Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಶ್ರೀ ಭುವನೇಶ್ವರಿ ಕನ್ನಡ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ಬೆಂಗಳೂರು/ಬಳ್ಳಾರಿ, ನ.02:. ರಘುರಾಮ್ ಅವರ ಅಧ್ಯಕ್ಷತೆ ಹಾಗೂ ಮಾರ್ಗದರ್ಶನದಲ್ಲಿ ಚಂದಾಪುರದ ಸೂರ್ಯ ಎಲೆಗನ್ಸ್‌ನ ಶ್ರೀ ಭುವನೇಶ್ವರಿ ಕನ್ನಡ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮವು ಶ್ರೀ ಭುವನೇಶ್ವರಿ ದೇವಿಯ ಪೂಜೆ, ಧ್ವಜಾರೋಹಣ, ನಾಡಗೀತೆ ಹಾಗೂ ರಾಷ್ಟ್ರಗೀತೆಯೊಂದಿಗೆ ಆರಂಭವಾಯಿತು. ಬಳಿಕ ಸಂಘದ ಉಪಾಧ್ಯಕ್ಷ  ಸರ್ಪಭೂಷಣ ಸ್ವಾಗತ ಭಾಷಣ ಮಾಡಿದರು. ಶ ಬಿ.ಎಂ. ರವಿ, ರಾಜಮ್ಮ ಹಾಗೂ ತಂಡದವರು ನಾಡಗೀತೆ ಮತ್ತು ರೈತಗೀತೆಯನ್ನು ಪ್ರಸ್ತುತಪಡಿಸಿದರು. ಸಂಘದ ಕಾರ್ಯದರ್ಶಿ ನರಸಿಂಹಮೂರ್ತಿ ವಿಶೇಷ ಭಾಷಣ ಮಾಡಿ ಕನ್ನಡ ನಾಡು, ನುಡಿ, ಭಾಷೆ, ನೆಲ ಮತ್ತು ಜಲದ ಮಹತ್ವವನ್ನು ವಿವರಿಸಿದರು.
ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ಜರುಗಿದವು. ಈ ಸಂದರ್ಭದಲ್ಲಿ ಐಡಿ ಸಂಸ್ಥೆಯ ವಿವೇಕ್ ಸೌಂದರರಾಜ್ ಅವರು ಉಡುಗೊರೆ ಹ್ಯಾಂಪರ್‌ಗಳನ್ನು ವಿತರಿಸಿದರು. ಕನ್ನಡ ಭಾಷೆ ಮತ್ತು ನಾಡಿನ ಬಗ್ಗೆ ಅಪಾರ ಅಭಿಮಾನ ಹೊಂದಿರುವ 85 ವರ್ಷದ ಕನ್ನಡ ಪ್ರೇಮಿ ಅಬ್ದುಲ್ ರಹೀಮ್ ಹಾಗೂ ಉದ್ಯಮಿ ವೆಂಕಟೇಶ್ ಗಾದ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಶ್ರೀನಿವಾಸ ಕುಲಕರ್ಣಿ (ಪಿಆರ್‌ಒ), ಬಾಬುರಾವ್, ಉಪಾಧ್ಯಕ್ಷರಾದ ರವಿ, ದೀಪಾ, ಖಜಾಂಚಿ ನಿಂಬಾಳ್, ವೆಂಕಟೇಶ್ ಗಾದ, ನಾಗಭೂಷಣ್, ಶಂಕ್ರಪ್ಪ, ಪ್ರಸಾದ್, ನಾಗೇಂದ್ರ, ಗಿರೀಶ್, ಮಂಜುನಾಥ್, ಅಸೋಸಿಯೇಷನ್ ಅಧ್ಯಕ್ಷ ಓಬಳ ರೆಡ್ಡಿ, ಉಪಾಧ್ಯಕ್ಷ ಸರ್ಪಭೂಷಣ್, ದಿಲ್ಶಾದ್ ಬೇಗಂ, ಸಮೀರ್ ಕುಲಕರ್ಣಿ, ಮಂಜು ಪಾಟೀಲ್, ಶ್ರೀನಿವಾಸ್ ವಿ., ಸೂರಜ್ ಗೌಡ ಸೇರಿದಂತೆ ಹಲವು ಗಣ್ಯರು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.
ಕೊನೆಯಲ್ಲಿ ಎಲ್ಲರಿಗೂ ಮಹಾಪ್ರಸಾದ ವಿತರಿಸಲಾಯಿತು. ಕನ್ನಡ ಭಾಷೆ, ನಾಡು, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಸಂದೇಶದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿಶ್ರೀ ಸಾಯಿ ಕಾಲೇಜಿನ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ವಿಧಾನ ಪರಿಷತ್ ಸದಸ್ಯ  ಸ್ಥಾನಕ್ಕೆ ಐದನೇ ಬಾರಿ ಆಯ್ಕೆಯಾದ ಶಶೀಲ್. ಜಿ. ನಮೋಶಿ ಅವರಿಗೆ ಹೊಸಪೇಟೆ ಯಲ್ಲಿ ಅದ್ಧೂರಿ ಸ್ವಾಗತ*ಬಿಜೆಪಿ ಮೋರ್ಚಾ ಪದಾಧಿಕಾರಿಗಳ ಮಹತ್ವದ ಸಭೆ*ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವಿಶ್ವವಿದ್ಯಾಲಯ ಬಾಸ್ಕೆಟ್‌ಬಾಲ್ ತಂಡಕ್ಕೆ ತನ್ವೀರ್ ಆಯ್ಕೆಶ್ರೀ ವಿಶ್ವಗುರು ಸೌಹಾರ್ದ ಸೊಸೈಟಿ  ಅಧ್ಯಕ್ಷರಾಗಿ ಅರವಿಂದ ಬಡಕುಂದ್ರಿ, ಉಪಾಧ್ಯಕ್ಷರಾಗಿ ಬರಮಪ್ಪ ನಾಗನೂರ ಆಯ್ಕೆ.ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ