Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂತಾರ-ಅಧ್ಯಾಯ 1 ಟ್ರೇಲರ್  ಕನ್ನಡ ಚಿತ್ರಪ್ರೇಮಿಗಳಿಂದ  








'ಕಾಂತಾರ-ಅಧ್ಯಾಯ 1' ಕನ್ನಡ ಟ್ರೇಲರ್ ಹಾಗೂ ಸ್ಟಾರ್ ನಟರುಗಳಿಂದ ಉಳಿದ 5 ಭಾಷೆಗಳ ಟ್ರೈಲರ್ ಬಿಡುಗಡೆಯಾಗಿದೆ.

     ಹೃತಿಕ್ ರೋಷನ್, ಶಿವಕಾರ್ತಿಕೇಯನ್, ಪೃಥ್ವಿರಾಜ್ ಸುಕುಮಾರನ್, ಪ್ರಭಾಸ್ ಅವರಿಂದ, ವಿಶ್ವವೇ ಎದುರು ನೋಡುತ್ತಿರುವ ಕಾಂತಾರ ಅಧ್ಯಾಯ 1' ಚಿತ್ರದ ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಯ ಟ್ರೇಲರ್ ಬಿಡುಗಡೆಯಾಗಿದೆ.

     ಆರಂಭದಿಂದಲೂ ಸಾಕಷ್ಟು ಕುತೂಹಲ, ಕಾತುರ  ಮೂಡಿಸಿರುವ, ಹೊಂಬಾಳೆ ಫಿಲಂಸ್ ನಿರ್ಮಾಣ ಹಾಗೂ ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನದ,  ಬಹು ನಿರೀಕ್ಷಿತ

'ಕಾಂತಾರ-ಅಧ್ಯಾಯ 1' ಚಿತ್ರವು ಸಪ್ತ ಭಾಷೆಗಳಲ್ಲಿ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದ್ದು, ಅದಕ್ಕೂ ಮುನ್ನ ಟ್ರೇಲರನ್ನು ಆಯಾ ಭಾಷೆಗಳ ಸ್ಟಾರ್ ನಟರುಗಳು ಬಿಡುಗಡೆ ಮಾಡಿದರು. ಹಿಂದಿ ಟ್ರೇಲರ್ ಅನ್ನು ಹೃತಿಕ್ ರೋಶನ್, ತಮಿಳಿನ ಟ್ರೇಲರ್ ನ ಶಿವಕಾರ್ತಿಕೇಯನ್, ಮಲಯಾಳಂ- ಪೃಥ್ವಿರಾಜ್ ಸುಕುಮಾರನ್ ಹಾಗೂ ತೆಲುಗು ಭಾಷೆಯಲ್ಲಿ ಪ್ರಭಾಸ್ ಅವರು ಅನಾವರಣ ಮಾಡಿದರು.

ಕನ್ನಡದ ಕಲಾಭಿಮಾಗಳಿಂದಲೇ ಕನ್ನಡದ 'ಕಾಂತಾರ-1' ಚಿತ್ರದ ಟ್ರೇಲರ್ ಬಿಡುಗಡೆಯಾಗಿರುವುದು ವಿಶೇಷ.

     ಚಿತ್ರದ ಬಿಡುಗಡೆಗೆ ಕೆಲವೇ ದಿನಗಳು ಬಾಕಿಯಿದ್ದು, ಈಗಾಗಲೇ ರಿಲೀಸಾಗಿರುವ  ಚಿತ್ರದ ಮೇಕಿಂಗ್ ವಿಡಿಯೋ, ಪೋಸ್ಟರ್ ಗಳಿಗೆ ಫಿದಾ ಆಗಿರುವ ಅಭಿಮಾನಿಗಳು ಅಕ್ಟೋಬರ್ 2ರಂದು ಕಾಂತಾರ-1 ಚಿತ್ರವನ್ನು ತೆರೆ ಮೇಲೆ ವೀಕ್ಷಿಸಲು  ಕಾತುರದಿಂದ ಕಾಯುತ್ತಿದ್ದಾರೆ.

     ಬಿ. ಅಜನೀಶ್ ಲೋಕನಾಥ್  ಸಂಗೀತ ನಿರ್ದೇಶನ,  ಅರವಿಂದ್ ಎಸ್. ಕಶ್ಯಪ್  ಛಾಯಾಗ್ರಹಣ ಹಾಗೂ ಪ್ರಗತಿ ಶೆಟ್ಟಿ  ವಸ್ತ್ರ ವಿನ್ಯಾಸ 'ಕಾಂತಾರ-೧' ಚಿತ್ರಕ್ಕಿದೆ.

ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಅವರುಗಳು  ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

     'ಕಾಂತಾರ-ಅಧ್ಯಾಯ 1. ಕಲೆ, ಭಕ್ತಿ ಮತ್ತು ಶಕ್ತಿಯ ಮಹತ್ವವನ್ನು ಒಳಗೊಂಡ ಚಿತ್ರವಾಗಿದ್ದು, ಸದಭಿರುಚಿಯ ಚಿತ್ರಗಳನ್ನೇ ನಿರ್ಮಾಣ ಮಾಡುತ್ತಾ ಬಂದಿರುವ ಹೊಂಬಾಳೆ ಫಿಲಂಸ್ ನಿಂದ ಮತ್ತೊಂದು ಅದ್ಭುತ ಈ ಚಿತ್ರವನ್ನು ವೀಕ್ಷಿಸಲು ವಿಶ್ವದಾದ್ಯಂತ ಜನರು ಕಾತುರದಿಂದ ಕಾಯುತ್ತಿದ್ದಾರೆ.
















Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ