Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿ ಅನುದಾನ ಬಳಕೆಯಾಗಲಿ : ರಾಹುಲ್ ಶಿಂಧೆ

"ಕಾಯಕ ಗ್ರಾಮ” ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ


ಬೆಳಗಾವಿ: ಉಗಾರ ಗ್ರಾಮ ಪಂಚಾಯತಿ 2025-ನೇ ಸಾಲಿನಲ್ಲಿ ಶೇ 100 ಕರ ವಸೂಲಾತಿ ಮಾಡಿದ್ದು, ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿ ಈ ಅನುದಾನ ಬಳಕೆಯಾಗಲಿ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.

ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬಿಕೆ ಗ್ರಾಮದ ಗ್ರಾಪಂ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ, ಗ್ರಾಮ ಪಂಚಾಯತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ “ಕಾಯಕ ಗ್ರಾಮ” ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಡಿಯುವ ನೀರು, ಗ್ರಂಥಾಲಯ, ಅಂಗನವಾಡಿ, ಕೂಸಿನ ಮನೆ ಕೇಂದ್ರ ಅಚ್ಚುಕಟ್ಟಾಗಿ ಕಾರ್ಯನಿರ್ವಾಹಿಸುತಿದ್ದು ಇನ್ನಷ್ಟು ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಗ್ರಾಮ ಪಂಚಾಯತಿಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವುದು “ಕಾಯಕ ಗ್ರಾಮ” ಕಾರ್ಯಕ್ರಮದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಆಯ್ಕೆ ಮಾಡಲಾಗಿರುವ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ, ಗ್ರಾಮಗಳ ಅಭಿವೃದ್ಧಿಗೆ ಕ್ರಮವಹಿಸಲಾಗುವುದು. ಒಂದೇ ಆವರಣದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆ ಇದ್ದು, ಶಿಕ್ಷಕರ ಕೊರತೆಯಿದೆ ಎರಡು ಶಾಲೆ ಮರ್ಜ್ ಮಾಡಲು ಮಕ್ಕಳ ಬೇಡಿಕೆಯಿದೆ ಮುಂದಿನ ದಿನ ಎಲ್ಲ ಮಕ್ಕಳ ಒಂದೇ ಸೂರಿನಡಿ ಕಲಿಕೆಗೆ ಅವಕಾಶ ಮಾಡಲಾಗುವುದು ಎಂದು ತಿಳಿಸಿದರು.


ಶಾಲಾ ಮಕ್ಕಳೊಂದಿಗೆ ಸಂವಾದ :


ಇಲ್ಲಿನ ಶಾಸಕರ ಮಾದರಿ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಗೆ ಭೇಟಿ ನೀಡಿದ ಮನ್ಯರು ಮಕ್ಕಳೊಂದಿಗೆ ಸಂವಾದ ನಡೆಸಿದರು. ಸ್ಮಾರ್ಟ್ ತರಗತಿ ಹಾಗೂ 7 ತರಗತಿ ಪ್ರಶ್ನೆಪತ್ರಿಕೆ, ಉತ್ತರ ಪತ್ರಿಕೆಗಳ ಪರಿಶೀಲಿಸಿದರು. ಇದೇ ವೇಳೆ ಗಣಿತ ಲೆಕ್ಕ ಬಿಡಿಸಿದ ಮಕ್ಕಳಿಗೆ ಗುಲಾಬಿ ಹೂವು ನೀಡಿ ಅಭಿನಂದಿಸಿದರು.


ಕೂಸಿನ ಮನೆಗೆ ಭೇಟಿ:

ಬಳಿಕ ಶಾಲಾ ಆವರಣದಲ್ಲಿರುವ ನರೇಗಾ ಯೋಜನಯ ಕೂಸಿನ ಮನೆ ಕೇಂದ್ರಕ್ಕೆ ಭೇಟಿ ನೀಡಿ ಆರೈಕೆದಾರರಿಗೆ ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ತಿಳಿಸಿದರು.


ಎನ್ ಆರ್ ಎಲ್ ಎಂ ಸಂಜೀವಿನಿ ಒಕ್ಕೂಟದ ಕಚೇರಿ ವೀಕ್ಷಣೆ ಹಾಗೂ ಮಹಿಳೆಯರು ತಯಾರಿಸಿದ ಆಹಾರ. ಪದಾರ್ಥ, ಕರ ಕುಶಾಲ ವಸ್ತು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.


ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸನ್ಮಾನ :

2025-26 ನೇ ಸಾಲಿನಲ್ಲಿ ಕಾಗವಾಡ ತಾಲೂಕಿನ 8 ಗ್ರಾಮ ಪಂಚಾಯತ ವ್ಯಾಪ್ತಿ ಶೇ 100 ಕರ ವಸೂಲಾತಿ ಮಾಡಿ ಜಿಲ್ಲೆಗೆ ಪ್ರತಮ ಸ್ಥಾನ ಪಡೆದ ತಾಲೂಕಿನ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಮ್ಯಾನರು ಸನ್ಮಾನ ಮಾಡಿದರು.


ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು ಹಾಗೂ ಅಗತ್ಯ ಯೋಜನೆ ರೂಪಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕ ಶ್ರೀ ರವಿ ಬಂಗಾರೆಪ್ಪನವರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ವೀರಣ್ಣ ವಾಲಿ, ಅಥಣಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಶಿವಾನಂದ ಕಲ್ಲಾಪುರ, ಸಹಾಯಕ ನಿರ್ದೇಶಕರಾದ ಶ್ರೀ ಎ ಡಿ. ಅನ್ಸಾರಿ, ಶ್ರೀ ಶಿವಾನಂದ ಸನಾಳ, ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗಪ್ಪ ಕಾಂಬಳೆ ವಿವಿಧ ಇಲಾಖೆಯ ಜಿಲ್ಲಾ, ತಾಲೂಕು ಹಾಗೂ ಗ್ರಾಪಂ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ