Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದತ್ತಿ ಉಪನ್ಯಾಸದಿಂದ ಕನ್ನಡ ಬೆಳವಣಿಗೆ: ಯಾಳ್ಪಿ ವಲಿಭಾಷ







ಬಳ್ಳಾರಿ:ಮಾ,20..; ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಚಯಿಸುವುದರೊಂದಿಗೆ ಹೊಸ ವಿಚಾರಗಳನ್ನು ತಿಳಿಸಿ ಕನ್ನಡತನವನ್ನು ಬೆಳೆಸುವ ಕಾರ್ಯ ಮಾಡುತ್ತದೆ ಎಂದು ಕರ್ನಾಟಕ ಪತ್ರಕರ್ತರ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಯಾಳ್ಪಿ ವಲಿಭಾಷ ಅಭಿಪ್ರಾಯಪಟ್ಟರು.


ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬಳ್ಳಾರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಳ್ಳಾರಿರವರ ಸಂಯುಕ್ತಾಶ್ರಯದಲ್ಲಿ ಇಂದು ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪ್ರೋ.ಕೆ.ಬಿ.ಹನುಮಂತರಾಯ, ಲಿಂ.ಟಿ.ಸಾವಿತ್ರಮ್ಮ ಸ್ಮಾರಕ, ಲಿಂ.ಕೆ.ಲಿಂಗನಗೌಡ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್‍ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಕನ್ನಡ ಭಾಷೆ ಇಂದು ಜಾತಿ, ಧರ್ಮ ಹಾಗೂ ಗಡಿಯನ್ನು ಮೀರಿ ಬೆಳೆದಿದೆ. ಇದಕ್ಕೆ ಒಂದು ಮುಖ್ಯ ಕಾರಣವೆಂದರೆ ಕನ್ನಡ ಸಾಹಿತ್ಯ ಪರಿಷತ್ತು. ತನ್ಮೂಲಕ ಕನ್ನಡ ನಾಡು, ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ನಿರಂತರವಾಗಿ ಪೋಷಿಸುತ್ತ ವಿವಿಧ ಕಾರ್ಯಕ್ರಮ ಮೂಲಕ ಮುಂದಿನ ತಲೆಮಾರಿಗೆ ಕನ್ನಡದ ಶ್ರೇಷ್ಠತೆಯನ್ನು ಪರಿಚಿಸುವ ಕೆಲಸವನ್ನು ಮಾಡುತ್ತಿದೆ. ಕನ್ನಡ ಸಾಹಿತ್ಯ ಸಮ್ಮೇಳನಗಳು, ಕವಿಗೋಷ್ಠಿ ಇನ್ನಿತರ ಕಾರ್ಯಕ್ರಮಗಳು ನಡೆದು ಕನ್ನಡ ಭಾಷೆ ಇನ್ನೂ ಬೆಳವಣಿಗೆ ಕಾಣುವುದರೊಂದಿಗೆ ಕನ್ನಡ ಭಾಷೆ ತನ್ನ ಅಸ್ಮಿತೆಯನ್ನು ಕನ್ನಡಿಗರಿಗೆ ತೋರಿಸಲಿ ಎಂದರಲ್ಲದೇ,


ವಿದ್ಯಾರ್ಥಿಗಳು ಬಾಲ್ಯದಿಂದಲೇ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಪುಸ್ತಕಗಳು, ವೃತ್ತ ಪತ್ರಿಕೆಗಳನ್ನು ಓದುವುದರಿಂದ ಹೊಸ ವಿಚಾರಗಳನ್ನು ತಿಳಿದುಕೊಳ್ಳಲು ಸಾಧ್ಯ. ಯಾವುದೇ ಕಾರ್ಯಕ್ರಮ, ಸ್ಪರ್ಧೆಯಾದರೂ ಅದರಲ್ಲಿ ಭಾಗವಹಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದರು.


ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಿಷ್ಠಿರುದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.


ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ವಚನಗಳ ಪಾತ್ರ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.


ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಖಂಡ ಬಳ್ಳಾರಿ ಜಿಲ್ಲೆಯ ಅಧ್ಯಕ್ಷರಾದ ಡಾ.ನಿಷ್ಠಿರುದ್ರಪ್ಪ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಡಾ.ಕೆ.ವಿ.ಪ್ರಜ್ಞಾ, ಕೆಪಿಎಸ್ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಡಾ.ಶ್ರೀನಿವಾಸಮೂರ್ತಿ, ದತ್ತಿ ದಾನಿಗಳಾದ ಕೆ.ಬಿ.ಸಂಜೀವಪ್ರಸಾದ್, ಟಿ.ಸಿ.ಗೌಡ, ಕೆ.ಸಿದ್ಧರಾಮಪ್ಪ, ಡಾ.ಕೆ.ಮಲ್ಲಿಕಾರ್ಜುನ, ಡಾ.ಲೋಕೇಶ್, ಕೆ.ವಿ.ಚಂದ್ರಹಾಸ, ಮುಂಡಾಸದ ಮಲ್ಲಿಕಾರ್ಜುನ, ಎಮ್ಮಿಗನೂರು ಜಡೇಶ, ಕಪ್ಪಗಲ್ಲು ಚಂದ್ರಶೇಖರ್ ಆಚಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.







Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*