ಬಾಗಲಕೋಟೆ, (ಅಕ್ಟೋಬರ್ 17): ಮಹಾರಾಷ್ಟ್ರದಲ್ಲಿ ಲಿಂಗಾಯತ ಶ್ರೀಗಳ ಬಗ್ಗೆ ಅವಹೇಳನಕಾರಿ ಭಾಷಣ ಹಿನ್ನೆಲೆಯಲ್ಲಿ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ
ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಸಂಬಂಧ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನಲ್ಲಿರೋ ಕನ್ನೇರಿ ಶ್ರೀಗಳಿಗೆ ಇದೀಗ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಗೆ ಪ್ರವೇಶ ಮಾಡದಂತೆ ಹಾಗೂ ಚಿಕ್ಕಾಲಗುಂಡಿ ಮಲ್ಲಿಕಾರ್ಜುನ ಮಠಕ್ಕೆ ಬಾರದಂತೆ ನೊಟೀಸ್ ನಲ್ಲಿ ಸೂಚಿಸಲಾಗಿದೆ. ಇದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಸರ್ಕಾರದ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.
ಜಿಲ್ಲಾಧಿಕಾರಿ ಹೊರಡಿಸಿದ ನೋಟಿಸ್ ಅನ್ನು ತಹಶೀಲ್ದಾರ ವಿನೋದ್ ಅವರು ಬೀಳಗಿ ತಾಲೂಕಿನ ಚಿಕ್ಕಾಲಗುಂಡಿ ಗ್ರಾಮದಲ್ಲಿರುವ ಮಠಕ್ಕೆ ತೆರಳಿ ಕನ್ಹೇರಿಯ ಕಾಡಸಿದ್ದೇಶ್ವರ ಶ್ರೀಗಳಿಗೆ ನೀಡಿದ್ದು, ಮಠ ತೆರವು ಮಾಡುವಂತೆ ನೋಟಿಸ್ನಲ್ಲಿ ಸೂಚಿಸಿದ್ದಾರೆ. ಕಾನೂನು ಸವ್ಯವಸ್ಥೆ ಹದಗೆಡುವ ಸಾಧ್ಯತೆ ಇದೆ. ಹೀಗಾಗಿ ಬಾಗಲಕೋಟೆಯಲ್ಲಿ ಜಿಲ್ಲೆಯಲ್ಲಿ ಇರಬಾರದು. ನಿಮ್ಮ ಮೂಲ ಜಾಗಕ್ಕೆ ತೆರಳಿ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.