Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ರಾಮದುರ್ಗದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ: ಭುವನೇಶ್ವರಿ ಮೆರವಣಿಗೆಗೆ ಚಾಲನೆ

ರಾಮದುರ್ಗ,ನ,೦೨: ಕನ್ನಡ ಭಾಷೆಗೆ ಎರಡು ಸಾವಿರ ವಷಗಳ ಇತಿಹಾಸವಿದೆ. ಕನ್ನಡ ಸಾಹಿತ್ಯಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ಕನ್ನಡಿಗರು ಹೃದಯವಂತರು ಎಂಬ ಹಿರಿಮೆಯನ್ನು ಹೊಂದಿದ್ದಾರೆ. ಕನ್ನಡ ನಾಡು ನುಡಿಯನ್ನು ಕಟ್ಟಿದ ಕೆಚ್ಚೆದೆಯ ಕನ್ನಡಿಗರನ್ನು ಸ್ಮರಿಸುವ ದಿನಾಚರಣೆಯಾಗಿ ಕರ್ನಾಟಕ ರಾಜ್ಯೋತ್ಸವವನ್ನು ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ತಹಶೀಲ್ದಾರ ಪ್ರಕಾಶ ಗಾಯಕವಾಡ ಹೇಳಿದರು.
ಪಟ್ಟಣದ ಗುರುಭವನದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ಹಾಗೂ ಸಾಂಸ್ಕೃತಿಕ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕಲಿಯಲು ಹಲವಾರು ಭಾಷೆಗಳಿರಬಹುದು. ಆದರೇ ಅದರ ವ್ಯಾಮೋಹದಲ್ಲಿ ನಮ್ಮ ಮಾತೃ ಭಾಷೆಯನ್ನು ಮರೆಯವಂತಾಗಬಾರದು. ಇಂದಿನ ನಮ್ಮ ಸಂಭ್ರಮಕ್ಕೆ ಅಂದು ಹರಿದು ಹಂಚಿ ಹೋಗಿದ್ದ ಕನ್ನಡ ಭಾಷಿಕ ಪ್ರದೇಶಗಳನ್ನು ಒಟ್ಟುಗೂಡಿಸಿದ ಏಕೀಕರಣದ ಹೋರಾಟದಿಂದಾಗಿ ಕರ್ನಾಟಕ ರಾಜ್ಯ ಉದಯಿಸಿತು. ಅದನ್ನು ನಾವೇಲ್ಲ ಅರಿತುಕೊಳ್ಳುವ ಕೆಲಸ ಮಾಡಬೇಕು ಎಂದರು.
ವಿಪಿಎಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಆರ್. ಎಲ್. ಕುಳ್ಳೂರ ವಿಶೇಷ ಉಪನ್ಯಾಸ ನೀಡಿದರು. ಈ ವಷ ತಾಲೂಕು ಆಡಳಿತದ ವತಿಯಿಂದ ಕನ್ನಡಪರ ಕೆಲಸ ಮಾಡಿದವರಿಗೆ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ನೀಡಲಾಯಿತು. ಸಾಲಹಳ್ಳಿಯ ಸುರೇಶ ದೇಸಾಯಿ, ಶ್ರೇಯಸ್ ವಾಲಿ, ದುಂಡಯ್ಯ ಹಿರೇಮಠ ಅವರಿಗೆ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಜಿ.ಬಿ. ರಂಗನಗೌಡ್ರ, ತಾ.ಪಂ. ಇಒ ಮಹಮ್ಮದಇಜಾನ್ ಸುಬೂರ, ಕಸಾಪ ಅಧ್ಯಕ್ಷ ಪಾಂಡುರಂಗ ಜಟಗನ್ನವರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜಶೇಖರ ಹಿರೇಮಠ, ಸಿಡಿಪಿಒ ಶಂಕರ ಕುಂಬಾರ, ಎಡಿಎಲ್‌ಆರ್ ಪ್ರಕಾಶ ಸತ್ತಿಗೇರಿ, ಹೆಸ್ಕಾಂ ಎಇಇ ಶಿವಪ್ರಕಾಶ ಕರಡಿ, ಸಹಾಯಕ ಕೃಷಿ ನಿರ್ದೇಶಕ ಶ್ರೀನಾಥ ಚಿಮ್ಮಲಗಿ, ಪಶು ವೈದ್ಯಾಧಿಕಾರಿ ಗಿರೀಶ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಭುವನೇಶ್ವರಿ ಮೆರವಣೆಗೆಗೆ ಹಾಗೂ ರೂಪಕಗಳಿಗೆ ಚಾಲನೆ: ಪಟ್ಟಣದ ತಾ.ಪಂ ಆವರಣದಲ್ಲಿ ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಹಾಗೂ ರೂಪಕಗಳ ಮೆರವಣೆಗೆಗೆ ತಹಶೀಲ್ದಾರ ಪ್ರಕಾಶ ಗಾಯಕವಾಡ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕಾ ಮಟ್ಟದ ಎಲ್ಲ ಅಧಿಕಾರಿಗಳು, ವಿವಿಧ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ನಾಡು, ನುಡಿ ರಕ್ಷಣೆ ನಾವೆಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ :ಬಾಬಾಸಾಹೇಬ ಪಾಟೀಲ ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ-ಡಾ.ಸುಜಾತಾರಾಮದುರ್ಗದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ: ಭುವನೇಶ್ವರಿ ಮೆರವಣಿಗೆಗೆ ಚಾಲನೆರೈತರ ಸಂಕಷ್ಟ: ಸರಕಾರ ಮತ್ತು ಕಂದಾಯ ಇಲಾಖೆಯ ವಿರುದ್ಧ ಮುಗಿಲು ಮುಟ್ಟಿದ ಆಕ್ರೋಶಕನ್ನಡದ ವಿಕಾಸ ಪ್ರತಿಯೊಬ್ಬರ ಮನೆಯಿಂದಲೇ ಸಾಧ್ಯ: ಧ್ವಜಾರೋಹಣ ನೆರವೇರಿಸಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಕರೆಗಣವೇಷಧಾರಿ ಸ್ವಯಂಸೇವಕರ ಮೇಲೆ ಪುಷ್ಪವೃಷ್ಟಿ; ಮೆರವಣಿಗೆಯಲ್ಲಿ ಮಕ್ಕಳೂ ಭಾಗಿಕನ್ನಡ ನಾಡು-ನುಡಿಯ ಉಳಿವಿಗೆ ನಿರಂತರ ಶ್ರಮ ಅಗತ್ಯ: ಹಟ್ಟಿ ಚಿನ್ನದ ಗಣಿ ನಿಗಮ ಅಧ್ಯಕ್ಷ ಅಭಿಮತ ಬೆಳಗಾವಿ: ರೈತ ಮುಖಂಡವಿರುದ್ಧ ಮಾನಹಾನಿ ಕೇಸು ಹಾಕುವುದಾಗಿ ಶಾಸಕ ಜೆ.ಟಿ. ಪಾಟೀಲ ಎಚ್ಚರಿಕೆ ತಾಳಿಕೋಟೆಯಲ್ಲಿ ಶಿರಡಿ ಸಾಯಿಬಾಬಾರವರ ಪುಣ್ಯಸ್ಮರಣೋತ್ಸವಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಕನ್ನಡ ಧ್ವಜಾರೋಹಣ