Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮನಿ ಲಾಂಡರಿಂಗ್ ಪ್ರಕರಣ: ಕೇಜ್ರಿವಾಲ್ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ

ನವದೆಹಲಿ,ಏ.01: ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಮವಾರ ದೆಹಲಿ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿ ಇಂದು ಮುಗಿದಿದ್ದು, ಆರೋಪಿಯನ್ನು ರೂಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಲಾಯಿತು. ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು, ಆರೋಪಿಯನ್ನು ಏಪ್ರಿಲ್ 15 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಎಎಪಿ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಮರುದಿನ, ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಆರೋಪಿ ದೆಹಲಿ ಸಿಎಂ ಅನ್ನು ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಗೆ ನೀಡಿದ್ದರು. ನಂತರ ಕೇಜ್ರಿವಾಲ್ ಅವರ ಇಡಿ ಕಸ್ಟಡಿ ಅವಧಿಯನ್ನು ಏಪ್ರಿಲ್ 1 ರವರೆಗೆ ನಾಲ್ಕು ದಿನಗಳ ಕಾಲ ವಿಸ್ತರಿಸಿತ್ತು.

ಕಸ್ಟಡಿ ವಿಚಾರಣೆ ಸಮಯದಲ್ಲಿ ಐದು ದಿನಗಳಲ್ಲಿ ಕೇಜ್ರಿವಾಲ್ ಅವರ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಅವರು ತಪ್ಪಿಸಿಕೊಳ್ಳುವ ಉತ್ತರ ನೀಡುತ್ತಿದ್ದಾರೆ ಎಂದು ಇಡಿ ಹೊಸ ರಿಮಾಂಡ್ ಅರ್ಜಿಯಲ್ಲಿ ಹೇಳಿತ್ತು. ಕಸ್ಟಡಿ ಅವಧಿಯಲ್ಲಿ ಇತರ ಮೂವರ ಹೇಳಿಕೆಗಳನ್ನು ಸಹ ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ