Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ವಿರೋಧಿ ಹೇಳಿಕೆ ನಿರ್ಬಂಧಿಸಿ ಕಮಲ್‌ಗೆ ಸೂಚನೆ

ಕನ್ನಡ ಭಾಷೆ, ಸಾಹಿತ್ಯ, ಭೂಮಿ ಅಥವಾ ಸಂಸ್ಕೃತಿಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಹಿರಿಯ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರಿಗೆ ಬೆಂಗಳೂರು ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಕನ್ನಡ ಸಾಹಿತ್ಯ ಪರಿಷತ್ (ಕೆಎಸ್‌ಪಿ) ಅಧ್ಯಕ್ಷ ಮಹೇಶ್ ಜೋಶಿ ಅವರ ಸಿವಿಲ್ ಮೊಕದ್ದಮೆಯ ನಂತರ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ಶುಕ್ರವಾರ ಈ ತಡೆಯಾಜ್ಞೆ ನೀಡಿದ್ದಾರೆ.


ಮುಂದಿನ ವಿಚಾರಣೆ ಆಗಸ್ಟ್ 30ಕ್ಕೆ: "ಕನ್ನಡಕ್ಕಿಂತ ಯಾವುದೇ ಭಾಷೆಯ ಶ್ರೇಷ್ಠತೆ ಪ್ರತಿಪಾದಿಸುವಂತಹ ಯಾವುದೇ ಹೇಳಿಕೆ ಅಥವಾ ಟೀಕೆಗಳನ್ನು ಪೋಸ್ಟ್ ಮಾಡುವುದು, ಹೇಳಿಕೆ ನೀಡುವುದು, ಬರೆಯುವುದು ಅಥವಾ ಪ್ರಕಟಿಸುವುದನ್ನು" ಅಥವಾ ಕನ್ನಡ ಭಾಷೆ, ಸಾಹಿತ್ಯ, ಭೂಮಿ ಮತ್ತು ಸಂಸ್ಕೃತಿಯ ವಿರುದ್ಧ ಯಾವುದೇ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ನೀಡುವುದನ್ನು ನ್ಯಾಯಾಲಯದ ಆದೇಶ ನಿರ್ಬಂಧಿಸಿದೆ. ನ್ಯಾಯಾಧೀಶರು ಕಮಲ್​ ಹಾಸನ್ ಅವರಿಗೆ ಸಮನ್ಸ್ ಜಾರಿ ಮಾಡಿ, ಮುಂದಿನ ವಿಚಾರಣೆಯನ್ನು ಆಗಸ್ಟ್ 30ಕ್ಕೆ ನಿಗದಿಪಡಿಸಿದ್ದಾರೆ.


'ಕನ್ನಡ ತಮಿಳಿನಿಂದ ಹುಟ್ಟಿದೆ' ಹೇಳಿಕೆ ವಿವಾದ: ಮೇ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆದ 'ಥಗ್ ಲೈಫ್' ಚಿತ್ರದ ಪ್ರಚಾರ ಕಾರ್ಯಕ್ರಮದ ಸಂದರ್ಭದಲ್ಲಿ ನಾಯಕ ನಟ ಕಮಲ್​ ಹಾಸನ್​ 'ಕನ್ನಡ ತಮಿಳಿನಿಂದ ಹುಟ್ಟಿದೆ' ಎಂಬ ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡರು. ಸಿನಿಮಾ ಬಿಡುಗಡೆಗೂ ಮುನ್ನ ಭುಗಿಲೆದ್ದ ವಿವಾದ ನ್ಯಾಯಾಲಯದಲ್ಲಿದ್ದು, ಸದ್ಯ ಈ ಕಾನೂನು ಕ್ರಮ ಜರುಗಿಸಲಾಗಿದೆ.


ಕ್ಷಮೆಯಾಚಿಸದ ನಟ: ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕಮಲ್ ಹಾಸನ್ "ಕನ್ನಡ ತಮಿಳಿನಿಂದ ಹುಟ್ಟಿದೆ" ಎಂದು ಹೇಳಿದ ವಿಡಿಯೋ ಆನ್​ಲೈನ್​ನಲ್ಲಿ ಹೆಚ್ಚು ವೈರಲ್​ ಆಗಿ ಮಿಶ್ರ ಪ್ರತಿಕ್ರಿಯೆಗಳನ್ನು ಸ್ವೀಕರಿತ್ತು. ಹಲವಾರು ಕನ್ನಡ ಸಾಂಸ್ಕೃತಿಕ ಮತ್ತು ಭಾಷಾ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಕನ್ನಡ ಪರ ಗುಂಪುಗಳು ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದವು. ಜನಪ್ರಿಯ ನಟನ ಹೇಳಿಕೆ ಅಗೌರವದಿಂದ ಕೂಡಿವೆ ಎಂದು ಆರೋಪಿಸಿ, ಪ್ರತಿಭಟನೆಗಳ ಮೂಲಕ ಆಕ್ರೋಶ ಹೊರಹಾಕಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ