ವರದಿ ಸಿದ್ಧಪಡಿಸಲು ಡಾ ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿತ್ತು. ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಸಂಬಂಧಪಟ್ಟ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಅನುಮೋದನೆಗಾಗಿ ಶಾಸಕಾಂಗದ ಮುಂದೆ ಪ್ರಸ್ತಾಪಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.
ಆರಂಭದಲ್ಲಿ ಖಾಸಗಿ ವಲಯಕ್ಕೆ ಮುಟ್ಟಿನ ರಜೆ ನೀತಿ ಪರಿಚಯಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಪೂರ್ಣ ಪ್ರಮಾಣದಲ್ಲಿ ನೀತಿ ರೂಪಿಸಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಮೊಹ್ಸಿನ್ ಹೇಳಿದ್ದಾರೆ. ಮುಟ್ಟಿನ ರಜೆ ವಿಚಾರವಾಗಿ ಒಂದು ನೀತಿಯನ್ನು ಹೊಂದುವ ಅಗತ್ಯತೆಯ ಬಗ್ಗೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಅನುಗುಣವಾಗಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಅವರು ಹೇಳಿದ್ದಾರೆ.