸ್ತಿç ಉಪಾಧ್ಯಕ್ಷರು, ನಿಟ್ಟೆ ಎಜುಕೇಶನ್ ಟ್ರಸ್ಟ್, ಬೆಂಗಳೂರು, ಪ್ರೊ. (ಡಾ.) ಕೆ.ಆರ್. ಐತಾಳ್, ಅತಿಥಿ ಪ್ರಾಧ್ಯಾಪಕರು, ಕೆ.ಎಲ್.ಇ. ಕಾನೂನು ಕಾಲೇಜು, ಬೆಂಗಳೂರು, ಪ್ರೊ. (ಡಾ.) ಸಿ. ರಾಜಶೇಖರ್, ಹಳೆಯ ಪ್ರಾಧ್ಯಾಪಕರು, ಪಿಜಿ ಕಾನೂನು ಅಧ್ಯಯನ ವಿಭಾಗ, ಕರ್ನಾಟಕ ವಿಶ್ವವಿದ್ಯಾನಿಲಯ, ಧಾರವಾಡ, ಈ ಪ್ರಮುಖ ಸಂಪನ್ಮೂಲ ವ್ಯಕ್ತಿಗಳು ತಮ್ಮ ವಿಚಾರ ಮಂಡಿಸಲಿದ್ದಾರೆ. ಈ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಉತ್ತಮ ಪ್ರಬಂಧ ಮಂಡಿಸುವವರಿಗೆ ನಗದು ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಕಾಲೇಜಿನ ಪ್ರಾಚಾರ್ಯೆ ಡಾ.ಜ್ಯೋತಿ ಹಿರೇಮಠ ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಡಾ.ಉಮಾ ಹಿರೇಮಠ, ಸುಪ್ರಿಯಾ ಸ್ವಾಮಿ, ವಿದ್ಯಾರ್ಥಿ ಪ್ರತಿನಿಧಿ ಆಕಾಶ ಅಮರಶೆಟ್ಟಿ ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ