Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂತ್ರಸ್ತೆ ಅಪಹರಿಸಿದ ಆರೋಪದಡಿ ಬಂಧಿತ ಹೆಚ್​ಡಿ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ




ಬೆಂಗಳೂರು,14: ಸಂಸದ ಪ್ರಜ್ವಲ್​ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದ ಮೇಲೆ ಎಸ್ ಐಟಿ ಅಧಿಕಾರಿಗಳಿಂದ ಜೈಲುಪಾಲಾಗಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಆಗಿದ್ದು, ಇಂದು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಹೆಚ್​ಡಿ ರೇವಣ್ಣ ಅವರು ಬಿಡುಗಡೆಯಾಗುತ್ತಿದ್ದಂತೆ, ಅವರ ಅಭಿಮಾನಿಗಳು ಜಯ ಘೋಷಣೆ ಹಾಕಿ ಸಂಭ್ರಮಿಸಿದರು. ಕಾರಾಗೃಹದ ಮುಂದೆ ಸೇರಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದರು. ಈ ವೇಳೆ ಗೊಂದಲ ವಾತಾವರಣ ಉಂಟಾಯಿತು.

ಮೇ 4ರಂದು ತಮ್ಮ ತಂದೆ ಹೆಚ್ ಡಿ ದೇವೇಗೌಡರ ನಿವಾಸದಲ್ಲಿಯೇ ಎಸ್ ಐಟಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ರೇವಣ್ಣ ಇಂದು ಜೈಲಿಂದ ಹೊರಬಂದು ನೇರವಾಗಿ ದೇವೇಗೌಡರ ನಿವಾಸಕ್ಕೆ ಆಗಮಿಸಿ ತಂದೆ-ತಾಯಿ ಆಶೀರ್ವಾದ ಪಡೆದರು.

ರೇವಣ್ಣ ಅವರಿಗೆ ಜಾಮೀನು ಸಿಕ್ಕಿರುವ ಬಗ್ಗೆ ಅವರ ಸೋದರ ಜೆಡಿಎಸ್ ಅಧ್ಯಕ್ಷ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ನಡೆದಿರುವ ಅತ್ಯಂತ ಹೀನಾಯ ಘಟನೆಯಿದು. ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಪಡುವುದು ಬೇಡ. ನಾನು ಸಂತೋಷಪಡುತ್ತೇನೆ ಎಂದು ಭಾವಿಸಬೇಡಿ. ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ಇದು ರಾಜ್ಯವೇ ತಲೆ ತಗ್ಗಿಸುವ ಘಟನೆ ಎಂದು ಹೇಳಿದ್ದಾರೆ.


Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*