Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಚನ ಸಾಹಿತ್ಯಕ್ಕೆ ದೇವರ ದಾಸಿಮಯ್ಯನವರ ಕೊಡುಗೆ ಅಪಾರವಾದದ್ದು: ಕರ್ಣಕುಮಾರ

ಕೊಪ್ಪಳ ಮಾರ್ಚ್ 23, (ಕರ್ನಾಟಕ ವಾರ್ತೆ): ವಚನ ಸಾಹಿತ್ಯಕ್ಕೆ ದೇವರ ದಾಸಿಮಯ್ಯನವರ ಕೊಡುಗೆ ಅಪಾರವಾಗಿದ್ದು, ವಚನಗಳ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಿದರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಅವರು ಹೇಳಿದರು.
ಸೋಮವಾರದಂದು ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಶ್ರೀ ದೇವರ ದಾಸಿಮಯ್ಯ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದಾಸಿಮಯ್ಯ ಅವರ ವಚನಗಳು ಸರಳತೆ, ಸಮಾನತೆ ಹಾಗೂ ಭಕ್ತಿ ತತ್ವಗಳನನು ಸಾರುತ್ತವೆ. ಅವರು ಜಾತಿ ಬೇಧವನ್ನು ವಿರೋಧಿಸಿ, ಮಾನವೀಯ ಮೌಲ್ಯಗಳನ್ನು ಉತ್ತೇಜಿಸಿದ ಶ್ರೇಷ್ಠ ವಚನಕಾರರು. ಅವರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಅವರು ಹೇಳಿದರು.
ಗಂಗಾವತಿಯ ಮುರಹರಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಸಾಹಿತಿ ಅಮರಮ್ಮ ಕೋಚಿ ಅವರು ದೇವರ ದಾಸಿಮಯ್ಯ ಅವರ ಕುರಿತು ನೀಡಿದ ವಿಶೇಷ ಉಪನ್ಯಾಸದಲ್ಲಿ ದಾಸಿಮಯ್ಯನವರು ಕನ್ನಡದ ಮೊದಲ ವಚನಕಾರರಲ್ಲಿ ಒಬ್ಬರು. ಇವರನ್ನು ವಚನ ಸಾಹಿತ್ಯದ ಆದ್ಯ ವಚನಕಾರ ಎಂದು ಕರೆಯಲಾಗುತ್ತದೆ. ಅಂದಿನ ಕಾಲದ ಜನರಲ್ಲಿದ್ದ ಮೂಢನಂಬಿಕೆ, ಮೇಲು-ಕೀಳು ಎಂಬ ಭೇದಭಾವವನ್ನು  ಇವರು ತಮ್ಮ ಸರಳ ಮಾತುಗಳ ಮೂಲಕ ತಿದ್ದಿದರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪ ತಹಶೀಲ್ದಾರ್ ಗವಿಸಿದ್ದಪ್ಪ ಹಾಗೂ ನೇಕಾರ ಸಮುದಾಯದ ಅಧ್ಯಕ್ಷರಾದ ಶಿವಶಂಕರಪ್ಪ ಚೆನ್ನಿ, ಶಿವಶಂಕರಪ್ಪ ಕರಡಕಲ ಹಾಗೂ ಸಮಾಜ ಬಂಧುಮಿತ್ರರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮೊದಲು ನಗರದ ಗೌರಿಶಂಕರ ದೇವಸ್ಥಾನ ಆವರಣದಿಂದ ಸಾಹಿತ್ಯ ಭವನದವರೆಗೆ ಶ್ರೀ ದೇವರ ದಾಸಿಮಯ್ಯ ಅವರ ಭಾವಚಿತ್ರದ ಮೆರವಣಿಗೆ ಜರುಗಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ