Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ

ಬೆಂಗಳೂರು, ಜನವರಿ 29: ರಾಜ್ಯ ಸರ್ಕಾರಿ ನೌಕರರಿಗೆ  ಖಾದಿ  ಬಟ್ಟೆ ಬಳಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೋರಡಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ರಾಜ್ಯ ಸರ್ಕಾರಿ ನೌರಕರರು ಕಡ್ಡಾಯವಾಗಿ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಿಂದ ಈ ಯೋಜನೆಗೆ ಚಾಲನೆ ದೊರೆಯಲಿದೆ.

ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್​ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿದ್ದಾರೆ.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು

  • ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ, ನೌಕರರು ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವುದು.

  • ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು.



  • ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ, ನೌಕರರಿಗೆ ಶೇ. 5% ಹೆಚ್ಚುವರಿ ರಿಯಾಯಿತಿ ನೀಡುವುದು.

  • ಪುರುಷ ನೌಕರರು ಖಾದಿ ಬಟ್ಟೆಯ ಶರ್ಟ್,ಪ್ಯಾಂಟ್, ಒವರ್ ಕೋಟ್ ಹಾಗೂ ಇತರೆ ಶಿಸ್ತಿನ ಉಡುಗೆಗಳು.

  • ಮಹಿಳಾ ನೌಕರರು ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ, ಚೂಡಿದಾರ್ ಇತರೆ ಶಿಸ್ತಿನ ಉಡುಗೆಗಳು.

  • ಎಂಎಸ್​ಐಎಲ್​ ಸಂಸ್ಥೆಯ ಮೂಲಕ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲು “ಸರ್ಕಾರಿ ನೌಕರರ ಕ್ಯಾಂಟೀನ್” ಪ್ರಾರಂಭಿಸಲು 2026-27ನೇ ಸಾಲಿನ ಆಯ-ವ್ಯಯದಲ್ಲಿ ಈ ಯೋಜನೆಯನ್ನು ಘೋಷಣೆ ಮಾಡುವುದು.



  • ಕೆಎಸ್​ಐಸಿ ಸಂಸ್ಥೆಯು ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳು ಖರೀದಿಸುವ ರೇಷ್ಮೆ ಸೀರೆ ಮತ್ತು ರೇಷ್ಮೆ ವಸ್ತ್ರಗಳಿಗೆ ಹೆಚ್ಚುವರಿ ಶೇ.5% ವಿಶೇಷ ರಿಯಾಯಿತಿ ನೀಡುತ್ತಿರುವ ಮಾದರಿಯಲ್ಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರಿಗೂ ಹೆಚ್ಚುವರಿ ಶೇ. 5% ವಿಶೇಷ ರಿಯಾಯಿತಿ ನೀಡುವುದು.


 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ