Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಗ್ರಂಥಗಳ ಪಾರಾಯಣ ಅಗತ್ಯ: ಕಾಶೀ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರು


ಗದಗ: ಇಷ್ಟಲಿಂಗ ಪೂಜೆಯನ್ನು ಬಹಿರಂಗವಾಗಿ ವೈಭವಯುತವಾಗಿ ಆಚರಿಸಿಕೊಂಡು ಬರುವಲ್ಲಿ ರಂಭಾಪುರಿ ಪೀಠದ ವೀರಗಂದಾಧರ ಜಗದ್ಗುರುಗಳು ಪ್ರಮುಖ ಕಾರಣೀಕರ್ತರು ಎಂದು ಕಾಶೀ ಪೀಠದ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರು ಹೇಳಿದರು.


ನಗರದ ಎಪಿಎಂಸಿ ಆವರಣದಲ್ಲಿರುವ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಜಗದ್ಗುರು ಪಂಚಾಚಾರ್ಯ ಸೇವಾ ಸಂಘ, ಜಗದ್ಗುರು ವಿಶ್ವಾರಾಧ್ಯ ಜನಕಲ್ಯಾಣ ಪ್ರತಿಷ್ಠಾನ ಹಾಗೂ ಜಗದ್ಗುರು ವಿಶ್ವಾರಾಧ್ಯ ಎಜ್ಯೂಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಆಷಾಢ ಮಾಸದ ಅಂಗವಾಗಿ ಗುರುವಾರ ಜರುಗಿದ ಮಹಿಳೆಯರಿಗೆ ಉಡಿ ತುಂಬುವ ಹಾಗೂ 'ಸಿದ್ಧಾಂತ ಶಿಖಾಮಣಿ' ಆಧ್ಯಾತ್ಮಿಕ ಪ್ರವಚನ ಮಂಗಲೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.


ರಂಭಾಪುರಿ ಪೀಠದ ವೀರಗಂಗಾಧರ ಜಗದ್ಗುರುಗಳ ತರುವಾಯ ಕಾಶೀ ಪೀಠದ ನೂತನ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರು ನೆರವೇರಿಸಿಕೊಂಡು ಬಂದಿದ್ದಾರೆ ಎಂದರು.


ಸರ್ವಾರಾಧ್ಯನಾಗಿರುವ ಶಿವನನ್ನು ದೇಹದ ಮೇಲಿರಿಸಿಕೊಂಡು, ಲಿಂಗದೊಂದಿಗೆ ಬದುಕಿ, ಲಿಂಗದಲ್ಲಿ ಲೀನವಾಗುವ ಭಾಗ್ಯ ಮನುಷ್ಯನಿಗೆ ಮಾತ್ರ ಲಭಿಸಿದೆ. ಪ್ರತಿಯೊಬ್ಬರೂ ಪೂಜೆ ಮಾಡುವಾಗ ಎಷ್ಟು ಭಾವದೊಳಗೆ ಬೆರೆಯುತ್ತೇವೆ ಅಷ್ಟು ಪುಣ್ಯ ಸಿಗುತ್ತದೆ ಎಂದರು.


ನಮ್ಮ ದೇಹದೊಳಗಿನ ಜೀವಕೋಶಗಳು ಎಲ್ಲಿಯವರೆಗೆ ಸಶಕ್ತವಾಗಿರುತ್ತವೆ ನಮ್ಮಲ್ಲಿ ರೋಗನಿರೋಧಕ ಶಕ್ತಿ ಇರುತ್ತದೆ. ಜೀವಕೋಶಗಳು ಸಶಕ್ತವಾಗಿರಲು ನಮ್ಮ ಮನಸ್ಸಿನ ಸ್ಥಿತಿ ಪ್ರಮುಖವಾಗಿರುತ್ತವೆ. ನಾವು ನಿತ್ಯ ಭಕ್ತಿಯಿಂದ ತನ್ಮಯತೆಯಿಂದ ಪೂಜೆ ಮಾಡಬೇಕು. ಧರ್ಮಗ್ರಂಥಗಳನ್ನು ಪಾರಾಯಣ ಮಾಡುವಂತಹ ಸಮಯ ರೂಢಿಸಿಕೊಂಡರೆ ಜೀವಕೋಶಗಳು ಸಶಕ್ತಗೊಂಡು ನಿರೋಗಿಗಳಾಗಿ ಆರೋಗ್ಯಂತರಾಗಿರುತ್ತವೆ ಎಂದು ಹೇಳಿದರು.


ಕಾಶೀ ಪೀಠ ಗದಗ ಮಹಾನಗರಕ್ಕೆ 25 ವರ್ಷಗಳ ಹಿಂದೆ ಆಗಮಿಸಿದಾಗ 21ದಿನಗಳ ಕಾಲ ಆಷಾಢ ಮಾಸದಲ್ಲಿ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಹಾಗೂ ಗುರುಪೂರ್ಣಿಮೆ ಕಾರ್ಯಕ್ರಮ ಮಾಡಿದ್ದೇವು. ಪ್ರಸಕ್ತ ವರ್ಷ ನೂತನ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರು ನಡೆಸಿದ್ದಾರೆ ಎಂದು ಹೇಳಿದರು


ಕಾಶೀ ಪೀಠದ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರು ಮಾತನಾಡಿ, ಅನೇಕ ಜನ್ಮಗಳ ಪುಣ್ಯದ ಫಲವಾಗಿ ಮಾನವ ಜನ್ಮ ಸಿಕ್ಕಿದೆ. ಗುರುವಿನ ಸಾನ್ನಿಧ್ಯದಲ್ಲಿ ದೇಹವನ್ನು ದಂಡಿಸುವ ಮೂಲಕ ನಮ್ಮ ಪೂರ್ಣಾಂಗಗಳು ಶರಣಾಗತಿ ಹೊಂದಿದಾಗ ಗುರುವಿನ ಕೃಪಾಕಟಾಕ್ಷ ಒಲಿಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ