Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದತ್ತಿ ಉಪನ್ಯಾಸದಿಂದ ಕನ್ನಡ ಬೆಳವಣಿಗೆ: ಯಾಳ್ಪಿ ವಲಿಭಾಷ



ಬಳ್ಳಾರಿ:ಮಾ,20..; ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಚಯಿಸುವುದರೊಂದಿಗೆ ಹೊಸ ವಿಚಾರಗಳನ್ನು ತಿಳಿಸಿ ಕನ್ನಡತನವನ್ನು ಬೆಳೆಸುವ ಕಾರ್ಯ ಮಾಡುತ್ತದೆ ಎಂದು ಕರ್ನಾಟಕ ಪತ್ರಕರ್ತರ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷ ಯಾಳ್ಪಿ ವಲಿಭಾಷ ಅಭಿಪ್ರಾಯಪಟ್ಟರು.


ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬಳ್ಳಾರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಳ್ಳಾರಿರವರ ಸಂಯುಕ್ತಾಶ್ರಯದಲ್ಲಿ ಇಂದು ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪ್ರೋ.ಕೆ.ಬಿ.ಹನುಮಂತರಾಯ, ಲಿಂ.ಟಿ.ಸಾವಿತ್ರಮ್ಮ ಸ್ಮಾರಕ, ಲಿಂ.ಕೆ.ಲಿಂಗನಗೌಡ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್‍ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಕನ್ನಡ ಭಾಷೆ ಇಂದು ಜಾತಿ, ಧರ್ಮ ಹಾಗೂ ಗಡಿಯನ್ನು ಮೀರಿ ಬೆಳೆದಿದೆ. ಇದಕ್ಕೆ ಒಂದು ಮುಖ್ಯ ಕಾರಣವೆಂದರೆ ಕನ್ನಡ ಸಾಹಿತ್ಯ ಪರಿಷತ್ತು. ತನ್ಮೂಲಕ ಕನ್ನಡ ನಾಡು, ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ನಿರಂತರವಾಗಿ ಪೋಷಿಸುತ್ತ ವಿವಿಧ ಕಾರ್ಯಕ್ರಮ ಮೂಲಕ ಮುಂದಿನ ತಲೆಮಾರಿಗೆ ಕನ್ನಡದ ಶ್ರೇಷ್ಠತೆಯನ್ನು ಪರಿಚಿಸುವ ಕೆಲಸವನ್ನು ಮಾಡುತ್ತಿದೆ. ಕನ್ನಡ ಸಾಹಿತ್ಯ ಸಮ್ಮೇಳನಗಳು, ಕವಿಗೋಷ್ಠಿ ಇನ್ನಿತರ ಕಾರ್ಯಕ್ರಮಗಳು ನಡೆದು ಕನ್ನಡ ಭಾಷೆ ಇನ್ನೂ ಬೆಳವಣಿಗೆ ಕಾಣುವುದರೊಂದಿಗೆ ಕನ್ನಡ ಭಾಷೆ ತನ್ನ ಅಸ್ಮಿತೆಯನ್ನು ಕನ್ನಡಿಗರಿಗೆ ತೋರಿಸಲಿ ಎಂದರಲ್ಲದೇ,


ವಿದ್ಯಾರ್ಥಿಗಳು ಬಾಲ್ಯದಿಂದಲೇ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಪುಸ್ತಕಗಳು, ವೃತ್ತ ಪತ್ರಿಕೆಗಳನ್ನು ಓದುವುದರಿಂದ ಹೊಸ ವಿಚಾರಗಳನ್ನು ತಿಳಿದುಕೊಳ್ಳಲು ಸಾಧ್ಯ. ಯಾವುದೇ ಕಾರ್ಯಕ್ರಮ, ಸ್ಪರ್ಧೆಯಾದರೂ ಅದರಲ್ಲಿ ಭಾಗವಹಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ