LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ ದಿವ್ಯಾ ವಸಂತ ಬಂಧನ

ಬೆಂಗಳೂರು: ಮಸಾಜ್ ಪಾರ್ಲರ್ ಹೆಸರಿನಲ್ಲಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತ ಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ʻಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್‌ ಆಗಿದ್ದ ಮಾಜಿ ನಿರೂಪಕಿ ದಿವ್ಯಾ ವಸಂತ ಇಂದಿರಾನಗರದ ಮಸಾಜ್ ಪಾರ್ಲರ್ ನಲ್ಲಿ ಶ್ರೀಮಂತ ಗ್ರಾಹಕರಿಗೆ ಗಾಳಹಾಕಿ ಬೆದರಿಕೆ ಹಾಗೂ ಸುಲಿಗೆ ಯತ್ನ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದರು.

ಈ ಪ್ರಕರಣ ಬಯಲಾಗುತ್ತಲೇ ಆಕೆ ತಲೆಮರೆಸಿಕೊಂಡಿದ್ದರು. ಆಕೆಯ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಇದೀಗ ನೆರೆಯ ಕೇರಳದಲ್ಲಿ ಆಕೆಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಪ್ರಕರಣ ದಾಖಲಿಸಿಕೊಂಡಿದ್ದ ಜೀವನ್ ಭೀಮಾನಗರ ಪೊಲೀಸರು ಕಳೆದೊಂದು ವಾರದಿಂದ ದಿವ್ಯಾ ವಸಂತ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದರು. ಬ್ಲ್ಯಾಕ್‌ಮೇಲ್ ಮಾಡಿ ಹಲವು ಕಡೆ ಹಣ ಸುಲಿಗೆ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ದಿವ್ಯಾ ವಸಂತರನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೊದಲು ತಮಿಳುನಾಡಿಗೆ ಪರಾರಿಯಾಗಿದ್ದ ದಿವ್ಯಾ ವಸಂತ ಅಲ್ಲಿಂದ ಕೇರಳಕ್ಕೆ ತೆರಳಿದ್ದರು ಎನ್ನಲಾಗಿದೆ. ಇದೀಗ ಕೇರಳದಿಂದಲೇ ಬಂಧಿಸಿ ಪೊಲೀಸರು ಕರೆತಂದಿದ್ದಾರೆ. ಸದ್ಯ ಇದೀಗ ಕೇಸ್‌ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್