Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಕರಡಿ ಸಂಗಣ್ಣ ರಾಜೀನಾಮೆ

ರೆಬೆಲ್ ಸಂಸದಗೆ ಕಾಂಗ್ರೆಸ್ ಗಾಳ - ಸಂಸದ ಕರಡಿ ಸಂಗಣ್ಣ ನಿವಾಸಕ್ಕೆ ಶಾಸಕ ಸವದಿ ಭೇಟಿ - ಸುದೀರ್ಘ ಚರ್ಚೆ

ಕೊಪ್ಪಳ ಏ.೧೬ : ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಕರಡಿ ಸಂಗಣ್ಣ ಅವರು ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಸಂಸದ ಸಂಗಣ್ಣ ಕರಡಿ ನಿವಾಸಕ್ಕೆ ಲಕ್ಷ್ಮಣ ಸವದಿ ಬೇಟಿ ನೀಡಿ ಸುದೀರ್ಘ ಚರ್ಚೆ ನಡೆಸಿದ್ದರು. ಅದರ ಫಲವಾಗಿ ಈಗ ಸಂಗಣ್ಣ ಕರಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಇ-ಮೇಲ್ ಮೂಲಕ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದು, ಇದನ್ನು ಅಂಗೀಕಾರ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಇವರು ನಾಳೆ ಕಾಂಗ್ರೆಸ್ ಸೇರುವ ಸಾದ್ಯತೆ ಇದೆ.

ಕೊಪ್ಪಳ ಲೋಕಸಭಾ ಕ್ಷೇತ್ರದ ಹಾಲಿ ಸಂಸದರೂ ಆಗಿದ್ದ ಕರಡಿ ಸಂಗಣ್ಣ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್ ಕೊಡದೇ ಹೊಸ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಆರಂಭದಿಂದಲೂ ಅಸಮಾಧಾನ ಹೊರ ಹಾಕಿದ್ದ ಕರಡಿ ಸಂಗಣ್ಣ ಅವರು, ನಮ್ಮ ಲೋಕಸಭಾ ಟಿಕೆಟ್ ಅನ್ನು ಪುನಃ ಬದಲಾಯಿಸಿ ತಮಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದರು. ಇನ್ನೋಂದು ಸಂಗಣ್ಣ ಕರಡಿ ಅವರಿಗೆ ಕಾಂಗ್ರೆಸ್ ಗಾಳ ಹಾಕಿತ್ತು. ಇದ್ಯಾವುದಕ್ಕೂ ಬಿಜೆಪಿ ಹೈಕಮಾಂಡ್ ಆಗಲೀ ಅಥವಾ ರಾಜ್ಯ ಬಿಜೆಪಿ ನಾಯಕರಾಗಲಿ ಸೊಪ್ಪು ಹಾಕಲಿಲ್ಲ. ಇದರಿಂದಾಗಿ ಮನನೊಂದ ಸಂಸದ ಕರಡಿ ಸಂಗಣ್ಣ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಇಮೇಲ್ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಸಂಗಣ್ಣ ಕರಡಿ ತಿಳಿಸಿದ್ದಾರೆ.

ಇಂದು ಬಿಜೆಪಿ ರೆಬೆಲ್ ಸಂಸದ ಕರಡಿ ಸಂಗಣ್ಣ ನಿವಾಸಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿದ್ದು ಕಾಂಗ್ರೆಸ್ ಸೇರುತ್ತಾರೆ ಎಂಬ ವಿಷಯಕ್ಕೆ ಮತ್ತಷ್ಟು ಪುಷ್ಠಿ ನೀಡಿದಗಿತ್ತು, ಈಗ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ಖಚಿತವಾದಂತಾಗಿದೆ.
ಭೇಟಿ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸವದಿ, ಕಾಂಗ್ರೆಸ್ ಪಕ್ಷಕ್ಕೆ ಬರುವುದರ ಬಗ್ಗೆ ನಾವು ಮಾತಾಡಿಲ್ಲ. ಅದಕ್ಕೆ ಇನ್ನೂ ಸಮಯ ಇದೆ, ಅದನ್ನ ಸಂಗಣ್ಣ ಅವರು ತೀರ್ಮಾನ ಮಾಡ್ತಾರೆ ಎಂದಿದ್ದರು. ಅವರೂ ರಾಜಕೀಯ ನೆಲೆ ಹುಡುಕಿ ಕೊಳ್ಳಬೇಕು ಅದನ್ನ ಅವರು ಹಾಗೂ ಅವರ ಕುಟುಂಬ ಸದಸ್ಯರು ತೀರ್ಮಾನ ಮಾಡುತ್ತಾರೆ. ಸಂಸದ ಸಂಗಣ್ಣ ಕರಡಿ, ನಾನು ಸ್ನೇಹಿತರು. ಕುಶಲೋಪರಿ ವಿಚಾರಿಸಲು ಅವರ ಮನೆಗೆ ಬಂದಿರುವೆ. ಪಕ್ಷ ಬದಲಾವಣೆ, ರಾಜಕೀಯ ನಡೆ ಬಗ್ಗೆ ಅವರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದರು.

https://hasirukranti.in/mla-savadi-visited-the-residence-of-mp-karadi-sanganna-congress-attacked-the-rebel-mp/

ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ನಾಮಪತ್ರ ಸಲ್ಲಿಕೆ ಇರುವ ಕಾರಣ ಕೊಪ್ಪಳಕ್ಕೆ ಬಂದಿರುವೆ. ಸಂಗಣ್ಣ ಕರಡಿ ನನ್ನ ಸ್ನೇಹಿತ. ಬಿಜೆಪಿಯಲ್ಲಿ ತತ್ವ, ಸಿದ್ಧಾಂತ ಬದಿಗಿರಿಸಿದ್ದಾರೆ. ಹೊಸ ರಾಜಕಾರಣ ಶುರುವಾಗಿದೆ. ಸಂಗಣ್ಣ ಸಾಕಷ್ಟು ಕೆಲಸ ಮಾಡಿದ್ದಾರೆ. ಇನ್ನೊಂದು ಬಾರಿ ಅವಕಾಶ ನೀಡಬಹುದಿತ್ತು. ಈಗ ಕಾಲ ಮಿಂಚಿದೆ. ಅವರ ಬದಲು ಬೇರೆಯವರಿಗೆ ಟಿಕೆಟ್ ನೀಡಿದ್ದಾರೆ. ನಾನು ಬೇರೆ ಪಕ್ಷದಲ್ಲಿ ಇದ್ದರೂ ಕೊಪ್ಪಳಕ್ಕೆ ಬಂದಾಗ ಅವರ ಮನೆಗೆ ಬರುತ್ತೇನೆ. ಅವರು ಬೆಳಗಾವಿಗೆ ಬಂದಾಗ ನಮ್ಮ ಮನೆಗೆ ಬರುತ್ತಾರೆ ಎಂದರು.

ನಾನು ಈ ಹಿಂದೆ ಸಂಗಣ್ಣನನ್ನು ಬಿಜೆಪಿಗೆ ಕರೆ ತಂದಿದ್ದೆ. ೧೫ ವರ್ಷ ಬಿಜೆಪಿಯಲ್ಲಿ ಇದ್ದುಕೊಂಡು ಕ್ಷೇತ್ರದ ಸೇವೆ ಮಾಡಿದ್ದಾರೆ. ನಮ್ಮ ನಡುವೆ ಸ್ನೇಹ ಇರುವ ಕಾರಣ ನಾನು ಬಂದಿರುವೆ. ಕಾಂಗ್ರೆಸ್ಗೆ ಬರುವಂತೆ ನಾನೂ ಕರೆದಿಲ್ಲ. ಅವರೂ ಹೇಳಿಲ್ಲ. ರಾಜಕೀಯ ನೆಲೆ ಕಂಡುಕೊಳ್ಳಬೇಕಿದೆ. ಬಿಜೆಪಿಯಲ್ಲಿದ್ದುಕೊಂಡು ಅಥವಾ ಬೇರೆಡೆ ಹೋಗಿ ಕಂಡುಕೊಳ್ಳಬೇಕೆಂಬ ನಿರ್ಧಾರ ತೆಗೆದುಕೊಳ್ಳಬೇಕಾದವರು ಸಂಗಣ್ಣ ಹಾಗೂ ಅವರ ಕುಟುಂಬದವರು. ಕಾಲ ಎಲ್ಲ ನಿರ್ಧರಿಸಲಿದೆ. ಅವರಿಗೆ ಒಳ್ಳೆಯ ಭವಿಷ್ಯ ಸಿಗಲಿ ಎಂಬುದು ನನ್ನ ಅಪೇಕ್ಷೆ ಎಂದು ಮಾಹಿತಿ ನೀಡಿದ್ದರು.

ಇನ್ನೂ ಕಾಲವಿದೆ. ಬಂಗಾರ, ವಜ್ರ ಎಲ್ಲೇ ಇದ್ದರೂ ಅದಕ್ಕೆ ಬೆಲೆ ಇರುತ್ತದೆ. ಓಡುವ ಕುದುರೆಗೆ ಜಿದ್ದು ಕಟ್ಟಲು ಎಲ್ಲರೂ ಮುಂದೆ ಬರುತ್ತಾರೆ. ಸಂಗಣ್ಣ ಓಡುವ ಕುದುರೆ. ಅದು ಬಿಜೆಪಿಗೆ ಗೊತ್ತಿಲ್ಲ, ವಿನಾಶ ಕಾಲ ಬಂದಿದ್ದಕ್ಕೆ ಈ ರೀತಿ ವರ್ತಿಸುತ್ತಿದ್ದಾರೆಂದು ಬಿಜೆಪಿಯನ್ನು ಸವದಿ ಕುಟುಕಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ