Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಂಪ್ಲಿ ಉತ್ಸವ: ವೈಭವದ ತುಂಗಾರತಿ ಮಹೋತ್ಸವ







ಬಳ್ಳಾರಿ,ಫೆ.12- ಕಂಪ್ಲಿ ಉತ್ಸವದ ಅಂಗವಾಗಿ ಕಂಪ್ಲಿ ಪಟ್ಟಣದ ಸೋಮಪ್ಪನ ದೇವಸ್ಥಾನದ ಮುಂಭಾಗದಲ್ಲಿರುವ ಸೋಮಪ್ಪ ಕೆರೆಯಲ್ಲಿ ತುಂಗಭದ್ರಾ ಆರತಿ ಮಹೋತ್ಸವ ಹಾಗೂ ಬಾಗಿನ ಸಮರ್ಪಣೆಯ ಧಾರ್ಮಿಕ ಕಾರ್ಯಕ್ರಮವು ಉತ್ಸವದ ಮೊದಲ ದಿನವಾದ ಬುಧವಾರ ಅದ್ದೂರಿಯಾಗಿ ನಡೆಯಿತು.




ವಾರಾಣಸಿಯಿಂದ ಆಗಮಿಸಿದ್ದ 10 ಕ್ಕೂ ಹೆಚ್ಚು ಅರ್ಚಕರು, ಗಂಗಾರತಿ ಮಾದರಿಯಲ್ಲಿ ತುಂಗಾರತಿಯನ್ನು ವೈಭವದಿಂದ ನಡೆಸಿಕೊಟ್ಟರು. ಧಾರ್ಮಿಕ ವಿಧಿ-ವಿಧಾನದೊಂದಿಗೆ ಸೋಮಪ್ಪ ಕೆರೆಯ ತಟದಲ್ಲಿ ವಿವಿಧ ಪೂಜಾ ಕಾರ್ಯಗಳು ತುಂಗಾರತಿ ಭಾಗವಾಗಿ ನಡೆದವು.
*ಜಿಲ್ಲಾ ಉಸ್ತುವಾರಿ ಸಚಿವರಿಂದ ಬಾಗಿನ ಸಮರ್ಪಣೆ:*
ತುಂಗಾರತಿಗೂ ಮುನ್ನ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಕಂಪ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್‌ಲೂಮ್ಸ್) ದ ಅಧ್ಯಕ್ಷರೂ ಆಗಿರುವ ಜೆ.ಎನ್.ಗಣೇಶ್ ಅವರು ಕೆರೆಯ ತೀರದಲ್ಲಿ ಬಾಗಿನ ಸಮರ್ಪಣೆ ಮಾಡುವ ಮೂಲಕ ಎರಡನೇಯ ಬಾರಿಯ ಕಂಪ್ಲಿ ಉತ್ಸವಕ್ಕೆ ಚಾಲನೆ ನೀಡಿದರು.
*ತುಂಗಾರತಿಗೆ 18 ವೇದಿಕೆಗಳಲ್ಲಿ ಹೆಜ್ಜೆ ಕುಣಿತ ಸಾಥ್:*
ಕಂಪ್ಲಿ ಉತ್ಸವದ ಅಂಗವಾಗಿ ವಾರಾಣಸಿಯ ಅರ್ಚಕರಿಂದ ನೆರವೇರಿದ ತುಂಗಾರತಿಗೆ ಸೋಮಪ್ಪ ಕೆರೆಯ ಸುತ್ತಲೂ ನಿರ್ಮಿಸಿದ್ದ 18 ವೇದಿಕೆಗಳಲ್ಲಿ ಭರತನಾಟ್ಯ ಕಲಾವಿದರ ಹೆಜ್ಜೆಯ ನಾದವು ಜೊತೆಯಾಗಿದ್ದು ನೋಡುಗರಿಗೆ ರೋಮಾಂಚನ ಮೂಡಿಸಿತು.
*ಕೆರೆಯಲ್ಲಿ ತೇಲುವ ಆಕರ್ಷಕ ದೀಪೋತ್ಸವ:*
ಕಂಪ್ಲಿ ಉತ್ಸವದ ಅಂಗವಾಗಿ ಸೋಮಪ್ಪನ ಕೆರೆಯಲ್ಲಿ ತುಂಗಾರತಿ ಭಾಗವಾಗಿ ತೇಲುವ ಚಿತ್ತಾರದ ದೀಪಗಳನ್ನು ಬೆಳಗಿಸಲಾಯಿತು. ಸಾರ್ವಜನಿಕರು ಸಂಭ್ರಮ- ಸಡಗರದಿಂದ ಬೆಳಕಿನ ಚಿತ್ತಾಕರ್ಷದ ನಡುವೆ ತುಂಗಾರತಿಯನ್ನು ಬೆರಗಿನಿಂದ ಕಣ್ತುಂಬಿಕೊಂಡರು.ಇದಕ್ಕೂ ಮುನ್ನ ಐತಿಹಾಸಿಕ ಸೋಮಪ್ಪ ಕೆರೆ ವೇದಿಕೆಯಲ್ಲಿ ಸ್ಥಳೀಯ ಕಲಾವಿದರಿಂದ ಭರತ ನಾಟ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಬಳಿಕ ವಿವಿಧ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದ ಸಾಧಕರಿಗೆ, ಹೋರಾಟಗಾರರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಹಂಪಿ ಸಾವಿರ ಮಠದ ಎಮ್ಮಿಗನೂರಿನ ಶ್ರೀ ರಾಮದೇವ ಶಿವಾಂತ ಮಹಾಚಾರ್ಯ, ಮಾಜಿ ಶಾಸಕ ಭೀಮನಾಯ್ಕ, ಕಂಪ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸರಾವ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್. ಎನ್., ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ.ರವಿಕುಮಾರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಕಂಪ್ಲಿ ತಾಲ್ಲೂಕು ತಹಶೀಲ್ದಾರ ಜೂಗಲ ಮಂಜುನಾಯಕ, ತೋರಣಗಲ್ಲು ಡಿಎಸ್ಪಿ ಪ್ರಸಾದ್ ಗೋಖಲೆ, ತಾಪಂ ಇಒ ಆರ್.ಕೆ.ಶ್ರೀಕುಮಾರ್, ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ, ಸಿಡಿಪಿಒ ಪ್ರದೀಪ್, ಕಂಪ್ಲಿ ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಹಬೀಬ್ ರೆಹಮಾನ್, ಅಪೆಕ್ಸ್ ಬ್ಯಾಂಕ್ ನ ಅಧ್ಯಕ್ಷ ಮೂಕಯ್ಯ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿ- ಸಿಬ್ಬಂ




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ