LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಲೋಕ ಅಖಾಡಕ್ಕೆ ಕೇಜ್ರಿವಾಲ್ ಪತ್ನಿ ಎಂಟ್ರಿ: ಆಪ್‌ ಅಭ್ಯರ್ಥಿಗಳ ಪರ ಪ್ರಚಾರ

ನವದೆಹಲಿ,25: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಪತ್ನಿ ಸುನಿತಾ ಕೇಜ್ರಿವಾಲ್‌ ಅವರನ್ನು ಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಇಳಿಸಲು ಎಎಪಿ ನಿರ್ಧರಿಸಿದೆ.

ದೆಹಲಿ ಮದ್ಯ ಹಗರಣ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ನ್ಯಾಯಾಂಗ ಬಂಧನಲ್ಲಿದ್ದಾರೆ. ಈ ಹಿನ್ನಲೆ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಆಪ್‌ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಕುಲದೀಪ್ ಕುಮಾರ್ ಪರ ಕೊಂಡ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ವಾರಾಂತ್ಯ ಸುನಿತಾ ಅವರ ಮೊದಲ ರ್‍ಯಾಲಿ ನಿಗದಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧಿಸಿರುವ ಉಳಿದ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಸುನಿತಾ ರೋಡ್ ಶೋ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಎಎಪಿ, ಪೂರ್ವ ದೆಹಲಿ, ಪಶ್ಚಿಮ ದೆಹಲಿ, ದಕ್ಷಿಣ ದೆಹಲಿ ಮತ್ತು ನವದೆಹಲಿ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಗುಜರಾತ್ ಮತ್ತು ಪಂಜಾಬ್‌ ರಾಜ್ಯಗಳಲ್ಲೂ ಎಎಪಿ ಅಭ್ಯರ್ಥಿಗಳ ಪರ ಸುನಿತಾ ಪ್ರಚಾರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಜರಾತ್‌ನ ಎಎಪಿ ಘಟಕದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲೂ ಸುನಿತಾ ಹೆಸರಿದೆ.

ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಸುನೀತಾ ಕೇಜ್ರಿವಾಲ್ ಅವರು ವೀಡಿಯೊ ಸಂದೇಶಗಳು ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಮುನ್ನಲೆಗೆ ಬಂದಿದ್ದಾರೆ. ಕೇಜ್ರಿವಾಲ್ ಬಂಧನ ಖಂಡಿಸಿ ದೆಹಲಿಯಲ್ಲಿ ವಿಪಕ್ಷಗಳು ನಡೆಸಿದ ಸಮಾವೇಶದಲ್ಲಿ ಭಾಗಿಯಾಗಿ ಭಾಷಣ ಮಾಡಿದ್ದರು. ಇತ್ತಿಚೇಗೆ ಛತ್ತಿಸ್‌ಘಡದಲ್ಲಿ ನಡೆದ INDIA ಒಕ್ಕೂಟದ ಸಭೆಯಲ್ಲಿ ಅವರು ಪಕ್ಷವನ್ನು ಪ್ರತಿನಿಧಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್