Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಏಪ್ರಿಲ್ ತಿಂಗಳ ಮದ್ಯ ಮಾರಾಟದಲ್ಲಿ ದಾಖಲೆ ಬರೆದ ಕನಾ೯ಟಕ

ಬೆಂಗಳೂರು, 

ಕರ್ನಾಟಕದಲ್ಲಿ ಏಪ್ರಿಲ್ ತಿಂಗಳ ಮದ್ಯ ಮಾರಾಟದಲ್ಲಿ ರಾಜ್ಯ ಅಬಕಾರಿ ಇಲಾಖೆ ಹೊಸ ಇತಿಹಾಸ ಬರೆದಿದೆ. ಕಳೆದ ತಿಂಗಳ ವ್ಯಾಪಾರದಿಂದ ಬರೋಬ್ಬರಿ ರಾಜ್ಯ ಸರ್ಕಾರಕ್ಕೆ ಮೂರು ಸಾವಿರ ಕೋಟಿ ಆದಾಯ ಬಂದಿದೆ. ಈ ಮೂಲಕ ಅಬಕಾರಿ ಇಲಾಖೆಯ ಕಳೆದ 13 ವರ್ಷಗಳ ಇತಿಹಾಸದಲ್ಲೇ ತಿಂಗಳೊಂದರಲ್ಲಿ ಇಷ್ಟೊಂದು ಭಾರಿ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿರುವುದು ಇದೇ ಮೊದಲು. ವಿಸ್ಕಿ, ಬ್ರಾಂಡಿ, ರಮ್, ಜಿನ್ ಸೇರಿ ಏಪ್ರಿಲ್‌ನಲ್ಲಿ ದಾಖಲೆಯ 68.17 ಲಕ್ಷ ಬಾಕ್ಸ್ ಮಾರಾಟವಾಗಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 3688 ಸಾವಿರ ಕೋಟಿ ರುಪಾಯಿ ಆದಾಯ ಹರಿದುಬಂದಿದೆ. ತಿಂಗಳೊಂದರಲ್ಲಿ ಇಷ್ಟೊಂದು ಭಾರೀ ಪ್ರಮಾಣದಲ್ಲಿ ಮದ್ಯ ಮಾರಾಟ ಆಗಿರುವುದು ಐತಿಹಾಸಿಕ ದಾಖಲೆಯಾಗಿದೆ.

ಏಪ್ರಿಲ್​ನಲ್ಲಿ ಎಷ್ಟು ಮದ್ಯ ಮಾರಾಟ?

ವಿಸ್ಕಿ, ಬ್ರಾಂಡಿ, ರಮ್‌, ಜಿನ್‌ ಸೇರಿದಂತೆ 68.17 ಲಕ್ಷ ಬಾಕ್ಸ್‌ (ಒಂದು ಬಾಕ್ಸ್‌ಗೆ 8.64 ಲೀಟರ್‌) ದಾಖಲೆಯ ಐಎಂಎಲ್‌ ಮದ್ಯ ಮಾರಾಟವಾಗಿದೆ. ಮತ್ತೊಂದೆಡೆ, 50.39 ಲಕ್ಷ ಬಾಕ್ಸ್‌ (ಒಂದು ಬಾಕ್ಸ್‌ಗೆ 7.80 ಲೀಟರ್‌) ಬಿಯರ್‌ ಮಾರಾಟವಾಗಿದೆ. ಇದರೊಂದಿಗೆ ಒಟ್ಟು 118.56 ಲಕ್ಷ ಬಾಕ್ಸ್‌ ಮದ್ಯ ಮಾರಾಟವಾಗಿದ್ದು 2013ರಿಂದ ಈಚೆಗೆ ಕಳೆದ 13 ವರ್ಷದಲ್ಲಿ ಯಾವ ತಿಂಗಳಿನಲ್ಲೂ ಈ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿಲ್ಲ ಎಂಬುದು ವಿಶೇಷ.

2013ರಿಂದ ಈಚೆಗೆ ಕಳೆದ 13 ವರ್ಷದಲ್ಲಿ ಯಾವ ತಿಂಗಳಿನಲ್ಲೂ ಈ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿಲ್ಲ. 2025 ಏಪ್ರಿಲ್‌ನಲ್ಲಿ 57.44 ಲಕ್ಷ ಬಾಕ್ಸ್ ಐಎಂಎಲ್ ಮದ್ಯ ಮಾರಾಟವಾಗಿದ್ದು, ಕಳೆದ ವರ್ಷದ ದಾಖಲೆಯಾಗಿತ್ತು. ಪ್ರಸಕ್ತ ಸಾಲಿನ ಏಪ್ರಿಲ್‌ ನಲ್ಲಿ 68.17 ಲಕ್ಷ ಬಾಕ್ಸ್ ಮಾರಾಟವಾಗಿದೆ. ಇನ್ನು ಬಿಯರ್ ವಿಷಯಕ್ಕೆ ಬರುವುದಾದರೆ, 2025 ಏಪ್ರಿಲ್ ನಲ್ಲಿ 41.60 ಲಕ್ಷ ಬಾಕ್ಸ್ ಮಾರಾಟವಾಗಿತ್ತು. ಪ್ರಸಕ್ತ ಏಪ್ರಿಲ್ ನಲ್ಲಿ 50.39 ಲಕ್ಷ ಬಾಕ್ಸ್ ಮಾರಾಟವಾಗಿದ್ದು, ಪ್ರಸಕ್ತ ಏಪ್ರಿಲ್‌ನಲ್ಲಿ ಶೇ.21.13 ಬೆಳವಣಿಗೆಯಾಗಿದೆ. ಈ ಮೂಲಕ 13 ವರ್ಷದ ದಾಖಲೆ ಉಡೀಸ್‌ ಮಾಡಿದೆ.

3688 ಕೋಟಿ ರೂ.ಆದಾಯ ಸಂಗ್ರಹ

2023 ಜುಲೈನಲ್ಲಿ 66.22 ಲಕ್ಷ ಬಾಕ್ಸ್‌ ಐಎಂಎಲ್‌ ಮದ್ಯ ಮಾರಾಟವಾಗಿದ್ದೇ ಕಳೆದ 13 ವರ್ಷಗಳಲ್ಲಿನ ದಾಖಲೆಯಾಗಿತ್ತು. ಈ ದಾಖಲೆಯನ್ನು ಏಪ್ರಿಲ್‌ನ ಮದ್ಯ ಮಾರಾಟ ಹಿಂದಿಕ್ಕಿದೆ. 2025 ಏಪ್ರಿಲ್‌ನಲ್ಲಿ ಮದ್ಯ ಮರಾಟದಿಂದ ಒಟ್ಟಾರೆ 2904 ಕೋಟಿ ರೂಪಾಯಿ ರಾಜಸ್ವ ಸಂಗ್ರಹವಾಗಿತ್ತು. ಪ್ರಸಕ್ತ ಏಪ್ರಿಲ್‌ನಲ್ಲಿ 3688 ಕೋಟಿ ರೂಪಾಯಿ ರಾಜಸ್ವ ಸಂಗ್ರಹವಾಗಿವಾಗಿದೆ.

ದಾಖಲೆ ಮಟ್ಟದ ಮದ್ಯ ಮಾರಾಟಕ್ಕೆ ಕಾರಣವೇನು?

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕೇರಳ ಮತ್ತು ತಮಿಳುನಾಡು ವಿಧಾನ ಸಭೆಗೆ ಏಪ್ರಿಲ್‌ನಲ್ಲಿ ನಡೆದ ಚುವಾವಣೆಯು ರಾಜ್ಯದಲ್ಲಿ ಮದ್ಯ ಮಾರಾಟ ಹೆಚ್ಚಳವಾಗಿರಬಹುದು ಎನ್ನಲಾಗಿದೆ. ಮತದಾನಕ್ಕೂ ಮುನ್ನ ಈ ರಾಜ್ಯಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಆದ್ದರಿಂದ ಕೇರಳ, ತಮಿಳುನಾಡಿಗೆ ಹೊಂದಿಕೊಂಡ ರಾಜ್ಯದ ಗಡಿ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ. ಅಷ್ಟೇ ಅಲ್ಲದೇ ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯೂ ಮದ್ಯ ಮಾರಾಟ ಹೆಚ್ಚಳವಾಗಲು ಕಾರಣವಾಗಿರಬಹುದು ಎನ್ನಲಾಗುತ್ತಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿಶ್ರೀ ಸಾಯಿ ಕಾಲೇಜಿನ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ವಿಧಾನ ಪರಿಷತ್ ಸದಸ್ಯ  ಸ್ಥಾನಕ್ಕೆ ಐದನೇ ಬಾರಿ ಆಯ್ಕೆಯಾದ ಶಶೀಲ್. ಜಿ. ನಮೋಶಿ ಅವರಿಗೆ ಹೊಸಪೇಟೆ ಯಲ್ಲಿ ಅದ್ಧೂರಿ ಸ್ವಾಗತ*ಬಿಜೆಪಿ ಮೋರ್ಚಾ ಪದಾಧಿಕಾರಿಗಳ ಮಹತ್ವದ ಸಭೆ*ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವಿಶ್ವವಿದ್ಯಾಲಯ ಬಾಸ್ಕೆಟ್‌ಬಾಲ್ ತಂಡಕ್ಕೆ ತನ್ವೀರ್ ಆಯ್ಕೆಶ್ರೀ ವಿಶ್ವಗುರು ಸೌಹಾರ್ದ ಸೊಸೈಟಿ  ಅಧ್ಯಕ್ಷರಾಗಿ ಅರವಿಂದ ಬಡಕುಂದ್ರಿ, ಉಪಾಧ್ಯಕ್ಷರಾಗಿ ಬರಮಪ್ಪ ನಾಗನೂರ ಆಯ್ಕೆ.ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ